ಘಟಪ್ರಭಾ

'ಕಲ್ಲೊಳ್ಳಿ ಅಭಿವೃದ್ಧಿಗೆ ₹ 5 ಕೋಟಿ ಮಂಜೂರು'

ಮುಂದಿನ ವಿಧಾನಸಭಾ ಚುನಾವಣೆಗೆ 4 ತಿಂಗಳು ಬಾಕಿ ಇದೆ. ಈಗಿನಿಂದಲೇ ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಕಾರ್ಯಕರ್ತರನ್ನು ಹುರಿದುಂಬಿಸಿ, ಮುಂದಿನ ಚುನಾವಣೆಗೆ ಅಣಿಗೊಳಿಸಲಾಗುವುದು

ಘಟಪ್ರಭಾ: ಕಲ್ಲೊಳ್ಳಿ ಪಟ್ಟಣದ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ ₹5 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿನ ಕಲ್ಲೋಳಿಯ ಮಾರುತಿ ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಅಭಿವೃದ್ಧಿಪರ ಕೆಲಸಗಳಿಗೆ ನಾನು ಸದಾ ಸಿದ್ಧನಾಗಿರುವೆ. ಅರಭಾವಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಪ್ರಮುಖ ಗುರಿ ಎಂದರು.

ಮುಂದಿನ ವಿಧಾನಸಭಾ ಚುನಾವಣೆಗೆ 4 ತಿಂಗಳು ಬಾಕಿ ಇದೆ. ಈಗಿನಿಂದಲೇ ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಕಾರ್ಯಕರ್ತರನ್ನು ಹುರಿದುಂಬಿಸಿ, ಮುಂದಿನ ಚುನಾವಣೆಗೆ ಅಣಿಗೊಳಿಸಲಾಗುವುದು ಎಂದು ಹೇಳಿದರು.

ದೇವಸ್ಥಾನದ ಸಮಿತಿಯಿಂದ ಬಾಲಚಂದ್ರ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಸುಭಾಸ ಕುರಬೇಟ, ರಾವಸಾಬ ಬೆಳಕೂಡ, ಪ್ರಭಾಶುಗರ ನಿರ್ದೇಶಕ ಮಹಾಂತೇಶ ಕಪ್ಪಲಗುದ್ದಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲಪ್ಪ ಹೆಬ್ಬಾಳ, ಅಶೋಕ ಮಕ್ಕಳಗೇರಿ, ಬಸು ದಾಸನವರ, ದತ್ತು ಕಲಾಲ, ಭಗವಂತ ಪತ್ತಾರ ಹಾಗೂ ಶಿವಾನಂದ ಹೆಬ್ಬಾಳ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು

ಬೆಳಗಾವಿ
‘10 ವರ್ಷಗಳ ನಂತರ ಸಿ.ಎಂ ಸ್ಥಾನಕ್ಕೆ ಬೇಡಿಕೆ’

ಹತ್ತು ವರ್ಷಗಳ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಮಂಡಿಸುವುದಾಗಿ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಮಂಗಳವಾರ ಇಲ್ಲಿ ತಿಳಿಸಿದರು.

24 Jan, 2018

ಗೋಕಾಕ
ಬ್ರಾಹ್ಮಣರ ವಿರುದ್ಧ ಟೀಕೆಗೆ ಖಂಡನೆ

ನಗರದ ಕಿಲ್ಲೆ ವೆಂಕಟೇಶ್ವರ ದೇವಸ್ಥಾನದ ಬಳಿ ಸೇರಿದ ಬ್ರಾಹ್ಮಣ ಸಮಾಜದವರು ಮೆರವಣಿಗೆ ಮೂಲಕ ಬಸವೇಶ್ವರ ವೃತ್ತ ತಲುಪಿ ಅಲ್ಲಿ ಮಾನವ ಸರಪಳಿ ರಚಿಸಿ, ಕೆಲ...

24 Jan, 2018
ಏತ ನೀರಾವರಿ ಕಾಮಗಾರಿ ಆರಂಭಕ್ಕೆ ಪ್ರಯತ್ನ

ಬೈಲಹೊಂಗಲ
ಏತ ನೀರಾವರಿ ಕಾಮಗಾರಿ ಆರಂಭಕ್ಕೆ ಪ್ರಯತ್ನ

23 Jan, 2018

ಗೋಕಾಕ
ಪ್ರತಿಭೆ ಬೆಳಕಿಗೆ ತಂದ ಆತ್ಮ ತೃಪ್ತಿ ಇದೆ

ರಾಜ್ಯದಲ್ಲಿ ಸಾಂಸ್ಕೃತಿಕ, ಕ್ರೀಡೆ ಹಾಗೂ ಸಾಮಾಜಿಕ ಉದ್ದೇಶಗಳಿಗಾಗಿ ಒಂಭತ್ತು ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತದೆ.

23 Jan, 2018
ಲಕ್ಷ್ಮಿಗೆ ಟಿಕೆಟ್ ತಪ್ಪಿಸಲು ಯಾರಿಂದಲೂ ಆಗದು

ಬೆಳಗಾವಿ
ಲಕ್ಷ್ಮಿಗೆ ಟಿಕೆಟ್ ತಪ್ಪಿಸಲು ಯಾರಿಂದಲೂ ಆಗದು

22 Jan, 2018