ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಂದಿದೆ ನೋಡಿ ಮಾರಿಕಾಂಬ ಹಬ್ಬ!’

Last Updated 16 ಡಿಸೆಂಬರ್ 2017, 7:05 IST
ಅಕ್ಷರ ಗಾತ್ರ

ಕಾರವಾರ: ‘ಸಾಕಾ ಬೇಕಾ ತಪರಾಕಿ ಸಿದ್ದರಾಮಯ್ಯನವರೇ! ನಿಂಬಾಳ್ಕರ್, ರಾಮಲಿಂಗ ರೆಡ್ಡಿ ಹಾಗೂ ಕೆಂಪಯ್ಯನಂಥ ಜನರಿದ್ದರೆ ಮುಂದಿದೆ ನೋಡಿ ಇನ್ನು ಶಿರಸಿಯ ದೊಡ್ಡ ಮಾರಿಕಾಂಬ ಹಬ್ಬ!’ ಹೀಗೆಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಗುರುವಾರ ತಮ್ಮ ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್‌ ವೈರಲ್‌ ಆಗಿದೆ.

ಐತಿಹಾಸಿಕ ತೀರ್ಪು: ‘ಶಿರಸಿಯಲ್ಲಿ ಮೊನ್ನೆಯ ದಿನ ಪೊಲೀಸ್‌ ಪ್ರೇರಿತ ಗಲಭೆಯಲ್ಲಿ ಬಂಧಿತರಾಗಿದ್ದ 62 ಮಂದಿ ಮುಗ್ಧರನ್ನು ಶಿರಸಿ ನ್ಯಾಯಾಲಯ ಗುರುವಾರ ಜಾಮೀನಿನ ಮೇಲೆ ಬಿಡುಗಡೆಗೆ ಮಾಡಿದೆ.

ಕೇವಲ ಒಂದೂವರೆ ದಿನದಲ್ಲಿ ಬಿಡುಗಡೆಯ ಆದೇಶ ಪಡೆದ ಕ್ರಮವು ಐತಿಹಾಸಿಕವಾಗಿದ್ದು, ಈ ಆದೇಶವು ಪೊಲೀಸ್‌ ಸಮವಸ್ತ್ರದಲ್ಲಿ ದಾದಾಗಿರಿ ಮಾಡಲು ಹೊರಟಿದ್ದ ನಿಂಬಾಳ್ಕರ ಎಂಬ ಹುಂಬ ಅಧಿಕಾರಿಗೆ ತೀವ್ರವಾದ ಕಪಾಳ ಮೋಕ್ಷ ಮಾಡಿದಂತಾಗಿದೆ! ಸೆಕ್ಷನ್‌ 307 ಅನ್ನು ಮನಬಂದಂತೆ ಜರುಗಿಸಿ ವಿಕೃತ ಪಭುತ್ವ ಸಾಧಿಸಲು ಹೊರಟರೆ, ಈ ದೇಶದ ಕಾನೂನು ಸುಮ್ಮನೆ ಕೂರುವುದಿಲ್ಲ ಎಂದು ಇಂದಿನ ನ್ಯಾಯಾಲಯದ ತೀರ್ಮಾನ ಸ್ಪಷ್ಟವಾಗಿ ತಿಳಿಸಿದೆ’ ಎಂದು ಅದರಲ್ಲಿ ಹೇಳಿದ್ದಾರೆ.

‘ಸನ್ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಮುಖವನ್ನು ಮತ್ತೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಿ! ನಿಮ್ಮ ಒಡ್ಡೋಲಗದ ಸಹೋದ್ಯೋಗಿಗಳು ಸಹ ನಿಮ್ಮನ್ನು ನಡು ನೀರಿನಲ್ಲಿ ಕೈ ಬಿಟ್ಟು ಹೋಗುವ ದಿನ ದೂರವಿಲ್ಲ.

ವಿದ್ರೋಹಿಗಳ ಬೆಂಬಲಕ್ಕೆ ನಿಂತು ದೇಶ ಭಕ್ತರನ್ನು ಸದೆಬಡಿಯುವ ನಿಮ್ಮ ಯೋಜನೆಗೆ, ನಿಮ್ಮ ಅಮೂಲ್ಯ ಸಲಹೆಗಾರನಾಗಲೀ ಅಥವಾ ನಾಲಾಯಕ್ ಗೃಹ ಮಂತ್ರಿಯಾಗಲಿ ಇನ್ನೇನು ತಾನೇ ಕಿಸಿಯಲು ಸಾಧ್ಯ?. ಬರುವ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದ್ದು ಕೋಮುವಾದಿ, ಜಾತಿವಾದಿ ಹುಂಬ ಸರ್ಕಾರವಲ್ಲದೆ, ದೇಶದೊಳಗೆ ಇರುವ ವಿದ್ರೋಹಿಗಳಿಗೆ ಸಹ ನಮ್ಮ ಸಂಘಟಿತ ರುಚಿ ತೋರಿಸಲಿದ್ದೇವೆ. ಹುಂಬ ಧೈರ್ಯವಿದ್ದರೆ ಎದುರಿಸಲಿ!’ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT