ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರ ಫಲಿತಾಂಶ: ಮುಂದಿನ ಚುನಾವಣೆ ದಿಕ್ಸೂಚಿ

Last Updated 3 ಡಿಸೆಂಬರ್ 2017, 9:03 IST
ಅಕ್ಷರ ಗಾತ್ರ

ಚಿತ್ರದುರ್ಗ: ಉತ್ತರ ಪ್ರದೇಶದ ಸ್ಥಳೀಯ ಚುನಾವಣೆಯ ಫಲಿತಾಂಶವೇ ಮುಂದಿನ ಲೋಕಸಭೆ ಮತ್ತು ವಿಧಾನಸಭೆಗಳ ಚುನಾವಣೆಗೆ ದಿಕ್ಸೂಚಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು. ಉತ್ತರ ಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನಗರದ ಒನಕೆ ಒಬವ್ವ ವೃತ್ತದಲ್ಲಿ ಶನಿವಾರ ಜಿಲ್ಲಾ ಬಿಜೆಪಿ ಘಟಕ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಅವರು ಕಾರ್ಯಕರ್ತರಿಗೆ ಸಿಹಿ ಹಂಚಿ ಮಾತನಾಡಿದರು.

ಉತ್ತರಪ್ರದೇಶದ ಮತದಾರರು ಬಿಜೆಪಿ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅದಕ್ಕಾಗಿಯೇ ರಾಜ್ಯ ಆಳುವ ಅಧಿಕಾರವನ್ನು ಪಕ್ಷಕ್ಕೆ ನೀಡಿದ್ದಾರೆ. ಈಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪುನಃ ಬಿಜೆಪಿಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಇದು ಗುಜರಾತ್, ಹಿಮಾಚಲ ಪ್ರದೇಶದ ವಿಧಾಸಭೆ ಚುನಾವಣೆ ಹಾಗೂ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ. ಈ ಮೂಲಕ ಪ್ರಧಾನಿ ಮೋದಿ ಅವರ ‘ಕಾಂಗ್ರೆಸ್ ಮುಕ್ತ ಭಾರತ’ದ ಕನಸು ನನಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೋಟು ಅಮಾನ್ಯ ಮತ್ತು ಜಿಎಸ್‌ಟಿಯನ್ನು ಮತದಾರರು ಒಪ್ಪಿದ್ದಾರೆ. ಅದನ್ನು ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಮೂಲಕ ತೋರಿಸಿದ್ದಾರೆ ಎಂದು ಅವರು ಹೇಳಿದರು. ಉತ್ತರ ಪ್ರದೇಶದ 700 ಕ್ಕೂ ಹೆಚ್ಚಿನ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಕೇ ವಲ 19 ಸ್ಥಾನ ಪಡೆಯುದಕ್ಕಷ್ಟೇ ಸೀಮಿತವಾಗಿದೆ. ಅಲ್ಲಿ ಕಾಂಗ್ರೆಸ್‌ ಅನ್ನು ಮತದಾರರು ತಿರಿಸ್ಕರಿಸಿರುವುದು ಸ್ಪಷ್ಟವಾಗಿದೆ ಎಂದು ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.

ಸಂಭ್ರಮಾಚರಣೆಯಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆ ಉಸ್ತುವಾರಿ ಜಿ.ಎಂ. ಸುರೇಶ್, ಬಿಜೆಪಿ ನಗರ ಮಂಡಳ ಅಧ್ಯಕ್ಷ ಠಾಕೂರ್, ಪ್ರಧಾನ ಕಾರ್ಯದರ್ಶಿಗಳಾದ ರತ್ನಮ್ಮ, ಮಲ್ಲಿಕಾರ್ಜುನ್‌, ಹೊಳಲ್ಕೆರೆ ಹನುಮಕ್ಕ, ದಗ್ಗೆ ಶಿವಪ್ರಕಾಶ್, ಮಂಜುನಾಥ, ಶಂಭು ಜಿ.ಎಸ್., ಬೇಂದ್ರೆ ನಾಗರಾಜ್ ಮತ್ತು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT