ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಅನುಷ್ಠಾನ, ಸೌಲಭ್ಯಕ್ಕೆ ಆಗ್ರಹ

Last Updated 1 ಡಿಸೆಂಬರ್ 2017, 4:59 IST
ಅಕ್ಷರ ಗಾತ್ರ

ಲಿಂಗಸುಗೂರು: ಬಾಲವಿಕಾಸ ಸಮಿತಿ, ಅಂಗನವಾಡಿ ಕಾರ್ಯಕರ್ತೆಯರ ಹೆಸರಿನಲ್ಲಿ ಬ್ಯಾಂಕುಗಳಲ್ಲಿ ಜಂಟಿ ಖಾತೆ ತೆರೆಯುವುದನ್ನು ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಅಂಗನವಾಡಿ (ಸಿಐಟಿಯು) ನೌಕರರ ಸಂಘದ ಸದಸ್ಯೆಯರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಕೈಗೊಂಡ ಪ್ರತಿಭಟನಾಕಾರರು, ನಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು. ಮಾತೃಪೂರ್ಣ ಯೋಜನೆ ಯಶಸ್ವಿಗೆ ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಮೊಟ್ಟೆ, ತರಕಾರಿ, ಅಡುಗೆ ಅನಿಲ ಸಿಲಿಂಡರ್ ಹಣ ಮುಂಗಡವಾಗಿ ನೀಡಬೇಕು. ಹೆಚ್ಚುವರಿ ಪಾತ್ರೆ, ಕುಕ್ಕರ್‌ ಮುಂತಾದವು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

‘ಇಲಾಖೆಯೇತರ ಕೆಲಸಗಳಿಂದ ನೌಕರರನ್ನು ಮುಕ್ತಗೊಳಿಸಬೇಕು. ಪ್ರತಿ ತಿಂಗಳು ನಿಗದಿತ ಅವಧಿಯಲ್ಲಿ ವೇತನ ಬಿಡುಗಡೆ ಮಾಡಬೇಕು, ನಿವೃತ್ತ ನೌಕರರಿಗೆ ನಿವೃತ್ತಿ ವೇತನ ಮತ್ತು ಮರಣ ಹೊಂದಿದ ಕುಟುಂಬದವರಿಗೆ ಪರಿಹಾರ ನೀಡಬೇಕು, 2015ರಲ್ಲಿ ತಡೆ ಹಿಡಿದ 15ದಿನಗಳ ಗೌರವಧನ ತಕ್ಷಣ ಬಿಡುಗಡೆ ಮಾಡಿಸಬೇಕು, ಕೇಂದ್ರಗಳ ಬಾಡಿಗೆ ಹಣ ನಿಗದಿತವಾಗಿ ನೀಡಬೇಕು’ ಎಂದು ಅವರು ಆಗ್ರಹಿಸಿದರು.

ಮಾತೃಪೂರ್ಣ ಯೋಜನೆಯಡಿ ಹೆಚ್ಚುವರಿ ಸಹಾಯಕಿಯರನ್ನು ನೇಮಕ ಮಾಡಬೇಕು, ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ನೇಮಕ ಮಾಡಬೇಕು, ಉತ್ತಮ ಗುಣಮಟ್ಟದ ಪಡಿತರ ಆಹಾರ ಧಾನ್ಯ ಹಂಚಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಶೇಕ್ಷಾಖಾದ್ರಿ, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಬಸಮ್ಮ ಮುದಗಲ್ಲ, ಮುಖಂಡರಾದ ಶಿವಮ್ಮ ನಾಗರಹಾಳ, ಮಾರೆಮ್ಮ ಮಸ್ಕಿ, ಲಕ್ಷ್ಮೀ ನಗನೂರು, ಸರಸ್ವತಿ ಈಚನಾಳ, ಸೋಮುಬಾಯಿ, ಸುಜಾತ ಮಸ್ಕಿ, ಶ್ಯಾವಮ್ಮ ಜೂಲಗುಡ್ಡ, ವೀರಬಸಮ್ಮ, ಅಮರಮ್ಮ, ಮಮತಾಜ್‌ಬೇಗಂ, ಮಹಾದೇವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT