ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈತರ ಆತ್ಮಹತ್ಯೆ ನಿಯಂತ್ರಿಸುವಲ್ಲಿ ವಿಫಲ’

Last Updated 4 ಡಿಸೆಂಬರ್ 2017, 6:02 IST
ಅಕ್ಷರ ಗಾತ್ರ

ಯಲ್ಲಾಪುರ: ‘ರಾಜ್ಯ ದಲ್ಲಿನ ರೈತರ ಆತ್ಮಹತ್ಯೆ ನಿಯಂತ್ರಿ ಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸಂಪೂರ್ಣವಾಗಿ ವಿಫಲಗೊಂಡಿವೆ. ರೈತರನ್ನು ಸಬಲೀಕರಣ ಗೊಳಿಸುವ ನಿಟ್ಟಿನಲ್ಲಿ ಅವರ ಪರವಾದ ನಿಲುವನ್ನು ಆಡಳಿತ ಪಕ್ಷಗಳು ಶೀಘ್ರದಲ್ಲಿಯೇ ಪ್ರಕಟಿಸಬೇಕು’ ಎಂದು ಜೆ.ಡಿ.ಎಸ್ ಸಂಘಟನಾ ಉಸ್ತುವಾರಿ ಎ.ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

‘ಈಗಿನ ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ 3,506 ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಪ್ರಸಕ್ತ ಸಾಲಿನಲ್ಲಿ 774 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಾಸರಿ ದಿನಕ್ಕೆ 2ಕ್ಕಿಂತ ಹೆಚ್ಚಿನ ರೈತರು ಆತ್ಮಹತ್ಯೆಗೆ ಶರಣಾಗಿರುವುದು ಅಂಕಿ ಅಂಶಗಳಿಂದ ಕಂಡು ಬಂದಿದೆ. ಇದರಿಂದ ಅವರ ಕುಟುಂಬಗಳು ಸಂಪೂರ್ಣವಾಗಿ ಅತಂತ್ರ ಗೊಂಡಿವೆ’ ಎಂದು ತಿಳಿಸಿದ್ದಾರೆ.

‘ರೈತರನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದು ಅವಶ್ಯವಾಗಿದೆ. ಇಲ್ಲದಿದ್ದಲ್ಲಿ ಅವರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ. ಈ ಬಗ್ಗೆ ಗಂಭೀರವಾಗಿ ಚಿಂತಿಸಿ, ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

‘ಕೇಂದ್ರ ಸರ್ಕಾರವು ಉದ್ಯಮಿಗಳಿಗೆ ಹಾಗೂ ಕಾರ್ಪೊರೇಟರ್‌ಗಳಿಗೆ ₹ 2.15 ಲಕ್ಷ ಸಾವಿರ ಕೋಟಿ ಹಣಕಾಸಿನ ಸಹಾಯಧನ ಘೋಷಿಸಿದೆ. ಆದರೆ ರಾಜ್ಯದ ರೈತರ ಒಟ್ಟೂ ₹ 58 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಲು ಅಥವಾ ಅವರಿಗೆ ಸಹಾಯಧನ ನೀಡಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅವರ ರೈತ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT