ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮೂಹಿಕ ವಿವಾಹ, ದುಂದು ವೆಚ್ಚಕ್ಕೆ ಕಡಿವಾಣ’

Last Updated 12 ಡಿಸೆಂಬರ್ 2017, 8:37 IST
ಅಕ್ಷರ ಗಾತ್ರ

ಬೇವೂರು (ಬಾಗಲಕೋಟೆ): ಸಾಮೂಹಿಕ ವಿವಾಹಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವರದಾನವಾಗಿವೆ’ ಎಂದು ಸಂಸದ ಪಿ.ಸಿ ಗದ್ದಿಗೌಡರ ಹೇಳಿದರು. ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ಸೋಮವಾರ ಗ್ಯಾನೇಶ್ವರ ಕಾರ್ತೀಕೋತ್ಸವದ ಅಂಗವಾಗಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಇಂತಹ ವಿವಾಹ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಜೊತೆಗೆ ಸಮಾಜದಲ್ಲಿ ಸಾಮರಸ್ಯದ ವಾತಾವರಣ ಮೂಡಿಸುತ್ತವೆ. ಸಾಮಾಜಿಕ ಸಂಸ್ಥೆಗಳು, ಮಠ-ಮಾನ್ಯಗಳು ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವ ಮೂಲಕ ಬಡವರಿಗೆ ನೆರವಾಗಿರುವುದು ಸ್ತುತ್ಯಾರ್ಹ ಕಾರ್ಯವಾಗಿದೆ. ಸಮಾಜ ಇಂತಹ ಕಾರ್ಯಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು’ ಎಂದು ಹೇಳಿದರು.

ಅತಿಥಿಯಾಗಿ ಪಾಲ್ಗೊಂಡಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ, ‘ದುಂದು ವೆಚ್ಚ ತಗ್ಗಿಸಲು ಸಾಮೂಹಿಕ ವಿವಾಹ ಸಹಕಾರಿಯಾಗಿದೆ’ ಎಂದರು. ಗ್ಯಾನಪ್ಪಜ್ಜನವರು ಮಾತನಾಡಿ, ‘ಬಡತನದಿಂದಾಗಿ ಕುಟುಂಬ ನಿರ್ವಹಣೆಯೇ ದುಸ್ತರವಾಗಿರುವ ಪ್ರಸಂಗಗಳನ್ನು ಹತ್ತಿರದಿಂದ ಕಂಡು ಅಂತವರಿಗೆ ನೆರವಾಗುವ ದೃಷ್ಟಿಯಿಂದ ಕಳೆದ ಹಲವು ವರ್ಷಗಳಿಂದ ತಾವು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಿರುವುದಾಗಿ’ ಹೇಳಿದರು.

ಗುಳೇದಗುಡ್ಡದ ಮರಡಿ ಮಠದ ಕಾಡಸಿದ್ದೇಶ್ವರ ಶ್ರೀಗಳು, ನಿಡಗುಂದಿಯ ರುದ್ರಮುನಿ ಶ್ರೀಗಳು, ಹರನಾಳ ಸಂಗನಬಸವ ಶ್ರೀಗಳು, ಜಿ. ವೈ. ಹೆರಕಲ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಚನ್ನನಗೌಡ ಪರನಗೌಡರ, ಸದಸ್ಯ ನಿಂಗಪ್ಪ ಮಾಗನೂರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಕ್ಕುಬಾಯಿ ಹಿರೇಕುರುಬರ, ಬಿ.ವಿ.ವಿ ಸಂಘದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಶೋಕ ಸಜ್ಜನ, ಎಸ್.ಎಂ ಹರಗಬಲ್, ಡಿವೈಎಸ್‌ಪಿ ರವೀಂದ್ರ ಶಿರೂರ, ಬಸನಗೌಡ ತೆಗ್ಗಿನಮನಿ, ರಾಜು ನಾಯಕರ, ರಾಜು ಮುದೇನೂರ, ಶೇಖರಪ್ಪ ಮಾಗನೂರ, ಎಂ.ಎಸ್. ವೈಜಾಪೂರ ಉಪಸ್ಥಿತರಿದ್ದರು. ಸಾಮೂಹಿಕ ವಿವಾಹ ಸಮಾರಂಭದಲ್ಲಿ 16 ಜೋಡಿ ಹಸೆಮಣೆ ಏರಿ ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT