ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗತ್ಯ ವಸ್ತುಗಳ ಬೆಲೆ ಏರಿಕೆ: ಪ್ರತಿಭಟನೆ

Last Updated 15 ಡಿಸೆಂಬರ್ 2017, 6:29 IST
ಅಕ್ಷರ ಗಾತ್ರ

ಮಧುಗಿರಿ: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಳ ಮಾಡುತ್ತಿರುವುದನ್ನು ವಿರೋಧಿಸಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಈಚೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಪದೇ ಪದೇ ಅಡುಗೆ ಅನಿಲ, ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ, ಜನ ಸಾಮಾನ್ಯರ ರಕ್ತವನ್ನು ಹೀರುತ್ತಿದೆ. ತಕ್ಷಣ ಸರ್ಕಾರ ಜನ ಸಾಮಾನ್ಯರ ಹಿತವನ್ನು ಕಾಪಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.

ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ಡಿ.ಪಾರ್ವತಮ್ಮ, ದಿನ ಬಳೆಕೆಯ ವಸ್ತುಗಳ ಬೆಲೆ ಏರಿಯಾಗುತ್ತಿರುವುದರಿಂದ ಕಾರ್ಮಿಕರು ಹಾಗೂ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನೀತಿಗಳಿಂದ ಎಲ್ಲರಿಗೂ ಹೊರೆಯಾಗುತ್ತಿದೆ. ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಕಮಲಾ, ಪದಾಧಿಕಾರಿಗಳಾದ ಶ್ಯಾಮಲಾ, ಸರೋಜಾ, ಭಾರತಿ, ಬಿ.ಎಲ್.ಪಾರ್ವತಮ್ಮ, ಸುಶೀಲಮ್ಮ, ಪೋತರಾಜು, ಗ್ರಾಮ ಪಂಚಾಯಿತಿ ಸುಬ್ರಮಣ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT