ರೋಣ

ಮಹದಾಯಿ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥ

ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ ಅಮಾಯಕ ರೈತರ ಮೇಲೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪ್ರಕರಣ ದಾಖಲಿಸಿದೆ.

ರೋಣದಲ್ಲಿ ಮಂಗಳವಾರ ಪರಿವರ್ತನಾ ಯಾತ್ರೆಯ ಅಂಗವಾಗಿ ನಡೆದ ಬಹಿರಂಗ ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು

ರೋಣ: ‘ಶೀಘ್ರದಲ್ಲೇ ಮಹದಾಯಿ, ಕಳಸಾ– ಬಂಡೂರಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಪುನರುಚ್ಚರಿಸಿದರು. ಬಿಜೆಪಿ ಪರಿವರ್ತನಾ ಯಾತ್ರೆಯ ಅಂಗವಾಗಿ ಮಂಗಳವಾರ ರೋಣ ಪಟ್ಟಣದ ಪಲ್ಲೇದರವರ ಜಮೀನಿನಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ ಅಮಾಯಕ ರೈತರ ಮೇಲೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪ್ರಕರಣ ದಾಖಲಿಸಿದೆ. ಸ್ವಾತಂತ್ರ್ಯ ಭಾರತದಲ್ಲಿ ಹಿಂದೆಂದೂ ಕಾಣದ ಭ್ರಷ್ಟ ಸರ್ಕಾರ ಯಾವುದಾದರೂ ಇದ್ದರೆ, ಅದು ಸಿದ್ದರಾಮಯ್ಯ ಅವರ ಸರ್ಕಾರ’ ಎಂದು ವಾಗ್ದಾಳಿ ನಡೆಸಿದರು.

‘ಕಾಂಗ್ರೆಸ್‌ನ ಕೆಲವು ಮುಖಂಡರು, ಸಚಿವರು, ಶಾಸಕರ ಮಕ್ಕಳು ಅಕ್ರಮ ಮರಳು ದಂದೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ 24 ಗಂಟೆ
ಒಳಗೆ ಅಕ್ರಮ ಮರಳುಗಾರಿಕೆ ತಡೆಯುತ್ತೇವೆ. ದಂದೆಯಲ್ಲಿ ತೊಡಗಿದವರ ವಿರುದ್ಧ ದೂರು ದಾಖಲಿಸುತ್ತೇವೆ’ ಎಂದರು.

‘ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೊಳಿಸಿ ಲಕ್ಷಾಂತರ ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲಾಗಿದೆ. ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ, ರೈತರ ಸಾಲಮನ್ನಾ, ಸೇರಿ ಹಲವು ಜನಪರ ಯೋಜನೆಗಳನ್ನು ಬಡವರಿಗೆ ತಲುಪಿಸಲಾಗಿದೆ. ಜನರು ಪ್ರಧಾನಿ ಮೋದಿ ಅವರ ಕೆಲಸಗಳನ್ನು ಮೆಚ್ಚಿದ್ದಾರೆ. ಕರ್ನಾ
ಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ’ ಎಂದರು.

‘ಬಿಜೆಪಿ ಸರ್ಕಾರದ ಯೋಜನೆಗಳಿಗೆ ಸಿದ್ದರಾಮಯ್ಯ ಭೂಮಿಪೂಜೆ ಮಾಡುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ 47 ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಅದಕ್ಕೆ ಮೂರು ತಾಲ್ಲೂಕುಗಳನ್ನು ಸೇರಿಸಿ ಒಟ್ಟು 50 ಹೊಸ ತಾಲ್ಲೂಕುಗಳನ್ನು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದರೆ, ಈ ತಾಲ್ಲೂಕುಗಳಿಗೆ ಯಾವುದೇ ಅನುದಾನ ಇದುವರೆಗೂ ಬಿಡುಗಡೆ ಮಾಡಿಲ್ಲ.

ಉತ್ತರ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿರುವ ಅವರು ಈಗ ಜಾತಿಗಳ ಮಧ್ಯೆ ಜಗಳ ತಂದು ಜಾತಿ ರಾಜಕಾರಣ ಮಾಡುತ್ತಿದ್ದಾರೆ' ಎಂದು ದೂರಿದರು. ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿದರು. ಗೋವಿಂದ ಕಾರಜೋಳ, ಸಿ.ಟಿ.ರವಿ, ಮುರುಗೇಶ ನಿರಾಣಿ, ಲಕ್ಷ್ಮಣ ಸವದಿ, ಸಿ.ಎಂ.ಉದಾಸಿ, ಪಿ.ಸಿ.ಗದ್ದಿಗೌಡ್ರ, ಶಿವಕುಮಾರ ಉದಾಸಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ನಿಂಗಪ್ಪ ಕೆಂಗಾರ ಇದ್ದರು.

* * 

ಕಾಂಗ್ರೆಸ್‌ಗೆ ಗುಜರಾತ್‌, ಹಿಮಾಚಲಪ್ರದೇಶದಲ್ಲಿ ಮತದಾರರು ಪಾಠ ಕಲಿಸಿದ್ದಾರೆ. ಕರ್ನಾಟಕವನ್ನೂ ಕಾಂಗ್ರೆಸ್ ಮುಕ್ತವಾಗಿಸಲು ಶ್ರಮಿಸುತ್ತೇವೆ
ಬಿ.ಎಸ್. ಯಡಿಯೂರಪ್ಪ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

Comments
ಈ ವಿಭಾಗದಿಂದ ಇನ್ನಷ್ಟು

ಡಂಬಳ
ದುಶ್ಚಟ ತೊರೆಯಲು ಯುವಕರಿಗೆ ಸಲಹೆ

ಪುರಾತನ ಕಾಲದಿಂದಲೂ ರಾಜ ಮಹಾರಾಜರ ಆಸ್ಥಾನದಲ್ಲಿ ಕುಸ್ತಿಗಾಗಿ ವಿಶೇಷ ಸ್ಪರ್ಧೆಗಳನ್ನು ಆಯೋಜನೆ ಮಾಡುತ್ತಿದ್ದರು. ಆದರೆ ಇಂದು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಅವು ಕಡಿಮೆ ಆಗುತ್ತಿದೆ...

21 Apr, 2018
ಚುನಾವಣಾ ಪ್ರಚಾರಕ್ಕೆ ರಣ ಬಿಸಿಲ ಬರೆ

ಗದಗ
ಚುನಾವಣಾ ಪ್ರಚಾರಕ್ಕೆ ರಣ ಬಿಸಿಲ ಬರೆ

21 Apr, 2018

ಗದಗ
ತೀವ್ರ ಮನವೊಲಿಕೆ ನಂತರ ಶಮನವಾದ ಭಿನ್ನಮತ

ಗದಗ ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿದ್ದಕ್ಕೆ ಮುನಿಸಿಕೊಂಡಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರನ್ನು, ಪಕ್ಷದ ಜಿಲ್ಲಾ ಮುಖಂಡರು ಮನವೊಲಿಕೆ ಮಾಡಿದ್ದು, ಭಿನ್ನಮತ...

21 Apr, 2018

ಗದಗ
ಗ್ರಾಮೀಣರ ಬದುಕಿನಲ್ಲಿ ಗುಣಾತ್ಮಕ ಬದಲು

‘ಗ್ರಾಮೀಣ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗದಗ ಭಾಗದಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸುವ...

21 Apr, 2018

ಗದಗ
ಪುಸ್ತಕಗಳಿಂದ ವಿಚಾರ ಕ್ರಾಂತಿ: ತೋಂಟದ ಶ್ರೀ

‘ಮಠಗಳು ಕೇವಲ ಧಾರ್ಮಿಕ ಆಚರಣೆಗಳಿಗೆ ಮಾತ್ರ ಸೀಮಿತವಾಗದೆ, ಪುಸ್ತಕೋತ್ಸವಗಳಂತಹ ಸಮಾಜಮುಖಿ ಕಾರ್ಯಗಳನ್ನು ಕೈಕೊಳ್ಳುವ ಮೂಲಕ ಜ್ಞಾನ ದಾಸೋಹದ ಕೇಂದ್ರಗಳಾಗಬೇಕು’ ಎಂದು ತೋಂಟದಾರ್ಯ ಮಠದ ಸಿದ್ಧಲಿಂಗ...

20 Apr, 2018