ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ

ದೂರ ಶಿಕ್ಷಣಕ್ಕೆ ನೂತನ ಕಟ್ಟಡ

ದೂರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದಕ್ಕಾಗಿ ಜ್ಞಾನಭಾರತಿ ಆವರಣದಲ್ಲಿ ₹10 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಿಂಡಿಕೇಟ್‌ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರು: ದೂರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದಕ್ಕಾಗಿ ಜ್ಞಾನಭಾರತಿ ಆವರಣದಲ್ಲಿ ₹10 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಿಂಡಿಕೇಟ್‌ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

‘ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣಕ್ಕೆ ಸ್ವಾತಂತ್ರ್ಯ ಕಟ್ಟಡ ಇಲ್ಲ. ಹೆಚ್ಚಿನ ಸೌಕರ್ಯ ಕಲ್ಪಿಸಲು ಕಟ್ಟಡ ಅಗತ್ಯವಿದ್ದು, ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲು ತೀರ್ಮಾನಿಸಲಾಯಿತು.

ಯುಜಿಸಿ ನಿಯಮ ಅನುಸಾರ ಕೋರ್ಸ್‌ಗಳ ಆರಂಭ, ನಿರ್ವಹಣೆ ಸೇರಿ ದೂರ ಶಿಕ್ಷಣ ಕುರಿತ ಸಮಗ್ರ ಸುಧಾರಣೆಗಾಗಿ ಗುಜರಾತ್‌ ಕೇಂದ್ರ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಪ್ರೊ.ಎಚ್‌.ಎಲ್‌ ಹಿರೇಮಠ ಅವರನ್ನು ದೂರ ಶಿಕ್ಷಣದ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಹೊಸ ಕೋರ್ಸ್‌ಗಳ ಆರಂಭ, ಬಡ ಮಕ್ಕಳಿಗೆ ಶುಲ್ಕ ವಿನಾಯಿತಿ ಸೇರಿದಂತೆ 12 ಅಂಶಗಳನ್ನು ದೂರ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಬಿ.ಸಿ.ಮೈಲಾರಪ್ಪ ಅವರು ಸಿಂಡಿಕೇಟ್ ಸಭೆ ಮುಂದಿಟ್ಟಿದ್ದರು. ‘ಎರಡು ಪ್ರಮುಖ ಕಾರ್ಯಗಳಿಗೆ ಒಪ್ಪಿಗೆ ಸೂಚಿಸಿದ ಸಿಂಡಿಕೇಟ್‌ ಸದಸ್ಯರು ಉಳಿದ ಅಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಂದಿನ ಸಭೆಗೆ ಮುಂದೂಡಿದರು’ ಎಂದು ಮೂಲಗಳು ತಿಳಿಸಿವೆ

‘ಸೆಂಟ್ ಜೋಸೆಫ್‌ ಕಾಲೇಜಿಗೆ ಡೀಮ್ಡ್ ವಿಶ್ವವಿದ್ಯಾಲಯ ಮಾನ್ಯತೆ ನೀಡುವ ವಿಚಾರ ಸಭೆಯಲ್ಲಿ ಹೆಚ್ಚು ಗದ್ದಲ ಸೃಷ್ಟಿಸಿತು. ಕೆಲ ಸದಸ್ಯ
ರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾದವು. ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಹಾಗೂ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಮೀಸಲಾತಿ ವಿಚಾರ ಚರ್ಚೆ ಕೈಗೆತ್ತಿಕೊಂಡಿದ್ದರಿಂದ ಡೀಮ್ಡ್ ವಿಶ್ವವಿದ್ಯಾಲಯ ವಿಚಾರದ ಚರ್ಚೆ ಪೂರ್ಣಗೊಳ್ಳಲಿಲ್ಲ’ ಎಂದು ತಿಳಿಸಿವೆ.

Comments
ಈ ವಿಭಾಗದಿಂದ ಇನ್ನಷ್ಟು

ಸಂವಾದ
ಜಾಹೀರಾತಿಗೆ ಸರ್ಕಾರಿ ಹಣ ಬಳಕೆ: ಕುಮಾರಸ್ವಾಮಿ ಟೀಕೆ

‘ನನ್ನ ಅವಧಿಯಲ್ಲಿ ಬೆಂಗಳೂರು ಮೆಟ್ರೊ ಸೇರಿದಂತೆ ಅನೇಕ ಯೋಜನೆಗಳಿಗೆ ಒಪ್ಪಿಗೆ ಸೂಚಿಸಿದ್ದೆ. ಆದರೆ, ನನ್ನ ಫೋಟೋವನ್ನು ದೊಡ್ಡದಾಗಿ ಹಾಕಿಸಿಕೊಂಡು ಪ್ರಚಾರ ಪಡೆಯಲಿಲ್ಲ. ಸರ್ಕಾರಿ ಹಣವನ್ನು...

24 Jan, 2018
ಬೆಳ್ಳಂದೂರು ಕೆರೆ ಅಭಿವೃದ್ಧಿಗೆ ಮತ್ತೆ ಗಡುವು

ಅಧಿಕಾರಿಗಳೊಂದಿಗೆ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸಭೆ
ಬೆಳ್ಳಂದೂರು ಕೆರೆ ಅಭಿವೃದ್ಧಿಗೆ ಮತ್ತೆ ಗಡುವು

24 Jan, 2018
‘ಅಧಿಕಾರ ನೀಡಿದರೆ ತಿಂಗಳಲ್ಲಿ ಬೆಳ್ಳಂದೂರು ಕೆರೆ ಸಮಸ್ಯೆಗೆ ಪರಿಹಾರ’

ಜೆಡಿಎಸ್‌ ರಾಜ್ಯಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಭರವಸೆ
‘ಅಧಿಕಾರ ನೀಡಿದರೆ ತಿಂಗಳಲ್ಲಿ ಬೆಳ್ಳಂದೂರು ಕೆರೆ ಸಮಸ್ಯೆಗೆ ಪರಿಹಾರ’

24 Jan, 2018
ಶೀಲಾಗೆ ನಿರ್ಮಾಣ್ ಪ್ರಶಸ್ತಿ ಪ್ರದಾನ

ನಿರ್ಮಾಣ್-ಪುರಂದರ ಸಂಗೀತ ರತ್ನ ಪ್ರಶಸ್ತಿ
ಶೀಲಾಗೆ ನಿರ್ಮಾಣ್ ಪ್ರಶಸ್ತಿ ಪ್ರದಾನ

24 Jan, 2018

ಹೊಸ ನಿಯಮಕ್ಕೆ ರಾಜ್ಯ ರಸ್ತೆ ಸುರಕ್ಷತಾ ಕೋಶದ ಒಪ್ಪಿಗೆ
ಮಾಲೀಕರ ಬದಲು ಚಾಲಕರಿಗೆ ದಂಡ

‘ವಾಹನಗಳ ನೋಂದಣಿ ಸಂಖ್ಯೆ ಆಧರಿಸಿ ದಂಡ ವಿಧಿಸುವ ನಿಯಮ ಜಾರಿಯಲ್ಲಿತ್ತು. ಇನ್ನು ಮುಂದೆ, ಚಾಲನಾ ಪರವಾನಗಿ ಪತ್ರ (ಡಿ.ಎಲ್‌) ಆಧರಿಸಿ ಚಾಲಕರಿಗೆ ಮಾತ್ರ ದಂಡ...

24 Jan, 2018