ಕೆಜಿಎಫ್

ಕ್ಯಾಸಂಬಳ್ಳಿಯಲ್ಲಿ ಕೆ.ಸಿ.ರೆಡ್ಡಿ ಸ್ಮಾರಕ

‘ಹಿಂದುಳಿದ ವರ್ಗದ ರೆಡ್ಡಿ ಜನಾಂಗದವರನ್ನು 3 ಎ ಗುಂಪಿಗೆ ಸೇರಿಸಲು ಸರ್ಕಾರವನ್ನು ಒತ್ತಾಯಿಸಲಾಗಿದೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ’

ಕೆಜಿಎಫ್: ‘ಹಿಂದುಳಿದ ವರ್ಗದ ರೆಡ್ಡಿ ಜನಾಂಗದವರನ್ನು 3 ಎ ಗುಂಪಿಗೆ ಸೇರಿಸಲು ಸರ್ಕಾರವನ್ನು ಒತ್ತಾಯಿಸಲಾಗಿದೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ರಾಬರ್ಟಸನ್‌ಪೇಟೆಯಲ್ಲಿ ಭಾನುವಾರ ರೆಡ್ಡಿ ಸಮುದಾಯದ ವತಿಯಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಬಹಳಷ್ಟು ಜನಾಂಗದವರು ಮೀಸಲಾತಿ ಕೇಳುತ್ತಿದ್ದಾರೆ. ರೆಡ್ಡಿ ಸಮುದಾಯದವರಲ್ಲಿಯೂ ಬಹಳಷ್ಟು ಬಡವರಿದ್ದಾರೆ. ಮೀಸಲಾತಿ ದೊರಕಿದರೆ ಅಂತಹವರಿಗೆ ಸಹಾಯವಾಗಬಹುದು’ ಎಂದರು.

‘ರೆಡ್ಡಿ ಸಮುದಾಯದ ದಿಗ್ಗಜ ಕೆ.ಸಿ.ರೆಡ್ಡಿ ಕೊಡುಗೆ ರಾಜ್ಯಕ್ಕೆ ಅನನ್ಯ. ನೆಹರು ಮಂತ್ರಿ ಮಂಡಲದಲ್ಲಿ ಭಾರಿ ಕೈಗಾರಿಕೆ ಸಚಿವರಾಗಿದ್ದ ಅವರು ಬೆಂಗಳೂರಿಗೆ ಬಹಳಷ್ಟು ಕೇಂದ್ರ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ತಂದರು. ವಿಧಾನಸೌಧಕ್ಕೆ ಅಡಿಪಾಯ ಹಾಕಿದರು. ಇವರ ಪುತ್ಥಳಿಯನ್ನು ವಿಧಾನಸೌಧ ಬಳಿ ಸ್ಥಾಪಿಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಚುನಾವಣೆಗೂ ಮೊದಲೇ ಪ್ರತಿಮೆಯನ್ನು ಸ್ಥಾಪಿಸುತ್ತೇವೆ’ ಎಂದರು.

‘ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿಯವರ ಹುಟ್ಟಿದ ಊರಾದ ಕ್ಯಾಸಂಬಳ್ಳಿಯಲ್ಲಿ 22 ಎಕರೆ ಪ್ರದೇಶದಲ್ಲಿ ಸ್ಮಾರಕ ಕಟ್ಟಲಾಗುವುದು. ಅದರಲ್ಲಿ ಹತ್ತು ಎಕರೆ ಪ್ರದೇಶವನ್ನು ಪ್ರವಾಸೋದ್ಯಮಕ್ಕೆ ಮೀಸಲಿಡಲಾಗುವುದು. ತಕ್ಷಣ ಈ ಜಾಗಕ್ಕೆ ರಸ್ತೆ ನಿರ್ಮಾಣ ಮತ್ತು ಕಾಂಪೌಂಡು ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಎಪಿಎಂಸಿ ನಿರ್ದೇಶಕ ವಿಜಯ ರಾಘವರೆಡ್ಡಿ, ಜೈವಿಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷ ರಾಮಲಿಂಗಾರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಎಪಿಎಂಸಿ ಅಧ್ಯಕ್ಷ ಚಂಗಾರೆಡ್ಡಿ, ಬೆಮಲ್‌ ಕಾರ್ಮಿಕ ಸಂಘದ ಅಧ್ಯಕ್ಷ ಆಂಜನೇಯರೆಡ್ಡಿ, ಕೆಡಿಎ ಅಧ್ಯಕ್ಷ ಅಪ್ಪಿರೆಡ್ಡಿ, ಕೃಷಿಕ ಸಮಾಜದ ಅಧ್ಯಕ್ಷ ರಾಜಾರೆಡ್ಡಿ, ಮುಖಂಡ ಆನಂದರೆಡ್ಡಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಇದ್ದರು.

* * 

ಕ್ಯಾಸಂಬಳ್ಳಿಯಲ್ಲಿ ಪೊಲೀಸ್‌ ಠಾಣೆ ಸ್ಥಾಪಿಸಲು ಮಾರ್ಗಸೂಚಿಯನ್ನು ಅನುಸರಿಸಿ ಕ್ರಮ ಕೈಗೊಳ್ಳಲಾಗುವುದು
ರಾಮಲಿಂಗಾರೆಡ್ಡಿ, ಸಚಿವರು

Comments
ಈ ವಿಭಾಗದಿಂದ ಇನ್ನಷ್ಟು
ಜಿಲ್ಲೆಯಲ್ಲಿ ಕಳೆಗಟ್ಟಿದ ಸುಗ್ಗಿ ಹಬ್ಬದ ಸಂಭ್ರಮ

ಕೋಲಾರ
ಜಿಲ್ಲೆಯಲ್ಲಿ ಕಳೆಗಟ್ಟಿದ ಸುಗ್ಗಿ ಹಬ್ಬದ ಸಂಭ್ರಮ

16 Jan, 2018

ಬಂಗಾರಪೇಟೆ
ರಾತ್ರೋ ರಾತ್ರಿ ‍ಕೆಂಪೇಗೌಡ ಪ್ರತಿಮೆ ಉದ್ಘಾಟನೆ

ಕಳೆದ ಕೆಂಪೇಗೌಡ ಜಯಂತಿ ಸಂದರ್ಭ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಪುರಸಭೆ ಸಮ್ಮತಿಯಂತೆ ಪ್ರತಿಮೆ ಅನಾವರಣ ಮಾಡಲು ಸಿದ್ಧತೆ ನಡೆಸಿದ್ದರು. ಪ್ರತಿಮೆ ಅನಾವರಣಗೊಳಿಸದಂತೆ ಜಿಲ್ಲಾಡಳಿತ ತಡೆಯಾಜ್ಞೆ...

16 Jan, 2018
ವಚನ ಸಾಹಿತ್ಯ ಹುಲ್ಲಿನ ಬಣವೆ

ಕೋಲಾರ
ವಚನ ಸಾಹಿತ್ಯ ಹುಲ್ಲಿನ ಬಣವೆ

15 Jan, 2018

ಕೆಜಿಎಫ್‌
ಪಕ್ಷಾತೀತವಾಗಿ ಸಾಲ ನೀಡಿಲ್ಲ: ಆರೋಪ

‘ಸುಳ್ಳು ಭರವಸೆ ನೀಡುತ್ತ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಮುಖ್ಯಮಂತ್ರಿ ಹೆಸರಿನಲ್ಲಿ ರಾಮನ ಬದಲು ರಾವಣ ಇರಬೇಕಾಗಿತ್ತು. ರಾಜ್ಯದಲ್ಲಿ ಅಧಿಕಾರದಲ್ಲಿ ಮುಂದುವರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು...

15 Jan, 2018
ಜಿಲ್ಲೆಯಲ್ಲಿ ತೀರ್ಪು ಆಟಕ್ಕುಂಟು ಲೆಕ್ಕಕ್ಕಿಲ್ಲ

ಕೋಲಾರ
ಜಿಲ್ಲೆಯಲ್ಲಿ ತೀರ್ಪು ಆಟಕ್ಕುಂಟು ಲೆಕ್ಕಕ್ಕಿಲ್ಲ

15 Jan, 2018