ಮುಳಬಾಗಿಲು

ತಾಯಲೂರು ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ

‘ಗ್ರಾಮದ ರಸ್ತೆಯ ಬದಿ ಎಲ್ಲೆಂದರಲ್ಲಿ ತ್ಯಾಜ್ಯ ಬಿದ್ದಿದೆ. ಜತೆಗೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ನೀರು ಸಂಗ್ರಹಗೊಂಡು ದುರ್ವಾಸನೆ ಬೀರುತ್ತಿದೆ. ಇದರಿಂದ ಸೊಳ್ಳೆ ಉತ್ಪತಿಯಾಗಿ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದೆ.

ಮುಳಬಾಗಿಲು ತಾಲ್ಲೂಕಿನ ತಾಯಲೂರು ಗ್ರಾಮದ ಬಸ್ ನಿಲ್ದಾಣದ ಬಳಿ ಕಸದ ರಾಶಿ ಬಿದ್ದಿರುವುದು (ಎಡಚಿತ್ರ). ತಾಯಲೂರಿನಿಂದ ದೂಲಪಲ್ಲಿ ಗ್ರಾಮಕ್ಕೆ ಹೋಗುವ ರಸ್ತೆಯ ಬದಿಯಲ್ಲಿರುವ ಕಸದ ರಾಶಿ

ಮುಳಬಾಗಿಲು: ಸಂಗ್ರಹವಾಗಿರುವ ಕೊಳಚೆ ನೀರು. ಕೊಳೆತು ನಾರುತ್ತಿರುವ ಕಸ ಕಡ್ಡಿಯಿಂದ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ– ಇದು ತಾಲ್ಲೂಕಿನ ತಾಯಲೂರು ಗ್ರಾಮಸ್ಥರ ಬವಣೆ.

ಇಲ್ಲಿನ ಗ್ರಾಮದಲ್ಲಿ 500ಕ್ಕೂ ಹೆಚ್ಚಿನ ಮನೆಗಳಿದ್ದು, ಸುಮಾರು 4,000 ಜನರು ವಾಸ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಒಳ ಚರಂಡಿ ಹಾಗೂ ರಸ್ತೆ ಬದಿಯ ಎಲ್ಲೆಡೆ ಕಸದ ರಾಶಿ. ಕಸ ವಿಲೇವಾರಿ ಮಾಡದೆ, ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ. ಇದರಿಂದಾಗಿ ರೋಗಗಳು ಹರಡುವ ಭೀತಿ ನಿಮಾರ್ಣವಾಗಿದೆ ಎಂದು ಇಲ್ಲಿನ ಗ್ರಾಮಸ್ಥರು
ದೂರುತ್ತಾರೆ.

‘ಗ್ರಾಮದ ರಸ್ತೆಯ ಬದಿ ಎಲ್ಲೆಂದರಲ್ಲಿ ತ್ಯಾಜ್ಯ ಬಿದ್ದಿದೆ. ಜತೆಗೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ನೀರು ಸಂಗ್ರಹಗೊಂಡು ದುರ್ವಾಸನೆ ಬೀರುತ್ತಿದೆ. ಇದರಿಂದ ಸೊಳ್ಳೆ ಉತ್ಪತಿಯಾಗಿ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದೆ. ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಗ್ರಾಮಸ್ಥ ಅಸ್ಲಾಂ ಮಹಮದ್ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ದೀಪಗಳಿಲ್ಲದ ಕಾರಣ ರಾತ್ರಿ ವೇಳೆಯ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಮಕ್ಕಳು ಮತ್ತು ವೃದ್ಧರು ರಾತ್ರಿ ಸಮಯದಲ್ಲಿ ಮನೆ ಬಿಟ್ಟು ಹೊರಗೆ ಬರುವ ಹಾಗೆ ಇಲ್ಲ. ಗ್ರಾಮದಲ್ಲಿನ ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪ ಅಳವಡಿಸುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ದೂರಿದರು.

‘ಇತ್ತೀಚಿನ ದಿನಗಳಲ್ಲಿ ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆ ಮಾಡುತ್ತಿದೆ. ಅದರಲ್ಲೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರೂ ಗ್ರಾಮದಲ್ಲಿ ಸ್ವಚ್ಛ ಭಾರತ್ ಕಾರ್ಯ ನಡೆಯದಿರುವುದು ಅವಮಾನಕರ ಸಂಗತಿಯಾಗಿದೆ’ ಎಂದು ಗ್ರಾಮಸ್ಥ ತನ್ವಿರ್ ಹೇಳುತ್ತಾರೆ.

ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಗ್ರಾಮದ ರಸ್ತೆ ಹಾಗೂ ಬಸ್ ನಿಲ್ದಾಣದಲ್ಲಿನ ಕಸದ ತ್ಯಾಜ್ಯವನ್ನು ಕೂಡಲೇ ವಿಲೇವಾರಿ ಮಾಡಬೇಕು. ಜತೆಗೆ ಮೂಲ ಸೌಕರ್ಯ ಒದಗಿಸಿ ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

* * 

ಗ್ರಾಮದ ಎಲ್ಲೆಂದರೆಲ್ಲಿ ಕಸದ ರಾಶಿ ಬಿದ್ದಿದೆ. ಕೊಳೆತ ನೀರು ಚರಂಡಿಗಳಲ್ಲಿ ನಿಂತಿದೆ. ಇಷ್ಟಾದರೂ ಗ್ರಾಮ ಪಂಚಾಯಿತಿ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿಲ್ಲ ತನ್ವಿರ್, ಗ್ರಾಮಸ್ಥ

Comments
ಈ ವಿಭಾಗದಿಂದ ಇನ್ನಷ್ಟು

ಕೋಲಾರ
ಸಮಸ್ಯೆ ಬಗೆಹರಿಸುವ ಶಕ್ತಿ ರೈತರಲ್ಲಿದೆ

‘ದೇಶದಲ್ಲಿನ ಆಹಾರ ಸಮಸ್ಯೆ ಬಗೆಹರಿಸುವ ಶಕ್ತಿ ರೈತರಿಗೆ ಮಾತ್ರ ಇದೆ’ ಎಂದು ಕೆನರಾ ಬ್ಯಾಂಕ್ ಪ್ರಧಾನ ಕಚೇರಿಯ ಮಹಾ ಪ್ರಬಂಧಕ ಅನಿಲ್ ಕುಮಾರ್ ಅಭಿಪ್ರಾಯಪಟ್ಟರು. ...

23 Apr, 2018

ಕೋಲಾರ
ಪರಿಸರ ಕಾಳಜಿಗೆ ಶಿಬಿರ ಸಹಕಾರಿ

‘ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಶಿಬಿರಗಳು ಸಹಕಾರಿಯಾಗಿವೆ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಸಂಸ್ಥೆಯ ಜಿಲ್ಲಾ ಆಯುಕ್ತ ಕೆ.ಆರ್.ಸುರೇಶ್ ತಿಳಿಸಿದರು.

23 Apr, 2018

ಕೋಲಾರ
ಶ್ರೀನಿವಾಸಗೌಡರ ಸ್ಪರ್ಧೆಗೆ ಹಸಿರು ನಿಶಾನೆ

ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಯ್ಕೆ ಸಂಬಂಧ ನಡೆಯುತ್ತಿದ್ದ ಹಗ್ಗ ಜಗ್ಗಾಟ ಅಂತ್ಯಗೊಂಡಿದ್ದು, ವರಿಷ್ಠರು ಮಾಜಿ ಸಚಿವ ಕೆ.ಶ್ರೀನಿವಾಸಗೌಡರಿಗೆ ಅಸ್ತು ಎನ್ನುವ ಮೂಲಕ ಎಲ್ಲಾ...

23 Apr, 2018

ಕೆಜಿಎಫ್‌
ಮತದಾನದ ಮಾಹಿತಿ ತಿಳಿಯಲು ಸಲಹೆ

ಮತದಾನ ನಡೆಯುವ ಮೊದಲೇ ಮತಗಟ್ಟೆ ಅಧಿಕಾರಿಗಳು ಮತದಾನಕ್ಕೆ ಸಂಬಂಧಿಸಿದ ಎಲ್ಲ ಮಾರ್ಗಸೂಚಿಗಳನ್ನು ಮನನ ಮಾಡಿಕೊಂಡಿರಬೇಕು ಎಂದು ಪ್ರೊಬೇಷನರಿ ಉಪವಿಭಾಗಾಧಿಕಾರಿ ವಿದ್ಯಾಶ್ರೀ ಹೇಳಿದರು.

23 Apr, 2018

ಶ್ರೀನಿವಾಸಪುರ
ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿಹಿಡಿಯಲು ಮತ ಹಾಕಿ

ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿಹಿಡಿಯಬೇಕು. ಮತದಾನ ಪ್ರಜೆಯ ಹಕ್ಕು. ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ಹೇಳಿದರು. ...

22 Apr, 2018