ಕನಕಪುರ

ಜಿಲ್ಲಾ ಮಟ್ಟದಲ್ಲಿ ಕನಕೋತ್ಸವ ಆಚರಣೆಗೆ ಸಿದ್ಧತೆ

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಪುರುಷರು, ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ. 16 ವರ್ಷದ ಒಳಪಟ್ಟು ಮತ್ತು ಮೇಲ್ಪಟ್ಟ ವಿಭಾಗದಲ್ಲಿ ಸ್ಪರ್ಧೆ ನಡೆಯಲಿವೆ

ಕನಕಪುರ: ತಾಲ್ಲೂಕಿನಾದ್ಯಂತ ಪ್ರತಿಭಾನ್ವೇಷಣೆ ನಡೆಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡಲು ಹಾಗೂ ಮನರಂಜನೆ ದೃಷ್ಟಿಯಿಂದ ಕನಕೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್‌ ತಿಳಿಸಿದರು.

ಸಚಿವ ಡಿ.ಕೆ.ಶಿವಕುಮಾರ್‌ ಸ್ವಗೃಹದಲ್ಲಿ ಕನಕೋತ್ಸವ 2017ರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಈವರೆಗೆ 4 ಕನಕೋತ್ಸವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದು ಇದು 5ನೇ ವರ್ಷದ ಕನಕೋತ್ಸವ
ಕಾರ್ಯಕ್ರಮವಾಗಿದೆ ಎಂದರು.

ಕೇವಲ ತಾಲ್ಲೂಕಿಗೆ ಮಾತ್ರ ಸೀಮಿತವಾಗಿದ್ದ ಉತ್ಸವನ್ನು ಜಿಲ್ಲಾ ವ್ಯಾಪ್ತಿಗೆ ವಿಸ್ತರಿಸಿ ಕಾರ್ಯಕ್ರಮ ಆಯೋಜಿಸಲಾಗುವುದು, ಹೋಬಳಿ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಯನ್ನು ನಡೆಸಲಾಗುವುದು ಎಂದರು.

ಜನವರಿ 10ರಿಂದ 14ರ ವರೆಗೂ ನಡೆಯುವ 5 ದಿನಗಳ ಕನಕೋತ್ಸವದಲ್ಲಿ ದೇಶದ ಸಂಸ್ಕೃತಿಯನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ, ಕ್ವಿಜ್‌, ವ್ಯಾಯಾಮ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು.

ಯೋಗ, ರಂಗೋಲಿ, ಚಿತ್ರಬಿಡಿಸುವ ಸ್ಪರ್ಧೆ, ಮ್ಯಾರಥಾನ್‌ ಓಟ, ವೇಷಭೂಷಣ, ಸವಿರುಚಿ ಕಾರ್ಯಕ್ರಮ, ಅರೆಸರ್ಕಾರಿ ಮತ್ತು ಸರ್ಕಾರಿ ಸೇವೆಯಲ್ಲಿ ಕೆಲಸ ನಿರ್ವಹಿಸಿದರಿಗೆ ಸನ್ಮಾನ, ಕಬಡ್ಡಿ, ವಾಲಿಬಾಲ್‌, ಬ್ಯಾಸ್ಕೆಟ್‌ಬಾಲ್‌, ಬಾಡಿಬಲ್ಡಿಂಗ್‌, ಕುಸ್ತಿ, ಕ್ರಿಕೇಟ್‌, ವಾಯ್ಸ್‌ಆಫ್‌ ಕನಕೋತ್ಸವ ಸೇರಿದಂತೆ ಹಲವು ಬಗೆಯ ಸ್ಪರ್ಧೆಗಳು ನಡೆಯಲಿವೆ.

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಪುರುಷರು, ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ. 16 ವರ್ಷದ ಒಳಪಟ್ಟು ಮತ್ತು ಮೇಲ್ಪಟ್ಟ ವಿಭಾಗದಲ್ಲಿ ಸ್ಪರ್ಧೆ ನಡೆಯಲಿವೆ ಎಂದು ಸಂಸದರು ತಿಳಿಸಿದರು.

ಕನಕೋತ್ಸವ 2017ರ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಜನತೆ ಮುಕ್ತವಾಗಿ ಪಾಲ್ಗೊಳ್ಳಬೇಕು, ತಮ್ಮ ಅಭಿರುಚಿ, ಪ್ರತಿಭೆಗಳನ್ನು ಅನಾವರಣಗೊಳಿಸಲು ಕಲ್ಪಿಸಿಕೊಟ್ಟಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸುರೇಶ್‌ ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ನಗರಸಭೆ ಅಧ್ಯಕ್ಷ ಕೆ.ಎನ್‌.ದಿಲೀಪ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ.ವಿಜಯದೇವು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್‌, ಹಿರಿಯ ಕಾಂಗ್ರೆಸ್‌ ಮುಖಂಡರಾದ ಇಕ್ಬಾಲ್‌ಹುಸೇನ್‌, ರಾಜೇಂದ್ರ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಸ್‌. ಶಂಕರ್‌, ಸಾತನೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪುಟ್ಟಮಾದು, ರಾಜ್ಯ ಯೂತ್‌ ಕಾಂಗ್ರೆಸ್‌ ಉಪಾಧ್ಯಕ್ಷ ಕೆಂಪರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶ್ರೀನಿವಾಸ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಾಯಸಂದ್ರರವಿ, ಉಯ್ಯಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಏಳಗಳ್ಳಿ ರವಿ, ಮುಖಂಡರಾದ ರಾಮಚಂದ್ರ, ಶಾಂತ, ರಮೇಶ್‌, ಮಹೇಶ್‌ ಉಪಸ್ಥಿತರಿದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ವಿದ್ಯುತ್ ಸ್ವಾವಲಂಬನೆಗೆ ‘ಸೂರ್ಯ ರೈತ’

ರಾಮನಗರ
ವಿದ್ಯುತ್ ಸ್ವಾವಲಂಬನೆಗೆ ‘ಸೂರ್ಯ ರೈತ’

20 Jan, 2018
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ  ದರದಲ್ಲಿ ಔಷಧಿ’

ಚನ್ನಪಟ್ಟಣ
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಔಷಧಿ’

19 Jan, 2018

ರಾಮನಗರ
ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

ನೂತನ ಪಿಂಚಣಿ ಯೋಜನೆಯು ನೌಕರರಿಗೆ ಮಾರಕವಾಗಿದೆ. ಈ ಯೋಜನೆಗೆ ಒಳಪಡುವ ನೌಕರರ ಮೂಲ ವೇತನ ಹಾಗೂ ತುಟ್ಟಿ ಭತ್ಯೆಯ ಶೇ 10ರಷ್ಟು ನೌಕರರ ವೇತನದಲ್ಲಿ ಮುರಿದುಕೊಳ್ಳಲಾಗುತ್ತದೆ. ...

19 Jan, 2018
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

ಮನೆಯಿಂದ ಹೊರ ಬರದಂತೆ ಜನರಿಗೆ ಎಚ್ಚರಿಕೆ
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

18 Jan, 2018
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

ದನ ಮೇಯಿಸುತ್ತಿದ್ದ ವೇಳೆ ಕೊಂದಿದೆ
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

18 Jan, 2018