ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭವನಗಳು ಜಾಗೃತಿ ಕೇಂದ್ರಗಳಾಗಲಿ’

Last Updated 29 ನವೆಂಬರ್ 2017, 7:37 IST
ಅಕ್ಷರ ಗಾತ್ರ

ಚಾಮರಾಜನಗರ: ‘ಸಮುದಾಯ ಭವನಗಳು ಜಾಗೃತಿ ಕೇಂದ್ರಗಳಾಗಿ ರೂಪುಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ ಆಶಯ ವ್ಯಕ್ತಪಡಿಸಿದರು. ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಲಾದ ಒಕ್ಕಲಿಗರ ಸಮುದಾಯದ ಭವನದ ಲೋಕಾರ್ಪಣೆ ಸಮಾರಂಭವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ಸಮುದಾಯ ಭವನಗಳು ಗ್ರಾಮ ಗಳ ಅಭಿವೃದ್ಧಿಗೆ ಪೂರಕವಾದ ಕೆಲಸಗಳಿಗೆ ಸದ್ಬಳಕೆಯಾಗಬೇಕು. ಅವು ಸಮಾರಂಭಗಳ ಚಟುವಟಿಕೆಗಳಿಗೆ ಸೀಮಿತ ವಾಗಬಾರದು ಎಂದು ಸಲಹೆ ನೀಡಿದರು.

ಭವನ ಉದ್ಘಾಟಿಸಿ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ‘ಭವನ ನಿರ್ಮಾಣಕ್ಕೆ ನಾನು ಸಹ ಅನುದಾನ ನೀಡಿದ್ದೇನೆ. ಈಗ ಗ್ರಾಮಸ್ಥರು ಮನವಿ ಯಂತೆ ಊಟದ ಹಾಲ್ ನಿರ್ಮಾಣ ಮಾಡಲು ಶಾಸಕರ ನಿಧಿಯಡಿ ಹಣ ಕೊಡುತ್ತೇನೆ’ ಎಂದು ಭರವಸೆ ನೀಡಿದರು. ಕ್ಷೇತ್ರದಲ್ಲಿ 4 ಒಕ್ಕಲಿಗರ ಸಮುದಾಯ ಭವನಕ್ಕೆ ಚಾಲನೆ ನೀಡಿದ್ದು, ಎರಡು ಉದ್ಘಾಟನೆಗೊಂಡಿವೆ. ಉಳಿದ 2 ಭವನಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ವಿ. ಚಂದ್ರು, ಕನಿಷ್ಠ ವೇತನ ಸಲಹಾ ಮಂಡಲಿಯ ಅಧ್ಯಕ್ಷ ಆರ್. ಉಮೇಶ್, ಮೈಮುಲ್ ಮಾಜಿ ನಿರ್ದೇಶಕ ಎಚ್.ಎಸ್. ಬಸವರಾಜು, ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಸ್. ಸೋಮಣ್ಣ, ಉಪಾಧ್ಯಕ್ಷ ಸಿದ್ದರಾಜು, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT