ಕೊಳ್ಳೇಗಾಲ

ಗುಂಡಾಲ್‌ ಜಲಾಶಯದಿಂದ ನೀರು ಬಿಡಲು ಮನವಿ

ಗುಂಡಾಲ್ ಜಲಾಶಯದಿಂದ ಮಧುವನಹಳ್ಳಿ ಗ್ರಾಮದ ಕೆರೆಕಟ್ಟೆಗಳಿಗೆ ಹಾಗೂ ಸುತ್ತಲ ಜಮೀನುಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಧುವನಹಳ್ಳಿ ಗ್ರಾಮದ ರೈತರು ಶಾಸಕ ಆರ್. ನರೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯದಿಂದ ಮಧುವನಹಳ್ಳಿ ಗ್ರಾಮದ ಕೆರೆಕಟ್ಟೆಗಳಿಗೆ ಹಾಗೂ ಸುತ್ತಲ ಜಮೀನುಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಧುವನಹಳ್ಳಿ ಗ್ರಾಮದ ರೈತರು ಶಾಸಕ ಆರ್. ನರೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ನರೇಂದ್ರ ಮಾತನಾಡಿ, ಜನವರಿ ಅಂತ್ಯದಲ್ಲಿ ಎಂಜಿನಿಯರ್‌ಗಳ ಜೊತೆ ಚರ್ಚಿಸಿ ಫೆಬ್ರುವರಿ ಮೊದಲ ವಾರದಲ್ಲಿ ನೀರು ಬಿಡಲಾಗುವುದು ಎಂದು ಭರವಸೆ ನೀಡಿದರು. ಜಿ.ಪಂ. ಮಾಜಿ ಸದಸ್ಯ ಶಿವಕುಮಾರ್ ಮಾತನಾಡಿ, ಮಧುವನಹಳ್ಳಿ ಗ್ರಾಮದಲ್ಲಿ ಹಿಂಗಾರು ಹಾಗೂ ಮುಂಗಾರು ಬೆಳೆಯ ಸಮಯದಲ್ಲಿ ನಿರೀಕ್ಷಿತ ಮಳೆ ಇಲ್ಲದೆ ರೈತರು ಫಸಲು ಬೆಳೆಯಲು ಸಾಧ್ಯವಾಗಲಿಲ್ಲ. ಈ ವರ್ಷ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿದ್ದು, ಬೆಳೆ ಬೆಳೆಯಲು ಗುಂಡಾಲ್ ಜಲಾಶಯದಿಂದ ನೀರು ಬಿಡುವಂತೆ ಮನವಿ ಮಾಡಿದರು.

ಮಧುವನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಹದೇವ ಸ್ವಾಮಿ, ಮುಖಂಡರಾದ ಮಹದೇವಶೆಟ್ಟಿ, ಮಹೇಶ್, ಸಿದ್ದೇಶ್, ಮಹದೇವಸ್ವಾಮಿ, ರವೀಂದ್ರನಾಥ್, ನಂದೀಶ್, ಗುರುನಂಜಶೆಟ್ಟಿ ಹಾಜರಿದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಇಂದು, ನಾಳೆ ಪರಿವರ್ತನಾ ಯಾತ್ರೆ

ಚಾಮರಾಜನಗರ
ಇಂದು, ನಾಳೆ ಪರಿವರ್ತನಾ ಯಾತ್ರೆ

20 Jan, 2018

ಯಳಂದೂರು
ಚಿತ್ರಗಳ ಮೂಲಕ ಮಕ್ಕಳಿಗೆ ಸಂಚಾರ ಪಾಠ

‘ಬಿಆರ್‌ಸಿ ಕೇಂದ್ರದಲ್ಲಿ ಶಿಕ್ಷಕರಿಗೆ ಬೊಂಬೆ ಪ್ರದರ್ಶನದ ತರಬೇತಿ ನೀಡಲಾಗುತ್ತದೆ. ಇಲ್ಲಿ ವಿದ್ಯಾರ್ಥಿಗಳಿಗೆ ವಿಷಯವಾರು ಚಿತ್ರ ಮತ್ತು ಬೊಂಬೆ ಪ್ರದರ್ಶನದ ಬಗ್ಗೆ ತಿಳಿಸಲಾಗುತ್ತದೆ.

20 Jan, 2018
ಕೆರೆ ಅಭಿವೃದ್ಧಿ: ಜನರಿಗೇ ಹೊಣೆ

ಚಾಮರಾಜನಗರ
ಕೆರೆ ಅಭಿವೃದ್ಧಿ: ಜನರಿಗೇ ಹೊಣೆ

19 Jan, 2018

ಚಾಮರಾಜನಗರ
ನೂತನ ಪಿಂಚಣಿ ಯೋಜನೆ ರದ್ದತಿಗೆ ಆಗ್ರಹ

ಎನ್‌ಪಿಎಸ್‌ ಯೋಜನೆಗೆ ಒಳಪಡುವ ನೌಕರರು ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರ ಕ್ರಮವಹಿಸಬೇಕು. ನೌಕರರ ಹಿತ ಕಾಪಾಡಬೇಕು

19 Jan, 2018
ನಾಲೆಗೆ ನೀರು ಹರಿಸಲು ಆಗ್ರಹ

ಸಂತೇಮರಹಳ್ಳಿ
ನಾಲೆಗೆ ನೀರು ಹರಿಸಲು ಆಗ್ರಹ

18 Jan, 2018