ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ: ಫಿಲಿಪ್ಪೀನ್ಸ್‌ನಲ್ಲಿ ಮೂವರು ನಾಪತ್ತೆ

Last Updated 16 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಮನಿಲಾ: ಪೂರ್ವ ಫಿಲಿಪ್ಪೀನ್ಸ್‌ನಲ್ಲಿ ಕೈ–ತಕ್‌ ಚಂಡಮಾರುತ ಹಾಗೂ ಪ್ರವಾಹಕ್ಕೆ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಸಾವಿರಾರು ಮಂದಿ ಮನೆ ತೊರೆದಿದ್ದಾರೆ.

‘ಗಂಟೆಗೆ 100 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಚಂಡಮಾರುತವು ಸಮರ್‌ ದ್ವೀಪದಲ್ಲಿ ಹಾನಿ ಉಂಟುಮಾಡಿ, ಮಧ್ಯ ಫಿಲಿಪ್ಪೀನ್ಸ್‌ ಕಡೆ ಸಂಚರಿಸುತ್ತಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

‘ಚಂಡಮಾರುತದ ಪರಿಣಾಮ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಹಾಗೂ ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತವಾಗಿದೆ. 38,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ‘ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟ್ಯಾಕ್ಲೋಬನ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಬಾಲಕಿ ಹಾಗೂ ಒಬ್ಬ ಮಹಿಳೆ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT