ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ಚಂಚಲ ವಹಿವಾಟು

Last Updated 16 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಮುಂಬೈ: ಷೇರುಪೇಟೆಗಳಲ್ಲಿ ಎರಡನೇ ವಾರವೂ ಚಂಚಲ ವಹಿವಾಟು ನಡೆಯಿತು. ಹೀಗಿದ್ದರೂ ಸೂಚ್ಯಂಕಗಳು ಏರುಮುಖ ಚಲನೆಯನ್ನು ಕಾಯ್ದುಕೊಂಡಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ವಾರದ ವಹಿವಾಟಿನಲ್ಲಿ 213 ಅಂಶ ಏರಿಕೆ ಕಂಡು, 33,463 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ಹಿಂದಿನ ವಾರ 417 ಅಂಶ ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ ವಾರದ ವಹಿವಾಟಿನಲ್ಲಿ 68 ಅಂಶ ಹೆಚ್ಚಾಗಿ 10,333 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು.

ಕಚ್ಚಾ ತೈಲ ಬೆಲೆ ಏರಿಕೆ, ಚಿಲ್ಲರೆ ಹಣದುಬ್ಬರ ಮತ್ತು ಕೈಗಾರಿಕಾ ಪ್ರಗತಿಯ ಅಂಕಿ–ಅಂಶಗಳ ಪ್ರಭಾವದಿಂದ ಷೇರುಪೇಟೆಯಲ್ಲಿ ಮಾರಾಟದ ಒತ್ತಡ ಸೃಷ್ಟಿಯಾಗಿತ್ತು. ಆದರೆ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎನ್ನುವ ನಿರೀಕ್ಷೆ ಹಾಗೂ ಗುಜರಾತ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸ್ಪ‍ಷ್ಟ ಬಹುತಮ ಬರಲಿದೆ ಎನ್ನುವ ಮತಗಟ್ಟೆ ಸಮೀಕ್ಷೆಗಳು ಹೂಡಿಕೆ ಚಟುವಟಿಕೆಯನ್ನು ಹೆಚ್ಚಿಸಿತು ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT