ಕನಕಪುರ

‘ರಾಜ್ಯದಲ್ಲಿ ಬಿಜೆಪಿ ತಂತ್ರ ಫಲಿಸದು’

ಒಟ್ಟಾರೆ ಮತದಾನದ ಶೇಕಡವಾರು ಮತಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಮತ ಲಭಿಸಿವೆ. ಎರಡು ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಯಾವ ಪ್ರಭಾವ ಬೀರುವುದಿಲ್ಲ

ಚೀರಣಕುಪ್ಪೆ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಡಿ.ಕೆ.ಸುರೇಶ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು

ಕನಕಪುರ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಲಿದ್ದು ಬಿ.ಜೆ.ಪಿ. ಕಾರ್ಯತಂತ್ರ ಇಲ್ಲಿ ಫಲಿಸುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ಹೇಳಿದರು.

ಕಸಬಾ ಹೋಬಳಿ ಚೀರಣಕುಪ್ಪೆ ಗ್ರಾಮದ ಬಸವೇಶ್ವರಸ್ವಾಮಿ ದೇವಾಲ ಯದಲ್ಲಿ ಸಂಸದ ಡಿ.ಕೆ.ಸುರೇಶ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಚೀರಣಕುಪ್ಪೆ ಮಹೇಶ್‌ ಏರ್ಪಡಿಸಿದ್ದ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಗುಜರಾತ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ಜನತೆ ನೀಡಿರುವ ತೀರ್ಪು ಸ್ವಾಗತಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಎಲ್ಲರೂ ಒಪ್ಪಲೇಬೇಕಾಗಿದೆ ತಿಳಿಸಿದರು. ಎರಡೂ ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುವ ವಿಶ್ವಾಸವಿತ್ತು. ಆದರೆ ಅದು ಹಾಗಾಗಿಲ್ಲ, ಜಾತ್ಯತೀತ ವ್ಯವಸ್ಥೆಗೆ ಇದು ಮಾರಕವೆಂದು ಬೇಸರ ವ್ಯಕ್ತಪಡಿಸಿದರು.

ಒಟ್ಟಾರೆ ಮತದಾನದ ಶೇಕಡವಾರು ಮತಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಮತ ಲಭಿಸಿವೆ. ಎರಡು ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಯಾವ ಪ್ರಭಾವ ಬೀರುವುದಿಲ್ಲ. ಇಲ್ಲಿನ ರಾಜಕಾರಣವೇ ಬೇರೆ ಅಲ್ಲಿಯ ರಾಜಕಾ ರಣವೇ ಬೇರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಮತ್ತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿ ಜನಪ್ರಿಯ ಕೆಲಸ ಮಾಡಿದ್ದಾರೆ ಎಂದರು. ತಾ.‌‌ಪಂ. ಅಧ್ಯಕ್ಷ ರಾಜಶೇಖರ್‌, ಮಹೇಶ್‌, ನಗರಸಭೆ ಸದಸ್ಯ ರಾಮ ಚಂದ್ರ, ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್‌.ಶಂಕರ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ವಿ.ಶ್ರೀನಿವಾಸ್‌, ಮುಖಂಡರಾದ ಎಂ.ಡಿ.ವಿಜಯದೇವು, ಪುಟ್ಟಮಾದೇಗೌಡ, ರಮೇಶ್‌, ಗುಂಡಣ್ಣ, ವೆಂಕಟಪ್ಪ, ನಾಗರಾಜು, ಚಂದ್ರಶೇಖರ್‌ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ವಿದ್ಯುತ್ ಸ್ವಾವಲಂಬನೆಗೆ ‘ಸೂರ್ಯ ರೈತ’

ರಾಮನಗರ
ವಿದ್ಯುತ್ ಸ್ವಾವಲಂಬನೆಗೆ ‘ಸೂರ್ಯ ರೈತ’

20 Jan, 2018
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ  ದರದಲ್ಲಿ ಔಷಧಿ’

ಚನ್ನಪಟ್ಟಣ
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಔಷಧಿ’

19 Jan, 2018

ರಾಮನಗರ
ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

ನೂತನ ಪಿಂಚಣಿ ಯೋಜನೆಯು ನೌಕರರಿಗೆ ಮಾರಕವಾಗಿದೆ. ಈ ಯೋಜನೆಗೆ ಒಳಪಡುವ ನೌಕರರ ಮೂಲ ವೇತನ ಹಾಗೂ ತುಟ್ಟಿ ಭತ್ಯೆಯ ಶೇ 10ರಷ್ಟು ನೌಕರರ ವೇತನದಲ್ಲಿ ಮುರಿದುಕೊಳ್ಳಲಾಗುತ್ತದೆ. ...

19 Jan, 2018
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

ಮನೆಯಿಂದ ಹೊರ ಬರದಂತೆ ಜನರಿಗೆ ಎಚ್ಚರಿಕೆ
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

18 Jan, 2018
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

ದನ ಮೇಯಿಸುತ್ತಿದ್ದ ವೇಳೆ ಕೊಂದಿದೆ
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

18 Jan, 2018