ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸಾಮರಸ್ಯ ಕದಡುವ ಪಕ್ಷ: ಶಾಮನೂರು

Last Updated 18 ಡಿಸೆಂಬರ್ 2017, 8:42 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದರೆ, ಬಿಜೆಪಿ ಸಾಮರಸ್ಯವನ್ನು ಕದಡುವ ಕೆಲಸ ಮಾಡುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದರು.

ಶನಿವಾರ ಹಳೇ ಜಾಲಿನಗರದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ ಹಮ್ಮಿಕೊಂಡಿದ್ದ ರಕ್ತದಾನ ಹಾಗೂ ಟಿ.ಬಿ ಕಾಯಿಲೆಗೆ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರು ಆರೋಗ್ಯ ಶಿಬಿರ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಸಾಮರಸ್ಯ ಕಾಪಾಡುತ್ತಿದ್ದರೆ, ಬಿಜೆಪಿಯವರು ದೇವರು ಧರ್ಮದ ಹೆಸರಿನಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

‘ದಾವಣಗೆರೆ ಯಲ್ಲೂ ಕೆಲವರು ಶಾಂತಿ-ಸಾಮರಸ್ಯಕ್ಕೆ ಧಕ್ಕೆ ತರುವಂತಹ ಪ್ರಯತ್ನ ನಡೆಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ 8 ಸ್ಥಾನಗಳನ್ನೂ ಗೆಲ್ಲುವ ಕನಸು ಕಾಣುತ್ತಿದ್ದು, ಅದು ನನಸಾಗುವುದಿಲ್ಲ’ ಎಂದರು.

ಹಿಂದೆ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ನಾಯಕರು ಭ್ರಷ್ಟಾಚಾರ ಆರೋಪದ ಮೇಲೆ ಜೈಲಿಗೆ ಹೋಗಿದ್ದರು. ಕಾಂಗ್ರೆಸ್ ಜನರ ಹಣವನ್ನು ಜನರಿಗೆ ಮೀಸಲಿಟ್ಟು ಅನ್ನಭಾಗ್ಯ, ಕ್ಷೀರ ಭಾಗ್ಯ, ಮಾತೃಪೂರ್ಣದಂತಹ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಷ್ಟೆ ಅಲ್ಲ; ರಾಜ್ಯದಲ್ಲೂ ಬಿಜೆಪಿಯನ್ನು ಜನರು ತಿರಸ್ಕರಿಸಲಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ಮಾತನಾಡಿ, ‘ಹಿಂದೆ ದಾವಣಗೆರೆಯಲ್ಲಿ ಬಿಜೆಪಿ ಮುಖಂಡರು ಮಾಡಿದ ಅವಘಡದಿಂದ ದಾವಣಗೆರೆಗೆ ಕೆಟ್ಟ ಹೆಸರು ಬಂದಿತ್ತು. ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕಾಳಜಿಯಿಂದ ಶಾಂತಿ-ಸಾಮರಸ್ಯಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುತ್ತಿದ್ದಾರೆ’ ಎಂದರು.

ಕಾಂಗ್ರೆಸ್‌ ಮುಖಂಡ ಬಿ.ವೀರಣ್ಣ ಮಾತನಾಡಿದರು. ಮೇಯರ್ ಅನಿತಾಬಾಯಿ ಮಾಲತೇಶ್, ಮುಖಂಡರಾದ ಅಯೂಬ್ ಪೈಲ್ವಾನ್, ಪಾಲಿಕೆ ಸದಸ್ಯರಾದ ಗೌರಮ್ಮ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಬಿ.ಎನ್.ಮಲ್ಲೇಶ್, ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದೊಡ್ಡಮನಿ, ಸಿಪಿಐ ಉಮೇಶ್ ಅವರನ್ನು ಸನ್ಮಾನಿಸಲಾಯಿತು.
ಉಪ ಮೇಯರ್ ನಾಗರತ್ನಮ್ಮ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಸತೀಶ್‌ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ನಲ್ಕುಂದ ಹಾಲೇಶ್, ಪಾಲಿಕೆ ಸದಸ್ಯರಾದ ಲಕ್ಷ್ಮೀದೇವಿ, ಬಸಪ್ಪ, ಗೋಣೆಪ್ಪ, ಹಬೀಬ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT