ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ, ತಹಶೀಲ್ದಾರ್

ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ರಸ್ತೆ ತಡೆ

ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರ ಸಂಕಷ್ಟಗಳನ್ನು ಕಂಡೂ ಕಾಣದಂತೆ ಇದ್ದಾರೆ. ರಾಜಕೀಯ ಪಕ್ಷಗಳು ರೈತರ ಹಿತವನ್ನು ನಿರ್ಲಕ್ಷಿಸಿ, ತಮ್ಮ ಪಕ್ಷಗಳ ವೈಯಕ್ತಿಕ ಪ್ರತಿಷ್ಠೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ರಸ್ತೆ ತಡೆ

ದಾವಣಗೆರೆ: ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಿ, ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ  ರೈತರು ನಗರದ ಹೊಸ ಬಸ್ ನಿಲ್ದಾಣದ ಎದುರು ಶುಕ್ರವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಕಳೆದ ನಾಲ್ಕೈದು ವರ್ಷಗಳಿಂದ ಸತತವಾಗಿ ಬರಗಾಲದಿಂದ ಭಾರೀ ಪ್ರಮಾಣದ ನಷ್ಟವನ್ನು ರೈತರು ಅನುಭವಿಸಿದ್ದಾರೆ. ಈ ಬಾರಿ ಕೆಲವು ಕಡೆ ಉತ್ತಮವಾದ ಮಳೆಯಾಗಿಲ್ಲ. ರೈತರು ಸಾಲ ಮಾಡಿ ದುಬಾರಿ ಬೆಲೆಗೆ ಬೀಜ, ಗೊಬ್ಬರ, ಕೀಟನಾಶಕ ಖರೀದಿಸಿದ್ದು, ಕೃಷಿ ಕಾರ್ಮಿಕರ ಕೂಲಿ ಕೂಡ ದುಬಾರಿಯಾಗಿದೆ. ಕಳಪೆ ಬೀಜಗಳನ್ನು ಕೆಲವು ಕಂಪೆನಿಗಳು ರೈತರಿಗೆ ಮಾರಿದ್ದು, ಅಲ್ಪಸ್ವಲ್ಪ ಬಂದಿರುವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರ ಸಂಕಷ್ಟಗಳನ್ನು ಕಂಡೂ ಕಾಣದಂತೆ ಇದ್ದಾರೆ. ರಾಜಕೀಯ ಪಕ್ಷಗಳು ರೈತರ ಹಿತವನ್ನು ನಿರ್ಲಕ್ಷಿಸಿ, ತಮ್ಮ ಪಕ್ಷಗಳ ವೈಯಕ್ತಿಕ ಪ್ರತಿಷ್ಠೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಸರ್ಕಾರ ಕೂಡಲೇ ಖರೀದಿ ಕೇಂದ್ರಗಳನ್ನು ತಾಲ್ಲೂಕು, ಹೋಬಳಿ ಮಟ್ಟದಲ್ಲಿ ತೆರೆಯಬೇಕು. ಅತಿವೃಷ್ಟಿ, ಸೈನಿಕ ಹುಳು ಬಾಧೆ ಹಾಗೂ ಕಂಪೆನಿಗಳ ಕಳಪೆ ಬೀಜದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಡಿ.ಸಿ:

ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್, ರೈತರಿಂದ ಮನವಿ ಸ್ವೀಕರಿಸಿ ಮಾತನಾಡಿದರು. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವ ಸಂಬಂಧ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಶೆಟ್ಟಿ ಚನ್ನಬಸಪ್ಪ, ರೈತ ಮುಖಂಡರಾದ ಚಿನ್ನಸಮುದ್ರ ಶೇಖರನಾಯ್ಕ, ಚಿಕ್ಕನಹಳ್ಳಿ ಮಲ್ಲೇಶಪ್ಪ, ಹರಪನಹಳ್ಳಿ ಹನುಮಂತಪ್ಪ, ಮಲ್ಲೇನಹಳ್ಳಿ ಅಜ್ಜಯ್ಯ, ಮಲ್ಲಶೆಟ್ಟಿಹಳ್ಳಿ ಹನುಮೇಶಿ ಅವರೂ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಮಾರ್ಚ್‌ ಅಂತ್ಯದೊಳಗೆ ಅನುದಾನ ಬಳಕೆ

ಕಲಬುರ್ಗಿ
ಮಾರ್ಚ್‌ ಅಂತ್ಯದೊಳಗೆ ಅನುದಾನ ಬಳಕೆ

18 Jan, 2018

ಬೆಳಗಾವಿ
ನಾವೇನು ದನಗಳಾ?: ಅನಂತಕುಮಾರ ಹೆಗಡೆ

‘ಸರ್ಕಾರದಿಂದ ಸೈಟ್‌ ಪಡೆದುಕೊಳ್ಳಲು ಕೆಲವರು ಸಾಹಿತಿ ಎನ್ನುವ ಪಟ್ಟ ಕಟ್ಟಿಕೊಂಡಿದ್ದಾರೆ. ಬರೆದಿದ್ದೇ ಸಾಹಿತ್ಯ, ಗೀಚಿದ್ದೇ ಕವಿತೆ ಎನ್ನುವಂತಾಗಿದೆ. ಅದಕ್ಕೆ ಯಾವ ಅರ್ಥವೂ ಇರುವುದಿಲ್ಲ.

17 Jan, 2018
ಸಿದ್ಧಗಂಗಾ ಮಠ ರಸ್ತೆಗೆ ಬೇಕಿದೆ ಮೇಲ್ಸೇತುವೆ ಭಾಗ್ಯ

ತುಮಕೂರು
ಸಿದ್ಧಗಂಗಾ ಮಠ ರಸ್ತೆಗೆ ಬೇಕಿದೆ ಮೇಲ್ಸೇತುವೆ ಭಾಗ್ಯ

16 Jan, 2018

ಅಕ್ಕಿಆಲೂರ
ಲಿಂಗಪೂಜಾನುಷ್ಠಾನ ಮಂಗಲ ಮಹೋತ್ಸವ

ನೂರಾರು ಮಹಿಳೆಯರು ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಹೊತ್ತು ಹೆಜ್ಜೆ ಹಾಕಿದರು. ವಿವಿಧ ವಾದ್ಯಗಳು ವೈಭವಕ್ಕೆ ಕಾರಣವಾದವು. ಮರಳಿ ಮೆರವಣಿಗೆ ಗುರುಪೀಠ ತಲುಪಿ ಮಂಗಲಗೊಂಡಿತು.

14 Jan, 2018
ಗದುಗಿನಲ್ಲಿ ಕಾವೇರಿದ ಪ್ರತಿಭಟನೆ; ಬಿಜೆಪಿ ಆಕ್ರೋಶ

ಗದಗ
ಗದುಗಿನಲ್ಲಿ ಕಾವೇರಿದ ಪ್ರತಿಭಟನೆ; ಬಿಜೆಪಿ ಆಕ್ರೋಶ

13 Jan, 2018