ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾರಣಿಗಳ ಅಪರಾಧ ವಿಚಾರಣೆಗೆ 12 ನ್ಯಾಯಾಲಯ

Last Updated 12 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ 1,571 ಅಪರಾಧ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಒಂದು ವರ್ಷದ ಅವಧಿಗೆ 12 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ರಾಜಕಾರಣಿಗಳ ಅಪರಾಧ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಸಿದ್ಧ ಎಂದು ಇದೇ 8ರಂದು ಹಣಕಾಸು ಸಚಿವಾಲಯ ತಾತ್ವಿಕ ಒಪ್ಪಿಗೆ ನೀಡಿತ್ತು. ಈ ನ್ಯಾಯಾಲಯಗಳ ಸ್ಥಾಪನೆಗೆ ₹7.80 ಕೋಟಿ ವೆಚ್ಚವಾಗಲಿದೆ ಎಂದು ಸಚಿವಾಲಯ ಹೇಳಿದೆ. ತ್ವರಿತಗತಿ ನ್ಯಾಯಾಲಯಗಳ ರೀತಿ ರಾಜಕಾರಣಿಗಳ ಅಪರಾಧ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಆರಂಭಿಸುವ ಮೂಲಕ ರಾಜಕಾರಣದ ಅಪರಾಧೀಕರಣ ತಡೆ ಸಾಧ್ಯವಿದೆ ಎಂದು ನ. 1ರಂದು ಸುಪ್ರೀಂ ಕೋರ್ಟ್‌ ಹೇಳಿತ್ತು. ಬಿಜೆಪಿ ಮುಖಂಡ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರ ಅರ್ಜಿ ವಿಚಾರಣೆ ವೇಳೆ ಹೀಗೆ ಹೇಳಲಾಗಿತ್ತು.

ಲೋಕಸಭೆಯ 184 ಮತ್ತು ರಾಜ್ಯಸಭೆಯ 44 ಸದಸ್ಯರ ವಿರುದ್ಧ ಅಪರಾಧ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಅಪರಾಧ ಪ್ರಕರಣ ಎದುರಿಸುತ್ತಿ
ರುವ ಅತಿ ಹೆಚ್ಚು ಶಾಸಕರಿದ್ದಾರೆ (160). ಎರಡನೇ ಸ್ಥಾನದಲ್ಲಿರುವ ಉತ್ತರ ಪ್ರದೇಶದ 160 ಮತ್ತು ಮೂರನೇ ಸ್ಥಾನದಲ್ಲಿರುವ ಬಿಹಾರದ 141 ಶಾಸಕರ ವಿರುದ್ಧ ಅಪರಾಧ ದೂರುಗಳು ದಾಖಲಾಗಿವೆ. ಕರ್ನಾಟಕದ 73 ಶಾಸಕರ ವಿರುದ್ಧದ ಅಪರಾಧ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT