ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ಟೆಲ್‌ ಪೇಮೆಂಟ್ಸ್‌ ಬ್ಯಾಂಕ್‌ನ ಇ–ಕೆವೈಸಿ ಪರವಾನಗಿ ರದ್ದು

Last Updated 16 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಆಧಾರ್‌ ಕಾಯ್ದೆ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ಭಾರ್ತಿ ಏರ್‌ಟೆಲ್ ಮತ್ತು ಏರ್‌ಟೆಲ್‌ ಪೇಮೆಂಟ್ಸ್‌ ಬ್ಯಾಂಕ್‌ನ ಇ–ಕೆವೈಸಿ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ.

ಸಂಸ್ಥೆಯ ಮಳಿಗೆಗಳಲ್ಲಿ ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಿಸುವಾಗ ಗ್ರಾಹಕರಿಗೆ ಸೂಚನೆ ನೀಡದೇ ಪೇಮೆಂಟ್ಸ್‌ ಬ್ಯಾಂಕ್‌ ಖಾತೆಯನ್ನೂ ತೆರೆಯಲಾಗುತ್ತಿದೆ. ಎಲ್‌ಪಿಜಿ ಸಬ್ಸಿಡಿ ಮೊತ್ತವೂ ಪೇಮೆಂಟ್ಸ್‌ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುವಂತೆ ಮಾಡಲಾಗುತ್ತಿದೆ. ಈ ಬಗ್ಗೆ ಗ್ರಾಹಕರು ದೂರು ನೀಡಿರುವುದರಿಂದ ಜಾರಿಗೆ ಬರುವಂತೆ ಪರವಾನಗಿ ರದ್ದು ಮಾಡಿರುವುದಾಗಿ ತಿಳಿಸಿದೆ. ಇದರಿಂದ ಸಂಸ್ಥೆಯು ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುವುದು ಸಾಧ್ಯವಾಗುವುದಿಲ್ಲ. ಆಧಾರ್‌ ಸಂಖ್ಯೆ ಬಳಸಿ ಹೊಸ ಖಾತೆ ತೆರೆಯಲೂ ಆಗುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT