ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಗುಜರಾತ್ ಮೊದಲ ಹಂತದ ಮತದಾನ; ಮನೆ–ಮನೆ ಪ್ರಚಾರ ವೇಳೆ ಗರ್ಭಾ ನೃತ್ಯ

Last Updated 8 ಡಿಸೆಂಬರ್ 2017, 11:42 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಾಳೆ(ಡಿ.9, ಶನಿವಾರ) ನಡೆಯಲಿದೆ.

ಮೊದಲ ಹಂತದಲ್ಲಿ ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ ವಲಯದ 89 ಸ್ಥಾನಗಳಿಗೆ ನಡೆಯುವ ಚುನಾವಣಾ ಕಣದಲ್ಲಿ 977 ಅಭ್ಯರ್ಥಿಗಳಿದ್ದಾರೆ.

ಪ್ರಮುಖ ಎರಡು ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಎರಡನೇ ಹಂತದ ಮತದಾನ ಡಿ.14ರಂದು ನಡೆಯಲಿದೆ.

ಮೊದಲ ಹಂತದಲ್ಲಿ ಪ್ರಮುಖ ಹುರಿಯಾಳುಗಳಾದ ರಾಜ್‌ಕೋಟ್‌ನಿಂದ ಕಣಕ್ಕಿಳಿದಿರುವ ಮುಖ್ಯಮಂತ್ರಿ ವಿಜಯ್‌ ರೂಪಾಣಿ, ಮಾಂಡ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಕ್ತಿಸಿನ್ಹ ಗೊಹಿಲ್, ಅಮ್ರೇಲಿಯಲ್ಲಿ ಪರೇಶ್ ಧನನಿ ಅವರ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಮೊದಲ ಹಂತದಲ್ಲಿ 2.12 ಕೋಟಿ ಮತದಾರರು ತಮ್ಮ ಹಕ್ಕು ಚಲಾವಣೆ ಮೂಲಕ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಭವಿಷ್ಯವನ್ನು ಮತಯಂತ್ರದಲ್ಲಿ ದಾಖಲಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಅಧ್ಯಕ್ಷ ಅಮಿತ್ ಅವರು ಸೇರಿದಂತೆ ಪ್ರಮುಖ ಮುಖಂಡರನ್ನೊಳಗೊಂಡು 15 ಬಹಿರಂಗ ಪ್ರಚಾರ ಸಭೆ ನಡೆಸಿದ್ದಾರೆ. ಇನ್ನು ಕಾಂಗ್ರೆಸ್‌ನ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಒಂದು ವಾರದಿಂದ ಸೌರಾಷ್ಟ್ರ ಹಾಗೂ ದಕ್ಷಿಣ ಗುಜರಾತ್‌ನಲ್ಲಿ ಬೀಡುಬಿಟ್ಟಿದ್ದು ಹಲವು ಪ್ರಚಾರ ಸಭೆ ನಡೆಸಿದ್ದಾರೆ.

ಮೊದಲ ಹಂತದ ಕ್ಷೇತ್ರಗಳಲ್ಲಿ ಗುರುವಾರ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಶುಕ್ರವಾರ ಮನೆ ಮನೆ ಪ್ರಚಾರ ನಡೆಯುತ್ತಿದೆ.

ಇನ್ನು ಸಬರಮತಿಯಲ್ಲಿ ಸಬರಮತಿ ನದಿ ತೀರದಲ್ಲಿ ಬಿಜೆಪಿ ಲೇಸರ್‌ ಲೈಟ್‌ ಶೋ ಮೂಲಕ ಗಮನ ಸೆಳೆಯುವ ಪ್ರಚಾರ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT