ಸೋಮವಾರಪೇಟೆ

ಜಿಲ್ಲೆಯ ಎರಡು ಕ್ಷೇತ್ರಗಳೂ ‘ಕೈ’ ವಶ

ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ. ಕೊಡಗಿಗೆ ₹ 200 ಕೋಟಿ ವಿಶೇಷ ಪ್ಯಾಕೇಜ್ ನೀಡಿದೆ.

ಸೋಮವಾರಪೇಟೆ: ಜಿಲ್ಲೆಯಲ್ಲಿ ಕಾಂಗ್ರೆಸ್‌ ಸಂಘಟನೆ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಕೊಡಗಿನ ಎರಡೂ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಗಳೇ ಜಯಗಳಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹೇಳಿದರು.

ಮಂಗಳವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ವಲಯಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪಕ್ಷಕ್ಕೆ ಉತ್ತಮ ಭವಿಷ್ಯವಿವೆ. ಈ ಬಾರಿ ಎರಡೂ ಕ್ಷೇತ್ರ ಕಾಂಗ್ರೆಸ್ ವಶವಾಗಲಿದೆ. ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಪಡೆದು ಎರಡೂ ಕ್ಷೇತ್ರದ ಅಭ್ಯರ್ಥಿಗಳನ್ನು ಚುನಾವಣಾ ಕಣೆಕ್ಕೆ ಇಳಿಸಲಾಗುವುದು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಮುಂದಾಗಬೇಕು ಎಂದು ಕರೆ ನೀಡಿದರು.

ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ. ಕೊಡಗಿಗೆ ₹ 200 ಕೋಟಿ ವಿಶೇಷ ಪ್ಯಾಕೇಜ್ ನೀಡಿದೆ. ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಮಾಡುವ ಮೂಲಕ ಜನರು ಪಕ್ಷದತ್ತ ವಾಲುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಅಧ್ಯಕ್ಷ ಶಿವು ಮಾದಪ್ಪ ಮಾತನಾಡಿ, ಕೊಡಗಿನ ಎರಡೂ ಕ್ಷೇತ್ರದಲ್ಲಿ ಬದಲಾವಣೆ ಬೇಕೆಂಬ ಆಶಯ ಮತದಾರರಲ್ಲಿದೆ. ಬಿಜೆಪಿಯವರ ಪ್ರಶ್ನೆಗಳಿಗೆ ತಕ್ಕ ಉತ್ತರವನ್ನು ಕಾಂಗ್ರೆಸ್ ಮುಖಂಡರು ನೀಡಬೇಕು. ನಮ್ಮ ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗೆ ನಮ್ಮ ಪಕ್ಷದ ಜನಪ್ರತಿನಿಧಿಗಳೇ ಭೂಮಿಪೂಜೆ ನೆರವೇರಿಸಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳಿಂದ ಕಾಡುತ್ತಿದ್ದ ಸಿ ಮತ್ತು ಡಿ ಕೃಷಿ ಭೂಮಿಯ ಸಮಸ್ಯೆಯನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಿ ರೈತರಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಂಡಿದೆ. ಶಾಂತಳ್ಳಿ ಭಾಗದ 6 ಗ್ರಾಮ ಪಂಚಾಯಿತಿಗಳಿಗೆ ₹ 45 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದರು.

ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ರೈತರು ಮತ್ತು ಬಡವರ ಮನೆಗೆ ಕಾಂಗ್ರೆಸ್ ಸರ್ಕಾರದ ಯೋಜನೆಗಳು ಮುಟ್ಟಿವೆ. ಕೊಡಗಿನಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿ ಶಾಸಕರಿದ್ದು, ಇದೀಗ ಇವರುಗಳ ವಿರುದ್ಧವಾಗಿ ಅಭಿಪ್ರಾಯ ವ್ಯಕ್ತಗೊಳ್ಳುತ್ತಿವೆ. ಒಗ್ಗಟ್ಟಿನ ಹೋರಾಟದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಕರೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷ ನಂದಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ ಜಿ.ಪಂ. ಸದಸ್ಯೆ ಕುಮುದಾ ಧರ್ಮಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಕಾಂಗ್ರೆಸ್ ಮುಖಂಡರಾದ ಕೊಲ್ಯದ ಗಿರೀಶ್, ಚಿಣ್ಣಪ್ಪ, ಬಿ.ಬಿ. ಸತೀಶ್, ಅನಂತ್‌ಕುಮಾರ್‌, ಮಿಥುನ್, ರವೀಂದ್ರ, ಮಂಜುಳಾ, ಹಿರಿಯ ಮುಖಂಡರಾದ ಬಗ್ಗನ ತಮ್ಮಯ್ಯ, ಪೂವಮ್ಮ ಉಪಸ್ಥಿತರಿದ್ದರು.

* * 

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಳೆದ ನಾಲ್ಕು ಅವಧಿಯಿಂದ ಕ್ಷೇತ್ರದ ಶಾಸಕಾರಿದ್ದರೂ, ಯಾವುದೇ ಅಭಿವೃದ್ಧಿ ಆಗಿಲ್ಲ
 ಕೆ.ಎಂ. ಲೋಕೇಶ್‌, ಅಧ್ಯಕ್ಷ, ಬ್ಲಾಕ್‌ ಕಾಂಗ್ರೆಸ್‌

Comments
ಈ ವಿಭಾಗದಿಂದ ಇನ್ನಷ್ಟು
‘ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ’

ಸೋಮವಾರಪೇಟೆ
‘ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ’

16 Jan, 2018

ಕುಶಾಲನಗರ
ಕಾಮಗಾರಿ ಕಳಪೆ; ಗ್ರಾಮಸ್ಥರ ಆರೋಪ

ಕಾವೇರಿ ನೀರಾವರಿ ನಿಗಮ ₹ 70 ಲಕ್ಷ ವೆಚ್ಚದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಗುಮ್ಮನಕೊಲ್ಲಿಯಿಂದ ಗೋಪಾಲ್ ಸರ್ಕಲ್ ವರೆಗೆ 2 ಕಿ.ಮೀ ರಸ್ತೆ ಅಭಿವೃದ್ಧಿ...

16 Jan, 2018

ಸೋಮವಾರಪೇಟೆ
ನಿಗಮದ ಸೌಲಭ್ಯ ಪಡೆಯಲು ವಿಶ್ವಕರ್ಮ ಸಮುದಾಯಕ್ಕೆ ಸಲಹೆ

ನಿಗಮಕ್ಕೆ ಕೊಡಗು ಜಿಲ್ಲೆಯಿಂದ ತಮ್ಮನ್ನು ನಾಮನಿರ್ದೇಶಿತ ಸದಸ್ಯನಾಗಿ ಆಯ್ಕೆ ಮಾಡಿದ್ದು, ಜಿಲ್ಲೆಯ ಸಮಾಜದ ಬಾಂಧವರಿಗೆ ಸೌಲಭ್ಯ ತಲುಪಿಸಲು ಶ್ರಮಿಸಲಾಗುವುದು ಎಂದರು.

15 Jan, 2018
ಸನ್ನಿಸೈಡ್‌ಗೆ ಬಂದ ‘ಯುದ್ಧ ಟ್ಯಾಂಕ್‌’

ಮಡಿಕೇರಿ
ಸನ್ನಿಸೈಡ್‌ಗೆ ಬಂದ ‘ಯುದ್ಧ ಟ್ಯಾಂಕ್‌’

15 Jan, 2018
ಸಂಭ್ರಮದಿಂದ ಸಂಕ್ರಾಂತಿ ಆಚರಣೆ

ಮಡಿಕೇರಿ
ಸಂಭ್ರಮದಿಂದ ಸಂಕ್ರಾಂತಿ ಆಚರಣೆ

15 Jan, 2018