‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೊ ವರದಿ ಪ್ರಕಾರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಒಟ್ಟು 45,795 ಅಪರಾಧ ಪ್ರಕರಣ ದಾಖಲಾಗಿವೆ. ಬೆಂಗಳೂರಿನ ಎರಡರಷ್ಟು ಜನಸಂಖ್ಯೆ ಹೊಂದಿರುವ ಮುಂಬೈನಲ್ಲಿ 39 ಸಾವಿರ ಅಪರಾಧ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಿತ್ಯ ಹೆಚ್ಚಿರುವುದನ್ನು ಈ ಅಂಕಿಅಂಶ ಎತ್ತಿ ತೋರಿಸುತ್ತದೆ. ಇದು ಸರ್ಕಾರದ ದೊಡ್ಡ ವೈಫಲ್ಯ’ ಎಂದು ಟೀಕಿಸಿದರು.