ಕಾರವಾರ

ಸಿ.ಎಂ.ಗೆ ಕಪ್ಪು ಬಾವುಟ ಪ್ರದರ್ಶನ: ಎಚ್ಚರಿಕೆ

‘ಈ ಕುರಿತು ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ನ.27ರಂದು ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ ಮುಖ್ಯಮಂತ್ರಿಗೆ ಮನವಿಯನ್ನು ಕೂಡ ರವಾನಿಸಲಾಗಿದೆ

ಕಾರವಾರ: ‘ಯಲ್ಲಾಪುರ ಪಟ್ಟಣ ಪಂಚಾಯ್ತಿಯಿಂದ ಬೇರ್ಪಡಿಸಿರುವ ಸಹಸ್ರಳ್ಳಿ, ಕೊಂಡೆಮನೆ ವಾರ್ಡ್‌ಗಳನ್ನು ಯಾವುದೇ ಗ್ರಾಮ ಪಂಚಾಯ್ತಿಗೆ ಸೇರಿಸದ ಕಾರಣ ಇಲ್ಲಿನ ಜನರು ಪರದಾಡುವಂತಾಗಿದೆ. ಈ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಪ್ರವಾಸದ ವೇಳೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಯಲ್ಲಾಪುರ ತಾಲ್ಲೂಕು ಸಮಿತಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ.

‘ಈ ಕುರಿತು ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ನ.27ರಂದು ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ ಮುಖ್ಯಮಂತ್ರಿಗೆ ಮನವಿಯನ್ನು ಕೂಡ ರವಾನಿಸಲಾಗಿದೆ. ಆದರೆ ಈವರೆಗೂ ಯಾವುದೇ ಪ್ರಯೋ ಜನವಾಗಿಲ್ಲ’ ಎಂದು ದೂರಿದರು.

‘ಈ ಗ್ರಾಮಗಳನ್ನು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಕೂಡಲೇ ಮನದಟ್ಟು ಮಾಡಿ, ಅದರ ಪ್ರತಿಕ್ರಿಯೆಯನ್ನು ತಿಳಿಸಬೇಕು. ಒಂದೊಮ್ಮೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಡಿ.6 ಮತ್ತು 7ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ’ ಎಂದು ಎಚ್ಚರಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
ಮತದಾನದ ಅರಿವು: ಕಿರುಚಿತ್ರದ ನೆರವು

ಶಿರಸಿ
ಮತದಾನದ ಅರಿವು: ಕಿರುಚಿತ್ರದ ನೆರವು

19 Mar, 2018
ಕರಾವಳಿಯಲ್ಲಿ ಸೌಹಾರ್ದ ವಾತಾವರಣ ನಿರ್ಮಾಣ

ಭಟ್ಕಳ
ಕರಾವಳಿಯಲ್ಲಿ ಸೌಹಾರ್ದ ವಾತಾವರಣ ನಿರ್ಮಾಣ

19 Mar, 2018
‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿ ಸರ್ಕಾರ’

ಕುಮಟಾ
‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿ ಸರ್ಕಾರ’

17 Mar, 2018
ನಕಲಿ ಪಾಸ್ ಬಳಸಿ ಮರಳು ಸಾಗಣೆ: ಐವರ ಬಂಧನ

ಉತ್ತರ ಕನ್ನಡ
ನಕಲಿ ಪಾಸ್ ಬಳಸಿ ಮರಳು ಸಾಗಣೆ: ಐವರ ಬಂಧನ

17 Mar, 2018

ಯಲ್ಲಾಪುರ
₹ 4 ಕೋಟಿ ವೆಚ್ಚದಲ್ಲಿ ಗಣೇಶಪಾಲ್ ಸೇತುವೆ

ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲು ಶಾಸಕಾಂಗವೊಂದರಿಂದಲೇ ಸಾಧ್ಯವಾಗದು. ಇದಕ್ಕೆ ಕಾರ್ಯಾಂಗದ ಸಂಪೂರ್ಣ ಸಹಕಾರವಿದ್ದರೆ ಮಾತ್ರ, ಯೋಜಿತ ಕಾರ್ಯಗಳನ್ನು ಸಾಧಿಸಬಹುದು. ಜನಪ್ರತಿನಿಧಿಗಳಾದವರು ತಮ್ಮ ಕೈಗೆ ಅಧಿಕಾರ...

17 Mar, 2018