ಮುಧೋಳ

ಕಾಂಗ್ರೆಸ್ ಮುಕ್ತ ಕರ್ನಾಟಕ ಕಾಲ ಸನ್ನಿಹಿತ

‘ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರದ ವೈಖರಿ ವಾಕರಿಕೆ ತರಿಸಿದೆ. ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲು ಸನ್ನದ್ಧರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನದಿಂದ ಅಧಿಕಾರಕ್ಕೆ ಬರುವುದು ನಿಶ್ವಿತ’

ಗುಜರಾತ್‌ ಹಾಗೂ ಹಿಮಾಚಲಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆದ ಹಿನ್ನೆಲೆಯಲ್ಲಿ ಮುಧೋಳದಲ್ಲಿ ಸೋಮವಾರ ನಡೆದ ವಿಜಯೋತ್ಸವದಲ್ಲಿ ಶಾಸಕ ಗೋವಿಂದ ಕಾರಜೋಳ ಸಾರ್ವಜನಿಕರಿಗೆ ಸಿಹಿ ತಿನ್ನಿಸಿದರು

ಮುಧೋಳ: ‘ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳಿಗೆ ದೇಶದ ಜನತೆ ಮೆಚ್ಚುಗೆಯನ್ನು ಮತ್ತೊಮ್ಮೆ ರುಜುವಾತು ಮಾಡಿದ್ದಾರೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಆಗುವ ಸಮಯ ಸನ್ನಿಹಿತವಾಗಿದೆ’ ಎಂದು ಶಾಸಕ ಗೋವಿಂದ ಕಾರಜೋಳ ಹೇಳಿದರು.

ಗುಜರಾತ್‌, ಹಿಮಾಚಲ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿನಗರದ ಜಡಗಾಬಾಲಾ ವೃತ್ತ, ಮಹಾತ್ಮ ಗಾಂಧಿ ವೃತ್ತ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಬಿಜೆಪಿ ಸೋಮವಾರ ಸಂಜೆ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.

‘ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರದ ವೈಖರಿ ವಾಕರಿಕೆ ತರಿಸಿದೆ. ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲು ಸನ್ನದ್ಧರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನದಿಂದ ಅಧಿಕಾರಕ್ಕೆ ಬರುವುದು ನಿಶ್ವಿತ’ ಎಂದು ಹೇಳಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಆರ್.ಮಾಚಪ್ಪನವರ, ಯುವಮೋರ್ಚಾ ಅಧ್ಯಕ್ಷ ಪ್ರದೀಪ ನಿಂಬಾಳಕರ, ಕುಮಾರ ಹುಲಕುಂದ, ಕಲ್ಲಪ್ಪಣ್ಣ ಸಬರದ, ಬಸವರಾಜ ಪರೀಟ, ಜ್ಞಾನದೇವ ಶಿಂಪಿ, ಮಲ್ಲಯ್ಯ ಸಾಲಿಮಠ, ಅರುಣ ಕಾರಜೋಳ, ಎಚ್.ಎನ್.ವಜ್ಜರಮಟ್ಟಿ, ರಾಕೇಶ ರಾಠೋಡ, ಸಚೀನ ಹೂಗಾರ, ಆನಂದ ಕೂಗಾಟೆ, ಅಕ್ಷಯ ಗೋಸಲೆ, ಪ್ರಶಾಂತ ಶಟ್ಟರ, ಸೂರಜ್ ಘಾಟಗೆ, ವಿಜಯ ನಿಕ್ಕಂ, ಕಿರಣ ಗಣಪ್ಪಗೋಳ, ಲಕ್ಷ್ಮೀಕಾಂತ ಜೋಷಿ, ಸಚೀನ ಹೂಗಾರ, ಶ್ರೀಶೈಲ ಹಡಪದ, ಸೋನಪ್ಪಿ ಕುಲಕರ್ಣಿ, ದೀಪಕ ಮೋರೆ ಭಾಗವಹಿಸಿದ್ದರು. ಕಾರ್ಯಕರ್ತರು ಎಲ್ಲ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿಜಯೋತ್ಸವ

ಬೀಳಗಿ: ‘ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಬಿಜೆಪಿಯ ಗೆಲುವು ರಾಜ್ಯದ ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ಆರ್ ನಿರಾಣಿ ಹೇಳಿದರು.

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನ ಸಭೆಯ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ದೇಶದಲ್ಲಿ ನರೇಂದ್ರ ಮೋದಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯ ಗಮನಿಸಿ ಜನತೆ ಆಶೀರ್ವದಿಸಿದ್ದಾರೆ. ಕೇಂದ್ರದ ಯೋಜನೆಗಳನ್ನು ಜಾರಿಗೊಳಿ ಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು.

ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಸಂಗಣ್ಣ ಕಟಗೇರಿ, ಕೆ.ವಿ ಪಾಟೀಲ, ಈರಣ್ಣ ಗಿಡ್ಡಪ್ಪಗೋಳ, ಎಂ.ಎಂ ಶಂಬೋಜಿ, ರಾಮಣ್ಣ ಕಾಳಪ್ಪಗೋಳ, ಮಹಾಂತೇಶ ಕೊಲಕಾರ, ವಿಜಯಲಕ್ಷ್ಮಿ ಪಾಟೀಲ, ಮಹಾದೇವಿ ಮೈಸೂರು ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಕಾಳಿಕಾಂಬೆ ರಥ ಎಳೆದ ಮಹಿಳೆಯರು

ಬಾಗಲಕೋಟೆ
ಕಾಳಿಕಾಂಬೆ ರಥ ಎಳೆದ ಮಹಿಳೆಯರು

18 Jan, 2018
ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಬಾದಾಮಿ
ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

18 Jan, 2018
‘ಸಂಪೂರ್ಣ ಮಾಹಿತಿ ಒದಗಿಸಲು ಸೂಚನೆ’

ಬಾಗಲಕೋಟೆ
‘ಸಂಪೂರ್ಣ ಮಾಹಿತಿ ಒದಗಿಸಲು ಸೂಚನೆ’

18 Jan, 2018
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬಾಗಲಕೋಟೆ
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

18 Jan, 2018
ತಾಲ್ಲೂಕು ಕಚೇರಿಗೆ ರೈತರ ಮುತ್ತಿಗೆ

ಹುನಗುಂದ
ತಾಲ್ಲೂಕು ಕಚೇರಿಗೆ ರೈತರ ಮುತ್ತಿಗೆ

17 Jan, 2018