ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮ ಜಯಂತಿ ಮೆರವಣಿಗೆಗೆ ಅನುಮತಿ ನೀಡಲಾಗಿತ್ತು– ಡಿ.ಸಿ

Last Updated 6 ಡಿಸೆಂಬರ್ 2017, 5:05 IST
ಅಕ್ಷರ ಗಾತ್ರ

ಮೈಸೂರು: ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆಗೆ ಅನುಮತಿ ನೀಡಲಾಗಿಲ್ಲ ಎಂಬ ಆರೋಪ ಸರಿಯಲ್ಲ. ನಿಗದಿತ ಮಾರ್ಗದಲ್ಲಿ ಶಾಂತಿಯುತ ಮೆರವಣಿಗೆಗೆ ಅವಕಾಶವಿತ್ತು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗದಿಪಡಿಸಿದ ಸ್ಥಳದಿಂದ ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ಆರಂಭಿಸದೆ ಮಧ್ಯಾಹ್ನ 12.30ರ ವರೆಗೆ ವಿಳಂಬ ಮಾಡಿದ ಕಾರಣ ಅಲ್ಲಿ ಜನರ ಗುಂಪು ದೊಡ್ಡದಾಗುತ್ತಾ ಬಂದಿತ್ತು. ಸಾರ್ವಜನಿಕರ ಪ್ರಾಣ, ಆಸ್ತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕನಿಷ್ಠ ಬಲ ಪ್ರಯೋಗಿಸಿ ಗುಂಪನ್ನು ಚದುರಿಸಿದ್ದಾರೆ. ನಿರ್ಬಂಧಿತ ರಸ್ತೆಗಳಲ್ಲಿ ಮೆರವಣಿಗೆ ಮಾಡಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಕೆಲವರನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿವಿಧ ಹಂತಗಳ ಸಭೆ ನಡೆಸಿತ್ತು. ಎಲ್ಲ ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಲು ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT