ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಸ್ವಾಮೀಜಿ, ಗೋ.ಮಧುಸೂದನ್‌ ವಿರುದ್ಧ ಪ್ರತಿಭಟನೆ

Last Updated 5 ಡಿಸೆಂಬರ್ 2017, 8:55 IST
ಅಕ್ಷರ ಗಾತ್ರ

ಹೊಳೆನರಸೀಪುರ: ಪೇಜಾವರ ಸ್ವಾಮೀಜಿ ಮತ್ತು ಗೋ.ಮಧುಸೂದನ್‌ ಅವರು ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಹೇಳಿರುವುದನ್ನು ಖಂಡಿಸಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸದಸ್ಯರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೇಡ್‌ 2 ತಹಶೀಲ್ದಾರ್‌ ಅವರಿಗೆ ಮನವಿ ನೀಡಿದರು.

ಸೋಮವಾರ ಬೆಳಿಗ್ಗೆ 10ಕ್ಕೆ ಪಟ್ಟಣದ ಬಸ್‌ ನಿಲ್ದಾಣ ಸಮೀಪದಲ್ಲಿ ಸಂಘಟಿತರಾದ ಪ್ರತಿಭಟನಾಕಾರರು ನಂತರ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿಗೆ ತೆರಳಿ ಗ್ರೇಡ್‌ 2 ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಭಾರತದ ಎಲ್ಲ ಜನರಿಗೆ ಇದುವರೆಗೂ ಸಂವಿಧಾನ ಒಪ್ಪಿಗೆ ಆಗಿದೆ. ಆದರೆ ಈಚೆಗೆ ಕೆಲವರು ಸಂವಿಧಾನ ತಿದ್ದುಪಡಿ ಆಗಬೇಕು ಎಂದು ಹೇಳಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ.

ಇಂತಹ ಹೇಳಿಕೆಗಳನ್ನು ನೀಡುವವರು ಯಾರೇ ಆಗಿದ್ದರೂ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಸದಸ್ಯರು ಆಗ್ರಹಿಸಿದರು. ತಾಲ್ಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಜವರೇಶ, ಎಂ.ಆರ್‌.ಮೋಹನ್‌, ರಾಮಚಂದ್ರ, ಕುಮಾರ್‌, ಸ್ವಾಮಿ, ಜಗದೀಶ್‌, ಗೋವಿಂದರಾಜು ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT