ಹಾಸನ

ಅರ್ಥ ಕಳೆದುಕೊಳ್ಳುತ್ತಿರುವ ನಂಬಿಕೆ

‘ಸ್ವಾರ್ಥದಿಂದಾಗಿ ಮನಸ್ಸುಗಳು ಕೊಳಕಾಗಿವೆ. ಪೈಪೋಟಿ ಬದುಕಿನ ನಾಗಾಲೋಟದಲ್ಲಿ ಸಂಸ್ಕಾರ ಮರೆಯುತ್ತಿದ್ದೇವೆ. ಮಹೋನ್ನತ ಭಾರತೀಯ ಸಂಸ್ಕೃತಿಯಲ್ಲಿ ಜನಿಸಿರುವ ನಾವು ರಾಮಾಯಣ ಮತ್ತು ಮಹಾಭಾರತದ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ’

ಹಾಸನ : ಮೌಲ್ಯಗಳು ಮರೆಯಾಗಿ ನಂಬಿಕೆ ಅರ್ಥ ಕಳೆದುಕೊಳ್ಳುತ್ತಿದ್ದು, ಆಧುನಿಕ ಬದುಕು ನೀರಸವಾಗುತ್ತಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

ನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆದ ಗುರು ತೋರಿದ ದಾರಿ ತಿಂಗಳಮಾಮನ ತೇರು 52ನೇ ಹುಣ್ಣಿಮೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಪ್ರವಚನ ನೀಡಿದರು.

‘ಸ್ವಾರ್ಥದಿಂದಾಗಿ ಮನಸ್ಸುಗಳು ಕೊಳಕಾಗಿವೆ. ಪೈಪೋಟಿ ಬದುಕಿನ ನಾಗಾಲೋಟದಲ್ಲಿ ಸಂಸ್ಕಾರ ಮರೆಯುತ್ತಿದ್ದೇವೆ. ಮಹೋನ್ನತ ಭಾರತೀಯ ಸಂಸ್ಕೃತಿಯಲ್ಲಿ ಜನಿಸಿರುವ ನಾವು ರಾಮಾಯಣ ಮತ್ತು ಮಹಾಭಾರತದ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.

‘ಪ್ರಕೃತಿಯ ಯಾವ ಜೀವಿಯೂ ತನ್ನ ಕರ್ತವ್ಯವನ್ನು ಮರೆತಿಲ್ಲ. ಆದರೆ, ಮಾನವ ಮನುಷ್ಯತ್ವದ ಕರ್ತವ್ಯ ಮರೆತು ಭೂಮಿಯನ್ನು ನರಕವಾಗಿಸುತ್ತಿದ್ದಾನೆ. ಗುರುಗಳ ಮಾರ್ಗದರ್ಶನದಲ್ಲಿ ನಮ್ಮೊಳಗಿರುವ ಭಗವಂತನನ್ನು ಕಂಡುಕೊಳ್ಳುವುದೇ ನಿಜವಾದ ಜ್ಞಾನ’ ಎಂದು ಹೇಳಿದರು.

ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅರಿವಳಿಕೆ ತಜ್ಞ ಡಾ. ಕೆ.ಆರ್. ವಸಂತಕುಮಾರ್ ಅವರು ಗಾಯನ ಮತ್ತು ನೃತ್ಯದೊಂದಿಗೆ ಭಕ್ತರನ್ನು ರಂಜಿಸಿದರು. ಕಾಲಭೈರವೇಶ್ವರ ಭಜನಾ ಮಂಡಳಿ ಸದಸ್ಯರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು.

ಆದಿಚುಂಚನಗಿರಿ ಕಬ್ಬಳಿ ಶಾಖಾ ಮಠದ ಶಿವಪುತ್ರ ಸ್ವಾಮೀಜಿ ಮತ್ತು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಉಪನ್ಯಾಸಕ ಲಕ್ಷ್ಮೀನಾರಾಯಣ, ಮಠದ ವ್ಯವಸ್ಥಾಪಕ ಎಚ್.ಕೆ. ಚಂದ್ರಶೇಖರ್, ಪ್ರಾಂಶುಪಾಲ ಜಿ. ಚಂದ್ರಶೇಖರ್, ಶಿಕ್ಷಕಿ ಭಾಗ್ಯಲಕ್ಷ್ಮಿ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು

ಹಾಸನ
ಮಕ್ಕಳ ಮೇಲಿನ ದೌರ್ಜನ್ಯ ತಡೆಯಿರಿ

ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು ಪ್ರತಿ ನಾಗರಿಕನ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಿ. ರಂದೀಪ್ ಸಲಹೆ ನೀಡಿದರು.

21 Apr, 2018

ಅರಕಲಗೂಡು
ಸಚಿವ ಎ.ಮಂಜು ನಾಮಪತ್ರ ಸಲ್ಲಿಕೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಗುರುವಾರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

20 Apr, 2018
ಐದು ದಶಕಗಳಿಂದ ಒಕ್ಕಲಿಗರದ್ದೇ ಪಾರುಪತ್ಯ

ಹಾಸನ
ಐದು ದಶಕಗಳಿಂದ ಒಕ್ಕಲಿಗರದ್ದೇ ಪಾರುಪತ್ಯ

20 Apr, 2018
ಮತ ಎಣಿಕೆ ಕೇಂದ್ರಗಳಿಗೆ ಡಿಸಿ ಭೇಟಿ

ಹಾಸನ
ಮತ ಎಣಿಕೆ ಕೇಂದ್ರಗಳಿಗೆ ಡಿಸಿ ಭೇಟಿ

20 Apr, 2018

ಹಾಸನ
ಚುನಾವಣಾ ವೆಚ್ಚ; ನಿಗಾ ವಹಿಸಲು ಸೂಚನೆ

ವಿಧಾನಸಭಾ ಚುನಾವಣೆಗೆ ಜಿಲ್ಲೆಗೆ ನಿಯೋಜಿಸಲ್ಪಟ್ಟಿರುವ ಚುನಾವಣಾ ವೆಚ್ಚ ವೀಕ್ಷಕರು ನೋಡಲ್ ಅಧಿಕಾರಿಗಳೊಂದಿಗೆ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಗುರುವಾರ ಸಭೆ ನಡೆಸಿ ಚುನಾವಣಾ ವೆಚ್ಚದ ಮೇಲೆ...

20 Apr, 2018