ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪ್ರವೇಶಿಸಲ್ಲ: ಪ್ರಿಯಾಂಕಾ

Last Updated 16 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಯಾವುದೇ ಕಾರಣಕ್ಕೂ ತಾವು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ  ಶನಿವಾರ ಸ್ಪಷ್ಟವಾಗಿ ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ ಸೋನಿಯಾ ಗಾಂಧಿ ನಿವೃತ್ತಿ ಘೋಷಿಸಿದ ನಂತರ ಪ್ರಿಯಾಂಕಾ ರಾಜಕೀಯಕ್ಕೆ ಧುಮಕುತ್ತಾರೆ ಎಂಬ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

ಸೋನಿಯಾ ಪ್ರತಿನಿಧಿಸುವ ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸುವ ಬಗ್ಗೆ ಹರಡಿದ್ದ ಸುದ್ದಿಗಳನ್ನು ಅವರು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ.

‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನನ್ನ ತಾಯಿ ಸೋನಿಯಾ ಗಾಂಧಿ ಅವರೇ ರಾಯ್‌ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ರಾಯ್‌ ಬರೇಲಿಯಿಂದ ನಾನು ಸ್ಪರ್ಧಿಸುವ ಪ್ರಶ್ನೆ ಇಲ್ಲ. ನನ್ನ ತಾಯಿಯೇ ಅಲ್ಲಿಂದ ಕಣಕ್ಕಿಳಿಯಲಿದ್ದಾರೆ’ ಎಂದು ಪ್ರಿಯಾಂಕಾ ಹೇಳಿರುವುದಾಗಿ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT