ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿತ್ ಶರ್ಮಾ ಭರ್ಜರಿ ದ್ವಿಶತಕ: ಶ್ರೀಲಂಕಾಗೆ 393 ರನ್‌ಗಳ ಗೆಲುವಿನ ಗುರಿ

Last Updated 13 ಡಿಸೆಂಬರ್ 2017, 10:24 IST
ಅಕ್ಷರ ಗಾತ್ರ

ಮೊಹಾಲಿ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ದ್ವಿಶತಕ ಸಿಡಿಸಿದ್ದು ಭಾರತ 50 ಓವರ್‌ಗಳಲ್ಲಿ 392 ರನ್‌ಗಳಿಗೆ ಮೂಲಕ ಬೃಹತ್ ಮೊತ್ತ ಪೇರಿಸಿದೆ. ಲಂಕಾಗೆ 393 ರನ್‌ಗಳ ಗೆಲುವಿನ ಗುರಿ ನೀಡಿದೆ. 

ಭಾರತ  ಟಾಸ್ ಸೋತು ಬಾಟಿಂಗ್‌ಗೆ ಇಳಿಯಿತು. ಎಚ್ಚರಿಕೆಯ ಆಟವಾಡಿದ ಭಾರತೀಯ ಬ್ಯಾಟ್ಸ್‌ಮನ್‌ಗಳು ಬೃಹತ್‌ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ತಾಳ್ಮೆಯ ಆಟವಾಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಶತಕದ ಬಳಿಕ ಆಕ್ರಮಣಕಾರಿ ಆಟವಾಡಿದ ರೋಹಿತ್ ಶರ್ಮಾ ದ್ವಿಶತಕ ಸಿಡಿಸಿದರು. 153 ಬಾಲ್‌ಗಳಲ್ಲಿ 208 ರನ್‌ ಬಾರಿಸಿದರು. ಇದರಲ್ಲಿ 13 ಬೌಂಡರಿ ಮತ್ತು 12 ಸಿಕ್ಸರ್‌ಗಳು ಸೇರಿವೆ. ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಮೂರು ಸಲ ದ್ವಿಶತಕ ಬಾರಿಸಿದ್ದಾರೆ. 

ಶ್ರೀಲಂಕಾ ಈ ಪಂದ್ಯವನ್ನು ಗೆಲ್ಲಲು 393 ರನ್‌ ಗಳಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT