ಬಂಟ್ವಾಳ

‘ಸರ್ವರಿಗೂ ಸೂರು’ ಸರ್ಕಾರದ ಆದ್ಯತೆ’

ಸರ್ಕಾರದ ವಿವಿಧ ಯೋಜನೆಗಳಿಂದ ಹಾಗೂ ಸಾಮಾಜಿಕ ಬದಲಾವಣೆ ಮೂಲಕ ಹಂತ ಹಂತವಾಗಿ ಕಡಿಮೆಯಾಗುತ್ತಾ ಬಂದವು

ಬಂಟ್ವಾಳ: ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಬಸವ ವಸತಿ ಯೋಜನೆ, ರಾಜೀವ್‌ ಗಾಂಧಿ ವಸತಿ ನಿಗಮ ಇತರ ಯೋಜನೆಯಡಿ ಜನತೆಗೆ ನಿವೇಶನ ಜೊತೆಗೆ ಸರ್ಕಾರವು ವಸತಿ ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳ ಪುರಸಭೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಸತಿ ಮಂಜೂರಾತಿ ಪತ್ರವನ್ನು ಗುರುವಾರ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 60 ವರ್ಷಗಳ ಹಿಂದೆ ನಿವೇಶನರಹಿತ ಕುಟುಂಬಗಳ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದ್ದವು. ಸರ್ಕಾರದ ವಿವಿಧ ಯೋಜನೆಗಳಿಂದ ಹಾಗೂ ಸಾಮಾಜಿಕ ಬದಲಾವಣೆ ಮೂಲಕ ಹಂತ ಹಂತವಾಗಿ ಕಡಿಮೆಯಾಗುತ್ತಾ ಬಂದವು ಎಂದರು.

ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಪುರಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರು ₹10 ಕೋಟಿಗೂ ಹೆಚ್ಚು ಅನುದಾನ ಒದಗಿಸಿದ್ದಾರೆ ಎಂದರು.

ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಪ್ರಾಸ್ತಾವಿಕ ಮತನಾಡಿ, ರಾಜೀವಗಾಂಧಿ ವಸತಿ ಯೋಜನೆಯಡಿ ವಸತಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ₹1.20ಲಕ್ಷ ಮತ್ತು ಕೇಂದ್ರದಿಂದ ₹ 1.50ಲಕ್ಷ ಹೀಗೆ ಒಟ್ಟು ₹ 2.70ಲಕ್ಷ ವೆಚ್ಚದಲ್ಲಿ ಒಟ್ಟು 700 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಿಸಲು ನಾಲ್ಕು ಹಂತದಲ್ಲಿ ಸಹಾಯಧನ ಬಿಡುಗಡೆಯಾಗುತ್ತದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ, ಮೇಲ್ವಿಚಾರಕಿ ಉಮಾವತಿ, ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಜಗದೀಶ ಕುಂದರ್, ಪ್ರವೀಣ ಬಿ., ಮಹಮ್ಮದ್ ಶರೀಫ್, ನಾರ್ಬರ್ಟ್ ಡಿಸೋಜ, ವಸಂತಿ ಚಂದಪ್ಪ, ಜೆಸಿಂತಾ ಡಿಸೋಜ ಮತ್ತು ಆಶ್ರಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಎಡಮಂಗಲ ದೇವಳ: ಪ್ರತಿಷ್ಠಾ ಮಹೋತ್ಸವ

ಸುಬ್ರಹ್ಮಣ್ಯ
ಎಡಮಂಗಲ ದೇವಳ: ಪ್ರತಿಷ್ಠಾ ಮಹೋತ್ಸವ

24 Mar, 2018

ಮಂಗಳೂರು
ವೆನ್ಲಾಕ್‌ ಐಸಿಯು ಸಾಮರ್ಥ್ಯ ಹೆಚ್ಚಿಸಿ

ವೆನ್ಲಾಕ್‌ ಆಸ್ಪತ್ರೆಯ ಐಸಿಯು ತುರ್ತು ಚಿಕಿತ್ಸಾ ಘಟಕದಲ್ಲಿ ಬೇಡಿಕೆಗೆ ತಕ್ಕಂತೆ ಹಾಸಿಗೆ ಲಭ್ಯವಿಲ್ಲದೆ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಐಸಿಯು ಹಾಸಿಗೆ ಸಾಮರ್ಥ್ಯ ಹೆಚ್ಚಿಸುವಂತೆ ನಗರದಲ್ಲಿ...

24 Mar, 2018

ಮಂಗಳೂರು
ಪೂಜಾರಿಗೆ ಪ್ರಾಪ್ತಿಯಾದ ರಾಹುಲ್‌ ವರ

ಕಳೆದ ಹಲವಾರು ವರ್ಷಗಳಿಂದ ಪಕ್ಷದಿಂದಲೇ ದೂರವಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಇದೀಗ ಎಐಸಿಸಿ ಅಧಿನಾಯಕ ರಾಹುಲ್‌ ಗಾಂಧಿ ಅಭಯ ದೊರೆತಿದೆ....

24 Mar, 2018

ಮಂಗಳೂರು
‘ಲಿಂಗಾಯತ ಧರ್ಮ: ನಿರ್ಣಯ ರದ್ದುಗೊಳಿಸಿ’

ರಾಜ್ಯದ ಸರ್ಕಾರದ ಚುನಾವಣೆಯನ್ನು ಎದುರಿಗಿಟ್ಟುಕೊಂಡು ಲಿಂಗಾಯತ ಸಮಾಜಕ್ಕೆ ಮೀಸಲಾತಿ ನೀಡುವ ನಿರ್ಣಯವು ಕಾಂಗ್ರೆಸ್‌ನ ಒಡೆದು ಆಳುವ ನೀತಿಯಾಗಿದೆ. ಲಿಂಗಾಯತ ಸಮಾಜಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ...

23 Mar, 2018
‘ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’

ಉಳ್ಳಾಲ
‘ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’

23 Mar, 2018