ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ

Last Updated 17 ಡಿಸೆಂಬರ್ 2017, 6:23 IST
ಅಕ್ಷರ ಗಾತ್ರ

ಲಿಂಗಸುಗೂರು: ತಾಲ್ಲೂಕಿನ ನೀರಲಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಹಾಂತೇಶ ಸುರಪುರ ನೇತೃತ್ವದಲ್ಲಿ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಮನೆ ಮನೆಗೆ ತೆರಳಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಮತ್ತು ಶಾಲೆಗೆ ಕರೆತರುವ ವಿಶೇಷ ಕಾರ್ಯಕ್ರಮವನ್ನು ಶನಿವಾರ ನಡೆಸಿದರು.

ಮುಖ್ಯ ಶಿಕ್ಷಕ ಮಹಾಂತೇಶ ಸುಪುರ ಮಾತನಾಡಿ, ‘2016–17ನೇ ಸಾಲಿನಲ್ಲಿ ದಾಖಲಾತಿ ಹೊಂದಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ವಯೋಮಿತಿ ಆಧರಿಸಿ ಆಯಾ ತರಗತಿಗಳಿಗೆ ಮಕ್ಕಳ ಸೇರ್ಪಡೆ ಮಾಡುವ ಉದ್ದೇಶ ಹೊಂದಿದ್ದೇವೆ. ಕೆಲ ಮಕ್ಕಳನ್ನು ಗುರುತಿಸಿ ಶಾಲೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ’ ಎಂದು ವಿವರಿಸಿದರು.

‘ಕೆಲವು ಮಕ್ಕಳು ಶಾಲಾ ಶಿಕ್ಷಕರು, ಗ್ರಾಮಸ್ಥರು ತಿಳಿ ಹೇಳಿದರೂ ಶಾಲೆಗೆ ಬರಲು ಒಪ್ಪುತ್ತಿಲ್ಲ. ಈ ಬಗ್ಗೆ ಮತ್ತೆ ಪ್ರಯತ್ನಿಸಲಾಗುವುದು. ಆದರೂ ಬಾರದಿದ್ದರೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು.

ಒಟ್ಟಾರೆ ಮಕ್ಕಳು ಕಡ್ಡಾಯ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಗುರಿ ಹೊಂದಿದ್ದು ಪಾಲಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT