ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ: ಸಹಾಯಕ ನಿರ್ದೇಶಕ ಎಸಿಬಿಗೆ ಬಲೆಗೆ

Last Updated 12 ಡಿಸೆಂಬರ್ 2017, 19:46 IST
ಅಕ್ಷರ ಗಾತ್ರ

ಬೆಂಗಳೂರು: ಕುಡಿಯುವ ನೀರಿನ ಬಾಟಲಿಗೆ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ದರ ವಸೂಲು ಮಾಡಿದ ರೆಸ್ಟೋರೆಂಟ್ ವಿರುದ್ಧ ಕ್ರಮ ಕೈಗೊಳ್ಳದಿರಲು ₹17 ಸಾವಿರ ಲಂಚ ಪಡೆದ ಆರೋಪದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಸ್. ಕುಮಾರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ಬಂಧಿಸಿದ್ದಾರೆ.

ಹೆಬ್ಬಾಳದಲ್ಲಿರುವ ರೆಸ್ಟೋರೆಂಟ್‌ವೊಂದರ ಮಾಲೀಕರು ನೀರಿನ ಬಾಟಲಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಈ ಬಗ್ಗೆ, ರೆಸ್ಟೋರೆಂಟ್‌ಗೆ ಇಲಾಖೆ ನೋಟಿಸ್ ನೀಡಿತ್ತು. ನಂತರ, ಕ್ರಮ ಕೈಗೊಳ್ಳದಿರಲು ₹ 20 ಸಾವಿರ ಲಂಚ ನೀಡಬೇಕು ಎಂದು ಒತ್ತಾಯಿಸಿದ ಕುಮಾರ್‌, ಮುಂಗಡವಾಗಿ ₹ 3 ಸಾವಿರ ಪಡೆದಿದ್ದರು. ಸೋಮವಾರ ಬಾಕಿ ಹಣವನ್ನು ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT