ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಹಾಯ್ದು ಚಿರತೆ ಸಾವು

Last Updated 4 ಡಿಸೆಂಬರ್ 2017, 9:02 IST
ಅಕ್ಷರ ಗಾತ್ರ

ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರು ಕೋಟೆ ಗುಡ್ಡದ ಬಳಿಯ ರಾಷ್ಟ್ರೀಯ ಹೆದ್ದಾರಿ-4 ದಾಟುತ್ತಿದ್ದ ಹೆಣ್ಣು ಚಿರತೆಗೆ ಭಾನುವಾರ ಬೆಳಗಿನ ಜಾವ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯು ಸ್ಥಳದಲ್ಲೇ ಅಸುನೀಗಿದೆ.

‘ಆಹಾರ ಹುಡುಕಿ ಬಂದ ಚಿರತೆ ರಸ್ತೆ ದಾಟುವಾಗ ಅಪಘಾತ ಸಂಭವಿಸಿರಬಹುದು. ಅವಘಡದಲ್ಲಿ ಚಿರತೆಯ ಕೆಳ ದವಡೆ ಹಲ್ಲುಗಳು, ಎಡ ಮುಂಗಾಲು ಮುರಿದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿದರಿಂದ ಸ್ಥಳದಲ್ಲಿಯೇ ಮೃತ ಪಟ್ಟಿರಬಹುದು’ ಎಂದು ಪ್ರಭಾರ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಪಿ.ಕೆ ಜಾಧವ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ: ಚಿರತೆಯ ಮರಣೋತ್ತರ ಪರೀಕ್ಷೆಯನ್ನು ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆಸಲಾಯಿತು. ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೋಪಿನಾಥ ನೇತೃತ್ವದ ಮೂವರು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ದಷ್ಟಪುಷ್ಟವಾಗಿ ಬೆಳೆದಿರುವ ಚಿರತೆ ಅಂದಾಜು 40 ಕೆ.ಜಿ ತೂಕ ಹೊಂದಿತ್ತು.

ಅಪಘಾತ ನಡೆದ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ತೋಡಕರ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರದೀಪ ಪವಾರ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT