ಬಳ್ಳಾರಿ

‘ನ್ಯಾ.ಸದಾಶಿವ ಆಯೋಗದ ವರದಿ ತಿರಸ್ಕರಿಸಿ’

‘ಪರಿಶಿಷ್ಟ ಜಾತಿ ಪಟ್ಟಿಯಿಂದ ಕೊಂಚ, ಕೊರಮ, ಭೋವಿ ಮತ್ತು ಲಂಬಾಣಿಗರನ್ನು ತೆಗೆಯಬೇಕು ಎಂದು ವರದಿಯಲ್ಲಿ ಅವೈಜ್ಞಾನಿಕವಾಗಿ ಶಿಫಾರಸು ಮಾಡಿರುವುದು ಸಮುದಾಯದ ಜನರಲ್ಲಿ ಆತಂಕ ಮೂಡಿಸಿದೆ.

ಬಳ್ಳಾರಿ: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿ ಡಿ.29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಳೂರು ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಅಖಿಲ ಭಾರತ ಬಂಜಾರ ಸೇವಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸುಭಾಷ್‌ ರಾಥೋಡ್‌ ತಿಳಿಸಿದರು.

‘ಪರಿಶಿಷ್ಟ ಜಾತಿ ಪಟ್ಟಿಯಿಂದ ಕೊಂಚ, ಕೊರಮ, ಭೋವಿ ಮತ್ತು ಲಂಬಾಣಿಗರನ್ನು ತೆಗೆಯಬೇಕು ಎಂದು ವರದಿಯಲ್ಲಿ ಅವೈಜ್ಞಾನಿಕವಾಗಿ ಶಿಫಾರಸು ಮಾಡಿರುವುದು ಸಮುದಾಯದ ಜನರಲ್ಲಿ ಆತಂಕ ಮೂಡಿಸಿದೆ. ಈ ನಾಲ್ಕೂ ಸಮುದಾಯದವರು ಸ್ಪೃಶ್ಯರು ಎಂದು ಹೇಳಿರುವುದು ಸರಿಯಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಕೊಂಚ, ಕೊರಮ, ಭೋವಿ ಮತ್ತು ಲಂಬಾಣಿಗರು ಅಸ್ಪೃಶ್ಯತೆ ಆಚರಿಸುತ್ತಾರೆ. ಲಂಬಾಣಿ ಸಮುದಾಯದ ಮಹಿಳೆಯರು ಮದ್ಯ ಸೇವಿಸುತ್ತಾರೆ ಎಂಬ ಅವಹೇಳನಕಾರಿ ಮಾತುಗಳನ್ನು ವರದಿಯಲ್ಲಿ ಬರೆಯಲಾಗಿದೆ. ಆದರೆ ನಾವೂ ಅಸ್ಪೃಶ್ಯರೇ ಆಗಿದ್ದೇವೆ. ಶೋಷಣೆಗೆ ಒಳಗಾಗಿದ್ದೇವೆ ಎಂಬುದನ್ನು ವರದಿಯಲ್ಲಿ ಮರೆಮಾಚಲಾಗಿದೆ’ ಎಂದು ಆರೋಪಿಸಿದರು.

‘ಸಂವಿಧಾನದ 341 (2) ವಿಧಿಯ ಪ್ರಕಾರ ಮೊದಲು ನಾಲ್ಕೂ ಉಪಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತೆಗೆಯಬೇಕು ಎಂದು ಹೇಳಿರುವುದು ಸಾಮಾಜಿಕ ನ್ಯಾಯದ ವಿರುದ್ಧವಾಗಿರುವ ಶಿಫಾರಸು. ಈ ಉಪಜಾತಿಗಳು ಮೇಲ್ಜಾತಿಗೆ ಸೇರಿವೆ ಎಂದಿರುವುದು ಅವಮಾನಕಾರಿಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಪರಿಶಿಷ್ಟ ಜಾತಿಗೆ ಸೇರಿದ 101 ಉಪಜಾತಿಗಳ ಪೈಕಿ 72 ಉಪಜಾತಿಗಳ ಜನರು ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರದಿ ಜಾರಿಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಬಾರದು’ ಎಂದು ಒತ್ತಾಯಿಸಿದರು.

‘2001ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಭೋವಿ ಸಮುದಾಯದ ಜನಸಂಖ್ಯೆ 9.52 ಲಕ್ಷವಿದೆ. ಆದರೆ 2012ರಲ್ಲಿ ಆಯೋಗ ವರದಿ ಸಲ್ಲಿಸುವ ಸಂದರ್ಭದಲ್ಲಿ ಜನಸಂಖ್ಯೆ 9.48 ಲಕ್ಷವಿದೆ ಎಂದು ಉಲ್ಲೇಖಿಸುತ್ತದೆ. 11 ವರ್ಷಗಳ ಅವಧಿಯಲ್ಲಿ ಜನಸಂಖ್ಯೆ ಕಡಿಮೆಯಾಗಿದೆ ಎಂದು ಸುಳ್ಳು ಮಾಹಿತಿ ನೀಡಲಾಗಿದೆ. ಜನಸಂಖ್ಯೆ ಆಧರಿಸಿ ಉಪಜಾತಿಗಳ ಮೀಸಲಾತಿ ವರ್ಗೀಕರಣ ಸರಿಯಲ್ಲ’ ಎಂದರು.

‘ಸರ್ಕಾರ ವರದಿಯನ್ನು ಕೂಡಲೇ ಬಹಿರಂಗಪಡಿಸಬೇಕು. ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಒಕ್ಕೂಟದ ಮುಖಂಡ ವೈ.ಕೊಟ್ರೇಶ್‌ ಆಗ್ರಹಿಸಿದರು. ಮುಖಂಡರಾದ ಸುಂಕಣ್ಣ, ಜಿ.ರಾಮಚಂದ್ರಪ್ಪ, ಈಶ್ವರ್‌ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಜಗತ್ತಿನಲ್ಲಿ ಇರುವುದು ಎರಡೇ ಜಾತಿ: ವೀರಭದ್ರ ಶ್ರೀ

ಸಿರುಗುಪ್ಪ
ಜಗತ್ತಿನಲ್ಲಿ ಇರುವುದು ಎರಡೇ ಜಾತಿ: ವೀರಭದ್ರ ಶ್ರೀ

19 Jan, 2018

ಬಳ್ಳಾರಿ
‘ಹಳೇ ಪಿಂಚಣಿ ಯೋಜನೆಯೇ ಇರಲಿ’

‘ಹಳೇ ಪಿಂಚಣಿ ಯೋಜನೆಯಲ್ಲಿ 33 ವರ್ಷ ಸೇವೆ ಸಲ್ಲಿಸಿದ ನೌಕರರಿಗೆ ಶೇ 50ರಷ್ಟು ನಿಶ್ಚಿತ ಪಿಂಚಣಿ ದೊರಕುತ್ತದೆ. ಆದರೆ ಹೊಸ ಯೋಜನೆಯಲ್ಲಿ ಅದಕ್ಕಿಂತ ಹೆಚ್ಚು ಸೇವೆ...

19 Jan, 2018
ಫೆಬ್ರುವರಿಯಲ್ಲಿ ಇಂದಿರಾ ಕ್ಯಾಂಟೀನ್‌ ಶುರು

ಬಳ್ಳಾರಿ
ಫೆಬ್ರುವರಿಯಲ್ಲಿ ಇಂದಿರಾ ಕ್ಯಾಂಟೀನ್‌ ಶುರು

18 Jan, 2018
ಸಾವಯವ ಪದ್ಧತಿಯಲ್ಲಿ ಕಲ್ಲಂಗಡಿ ಬೆಳೆ

ಕುರೆಕುಪ್ಪ
ಸಾವಯವ ಪದ್ಧತಿಯಲ್ಲಿ ಕಲ್ಲಂಗಡಿ ಬೆಳೆ

17 Jan, 2018
ಜನಸ್ಪಂದನ ಸಭೆಯಲ್ಲಿ ಅಧಿಕಾರಿಗಳೇ ಹೆಚ್ಚು!

ಬಳ್ಳಾರಿ
ಜನಸ್ಪಂದನ ಸಭೆಯಲ್ಲಿ ಅಧಿಕಾರಿಗಳೇ ಹೆಚ್ಚು!

17 Jan, 2018