ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಹೊನ್ನಾವರದಲ್ಲಿ ಶಾಲಾ ಬಾಲಕಿ ಮೇಲೆ ಹಲ್ಲೆ: ಕುತ್ತಿಗೆಗೆ ಚೂರಿ ಹಾಕಲು ಯತ್ನ

Last Updated 14 ಡಿಸೆಂಬರ್ 2017, 6:28 IST
ಅಕ್ಷರ ಗಾತ್ರ

‌ಹೊನ್ನಾವರ: ಶಾಲೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಕೈ ಇರಿತದಿಂದಾಗಿ ಗಾಯಗೊಂಡಿದ್ದಾಳೆ.

ಇಲ್ಲಿನ ಕೊಡ್ಲಗದ್ದೆ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಶೇಖರ ನಾಯ್ಕ ಹಲ್ಲೆಗೆ ಒಳಗಾದವಳು.

ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕುತ್ತಿಗೆಗೆ ಚೂರಿ ಹಾಕಲು ಯತ್ನಿಸಿದ್ದಾರೆ.

ಯತ್ನ ಫಲಿಸದೇ ಕೈಗೆ ಚೂರಿ ತಾಕಿದ್ದು, ಕಾವ್ಯಾ ಗಾಯಗೊಂಡಿದ್ದಾಳೆ. ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಡಿ.19ರಿಂದ ಜೈಲ್‌ ಭರೋ: ಸಚಿವ ಅನಂತಕುಮಾರ ಹೆಗಡೆ

ಶಿರಸಿ: ಹೊನ್ನಾವರದಲ್ಲಿ ಕಾವ್ಯಾ ನಾಯ್ಕ ಮೇಲೆ ಚಾಕು ಇರಿತ ನಡೆದಿರುವುದನ್ನು ಎಲ್ಲರೂ ಗಂಭೀರ ಪರಿಗಣಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆಯ ವಿರುದ್ಧ ಇಡೀ ರಾಜ್ಯದಾದ್ಯಂತ ಜೈಲ್ ಭರೋ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗುವುದು. ಡಿ.19 ರಿಂದ ಉತ್ತರ ಕನ್ನಡದಿಂದ ಈ ಕಾರ್ಯಕ್ರಮ ಪ್ರಾರಂಭಿಸಲಾಗುವುದು.

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಈ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT