ಮಂಗಳೂರು

ಇಂದಿನಿಂದ ಕರಾವಳಿ ಉತ್ಸವ

ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಕಲಾತಂಡಗಳ ಪ್ರದರ್ಶನಗಳು, ನೃತ್ಯಗಳು, ಚೆಂಡೆ, ಡೋಲು ಇತ್ಯಾದಿ ಸುಮಾರು 80ಕ್ಕೂ ಹೆಚ್ಚು ತಂಡಗಳು ಪಾಲ್ಗೊಳ್ಳಲಿವೆ.

ಮಂಗಳೂರು: ಕರಾವಳಿ ಉತ್ಸವಕ್ಕೆ ನಗರ ಸಜ್ಜಾಗಿದ್ದು, ಶುಕ್ರವಾರದಿಂದ ಇದೇ 31 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ಮನೆ ಮಾಡಲಿದೆ. ಇದೇ 22 ರಂದು ಮಧ್ಯಾಹ್ನ 3.30 ರಿಂದ ನೆಹರೂ ಮೈದಾನದಿಂದ, ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಬೃಹತ್ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ.

ಸಂಜೆ 5.30 ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಏರ್ಪಡಿಸಿರುವ ವಸ್ತು ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಕರಾವಳಿ ಉತ್ಸವ ಉದ್ಘಾಟನಾ ಸಮಾರಂಭ ನಡೆಯಲಿದ್ದು, ನಟ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ.

ಆಕರ್ಷಕ ಮೆರವಣಿಗೆ: ಮಧ್ಯಾಹ್ನ 3.30ಕ್ಕೆ ನೆಹರೂ ಮೈದಾನದಿಂದ ಹೊರಡುವ ಮೆರವಣಿಗೆಯು, ಎ.ಬಿ. ಶೆಟ್ಟಿ ಸರ್ಕಲ್, ಹಂಪನಕಟ್ಟೆ ವೃತ್ತ, ಕೆ.ಎಸ್.ರಾವ್ ರಸ್ತೆ, ನವಭಾರತ ಸರ್ಕಲ್, ಪಿವಿಎಸ್ ಜಂಕ್ಷನ್, ಮಹಾತ್ಮ ಗಾಂಧಿ ರಸ್ತೆ, ಬಲ್ಲಾಳಬಾಗ್, ಲಾಲ್‌ಬಾಗ್ ಮೂಲಕ ಕರಾವಳಿ ಉತ್ಸವ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ.

ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಕಲಾತಂಡಗಳ ಪ್ರದರ್ಶನಗಳು, ನೃತ್ಯಗಳು, ಚೆಂಡೆ, ಡೋಲು ಇತ್ಯಾದಿ ಸುಮಾರು 80ಕ್ಕೂ ಹೆಚ್ಚು ತಂಡಗಳು ಪಾಲ್ಗೊಳ್ಳಲಿವೆ. ತುಳುನಾಡಿನ ಜನಪದ ಕುಣಿತ, ಯಕ್ಷಗಾನ ವೇಷಗಳು, ಸೋಣ ಜೋಗಿ ಕುಣಿತ, ಹುಲಿವೇಷ, ತಾಲೀಮು, ಶಂಖ ದಾಸರು, ಜಾನಪದ ಗೊಂಬೆ, ಕೊರಗರ ಗಜಮೇಳ, ಮರಕಾಲು ಹುಲಿ ವೇಷ ಇತ್ಯಾದಿ ಅನೇಕ ತಂಡಗಳು ಭಾಗವಹಿಸಲಿವೆ. ವಿವಿಧ ದೇವಸ್ಥಾನಗಳಿಂದ ಸಾಂಪ್ರದಾಯಿಕ ವಾದನದೊಂದಿಗೆ ತಟ್ಟೀರಾಯ, ಬೇತಾಳ ಮೆರವಣಿಗೆಗೆ ಮೆರುಗು ನೀಡಲಿವೆ. ಅನೇಕ ವಿದ್ಯಾ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಲ, ಬ್ಯಾಂಕ್, ಅಂಚೆ ಇಲಾಖೆಗಳು ಪಾಲ್ಗೊಳ್ಳಲಿವೆ.

ವಿಶೇಷ ಪ್ರದರ್ಶನ: ಕರಾವಳಿ ಉತ್ಸವ ಮೈದಾನದ ವಸ್ತು ಪ್ರದರ್ಶನ ಮಂಟಪ ಹೊರ ಆವರಣದಲ್ಲಿ ಸಂಜೆ 5.30 ರಿಂದ 7 ರವರೆಗೆ ರಾಜ್ಯದ ವಿವಿಧೆಡೆಯಿಂದ ಬಂದ ಕಲಾ ತಂಡಗಳು ವಿಶೇಷ ಪ್ರದರ್ಶನವನ್ನು ನೀಡಲಿವೆ.

ಮೆರವಣಿಗೆಯಲ್ಲಿ ಭಾಗವಹಿಸುವ ಎಲ್ಲರಿಗೂ ಉಪ್ಪಿಟ್ಟು, ಅವಲಕ್ಕಿ, ಬಾದಾಮಿ ಹಾಲು, ಲಾಡು, ಕಿತ್ತಲೆ, ಕುಡಿಯುವ ನೀರು, ಮೆರವಣಿಗೆಯ ನಂತರ ಕರಾವಳಿ ಉತ್ಸವ ಮೈದಾನದಲ್ಲಿ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಕರಾವಳಿ ಉತ್ಸವ ಮೆರವಣಿಗೆಯ ಸಮಿತಿಯ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿನಂತಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು

ಸುಳ್ಯ
ಬಿಜೆಪಿ ಸರ್ಕಾರ ಖಚಿತ: ಶೋಭಾ ಕರಂದ್ಲಾಜೆ

‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದ ಅತ್ಯಂತ ಕೆಟ್ಟ ಸರ್ಕಾರ. ಇದನ್ನು ಕಿತ್ತು ಹಾಕಲು ಜನರು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತ...

21 Apr, 2018

ಬೆಳ್ತಂಗಡಿ
‘ಕಿವಿ ತುಂಬಿಸುವವರಿಗೆ ಅಧಿಕಾರ ನೀಡಬೇಡಿ’

‘ಕಿವಿ ತುಂಬಿಸುವವರಿಗಿಂತ ಹೊಟ್ಟೆ ತುಂಬಿಸುವವರಿಗೆ ಜನರು ಅಧಿಕಾರ ನೀಡಬೇಕು. ಬಿಜೆಪಿ ಪಕ್ಷದವರ ಕಿವಿ ತುಂಬಿಸುವ ಮರಳು ಮಾತಿಗೆ ಮತದಾರರು ಬಲಿಯಾಗಬಾರದು’ ಎಂದು ಕೆಪಿಸಿಸಿ ಕಾರ್ಯದರ್ಶಿ...

21 Apr, 2018

ಮಂಗಳೂರು
‘ಉತ್ತರ’ದಲ್ಲಿ ಬಿಜೆಪಿಗೆ ಬಂಡಾಯದ ಆತಂಕ

ಮೂರನೇ ಪಟ್ಟಿಯಲ್ಲಿ ಮಂಗಳೂರು ನಗರದ ಮೂರೂ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ. ಬಿಜೆಪಿ ವರಿಷ್ಠರು ಪಟ್ಟಿ ಪ್ರಕಟಿಸಿ ನಿಟ್ಟುಸಿರು ಬಿಡುವಷ್ಟರಲ್ಲೇ ಮಂಗಳೂರು ಉತ್ತರ...

21 Apr, 2018
‘ಆಯೋಗದ ನಿರ್ದೇಶನ ಪಾಲನೆ ಕಡ್ಡಾಯ’

ಬೆಳ್ತಂಗಡಿ
‘ಆಯೋಗದ ನಿರ್ದೇಶನ ಪಾಲನೆ ಕಡ್ಡಾಯ’

20 Apr, 2018

ಮಂಗಳೂರು
ಚುರುಕುಗೊಂಡ ಚುನಾವಣಾ ಪ್ರಕ್ರಿಯೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮೂಡುಬಿದಿರೆಯಿಂದ ಶಾಸಕ ಕೆ.ಅಭಯಚಂದ್ರ ಜೈನ್‌, ಸುಳ್ಯದಲ್ಲಿ ಡಾ.ಬಿ.ರಘು ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಹಾಗೂ ಮುನೀರ್‌...

20 Apr, 2018