ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯವಾಹಿನಿಯಿಂದ ಅಂಗವಿಕಲರು ದೂರ

ಸ್ವಾಭಿಮಾನಿ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕ್ರಮ
Last Updated 21 ಡಿಸೆಂಬರ್ 2017, 8:19 IST
ಅಕ್ಷರ ಗಾತ್ರ

ಚನ್ನಪಟ್ಟಣ: ಅಂಗವಿಕಲರಲ್ಲಿ ಹಲವಾರು ಮಂದಿ ಪ್ರತಿಭಾವಂತರಿದ್ದು, ಅವರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರೋತ್ಸಾಹ ಸಿಗದ ಕಾರಣ ಮುಖ್ಯವಾಹಿನಿಗೆ ಬಾರದೆ ಹಿಂದೆ ಉಳಿದಿದ್ದಾರೆ ಎಂದು ಜೆಡಿಎಸ್ ಮುಖಂಡರಾದ ಅನಿತಾ ಕುಮಾರಸ್ವಾಮಿ ವಿಷಾದಿಸಿದರು.

ಪಟ್ಟಣದ ಪುರಭವನದಲ್ಲಿ ಸ್ವಾಭಿಮಾನಿ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಗವಿಕಲರಿಗೆ ಸರಿಯಾದ ಸಹಕಾರ, ಪ್ರೋತ್ಸಾಹ ಸಿಕ್ಕಿದರೆಸಮಾಜದಲ್ಲಿ ಎಲ್ಲರಂತೆ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ದೈಹಿಕವಾಗಿ ಅಂಗವಿಕಲತೆ ಇದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿರುವ ಹಲವಾರು ಮಂದಿ ಸಮಾಜದಲ್ಲಿ ಹಲವು ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಕೆಎಎಸ್, ಐಎಎಸ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ, ಉದ್ಯಮದಲ್ಲಿ ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾರೆ. ತಮ್ಮ ಸಮಸ್ಯೆಗಳನ್ನು ಮೆಟ್ಟಿ ನಿಂತಿರುವ ಇವರು ಇತರರಿಗೆ ಮಾದರಿ ಎಂದರು.

ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಜನಸಂಪರ್ಕ ಸಭೆಗಳಲ್ಲಿ ಅಂಗವಿಕಲರ ಸಮಸ್ಯೆ ಪರಿಹರಿಸಲು ಸಾಕಷ್ಟು ಪ್ರಯತ್ನಿಸಿದ್ದರು. ಕುಮಾರಸ್ವಾಮಿ ಅವರು ಅಂಗವಿಕಲ ಬಗ್ಗೆ ವಿಶೇಷವಾದ ಕಾಳಜಿ ಹೊಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಮತದಾರರ ಆಶೀರ್ವಾದ ಸಿಕ್ಕಿದರೆ ಅಂಗವಿಕಲರಿಗೆ ಹಲವಾರು ಯೋಜನೆಗಳನ್ನು ತರಲು ಚಿಂತಿಸಿದ್ದಾರೆ ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಮಾತನಾಡಿ, ಅಂಗವಿಕಲರು ತಮ್ಮ ಬಗ್ಗೆ ಯಾವುದೇ ಕೀಳರಿಮೆ ಹೊಂದದೆ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮಾಜದಲ್ಲಿ ನಾವು ಎಲ್ಲರಂತೆ ಬಾಳುತ್ತೇವೆ ಎಂಬುದನ್ನು ತೋರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ವಾಭಿಮಾನಿ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಬೀರಯ್ಯ, ಅಂಗವಿಕಲ ಸಮುದಾಯ ಯೋಜನೆಯ ಸಿದ್ದೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಿಂಗರಾಜೇಗೌಡ, ಮುಖಂಡರಾದ ನಿಜಲಿಂಗೇಗೌಡ, ಚಂದ್ರಕಾಂತ್, ನಾಗವಾರ ರಂಗಸ್ವಾಮಿ, ವಡ್ಡರಹಳ್ಳಿ ರಾಜಣ್ಣ, ಆಶಿಷ್ ಗೌಡ, ಎಂ.ಜಿ.ಕೆ ಪ್ರಕಾಶ್, ಅಂಗವಿಕಲರ ಸಂಘದ ಕಾರ್ಯದರ್ಶಿ ಪುಟ್ಟರಾಜು, ಖಜಾಂಚಿ ಮಂಜುಳ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT