ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಹಗರಣ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ದೋಷಿ

Last Updated 13 ಡಿಸೆಂಬರ್ 2017, 7:53 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‌ನ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹರೀಶ್‌ ಚಂದ್ರ ಗುಪ್ತಾ ಹಾಗೂ ಇತರ ಆರೋಪಿಗಳನ್ನು ದೋಷಿಗಳೆಂದು ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ವಿಶೇಷ ನ್ಯಾಯಾಧೀಶ ಭರತ್‌ ಪರಷಾರ್‌ ಪ್ರಕರಣದಲ್ಲಿನ ಆರೋಪಿಗಳು ಭ್ರಷ್ಟಾಚಾರ ಹಾಗೂ ಮೋಸ, ಪಿತೂರಿ ಕ್ರಿಮಿನಲ್‌ ಆಪಾದನೆಗಳಲ್ಲಿ ದೋಷಿಗಳೆಂದು ತೀರ್ಪು ನೀಡಿದರು. ಅಪರಾಧಿಗಳ ಶಿಕ್ಷೆ ಪ್ರಮಾಣ ಗುರುವಾರ ಪ್ರಕಟಗೊಳ್ಳಲಿದೆ.

ರಾಜ್ಹಾರಾದಲ್ಲಿ ಖಾಸಗಿ ಸಂಸ್ಥೆ ವಿನಿ ಐರನ್ ಹಾಗೂ ಸ್ಟೀಲ್‌ ಉದ್ಯೋಗ್‌ ಲಿ.ಗೆ ಅನಧಿಕೃತವಾಗಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಒಟ್ಟು ಒಂಬತ್ತು ಆರೋಪಿಗಳ ಪೈಕಿ ನಾಲ್ವರು ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹರೀಶ್‌ ಚಂದ್ರ ಗುಪ್ತಾ, ಆಗಿನ ಮುಖ್ಯ ಕಾರ್ಯದರ್ಶಿ ಎ.ಕೆ.ಬಸು, ಇತರರು ದೋಷಿಗಳಾಗಿದ್ದಾರೆ. 

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ವಿಷಯದಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ 2015ರ ಏಪ್ರಿಲ್‌ನಲ್ಲಿ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT