ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಆರೋಗ್ಯ ತಪಾಸಣೆ ನಾಳೆಯಿಂದ

Last Updated 24 ಡಿಸೆಂಬರ್ 2017, 6:16 IST
ಅಕ್ಷರ ಗಾತ್ರ

ಕಲಬುರ್ಗಿ: ಮಾಜಿ ಮುಖ್ಯಮಂತ್ರಿ ದಿ. ಎನ್.ಧರ್ಮಸಿಂಗ್ ಅವರ 81ನೇ ಜನ್ಮ ದಿನಾಚರಣೆ ಅಂಗವಾಗಿ ಧರ್ಮಸಿಂಗ್ ಫೌಂಡೇಷನ್ ವತಿಯಿಂದ ಜೇವರ್ಗಿ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಡಿ.25 ಮತ್ತು 26ರಂದು ಉಚಿತ ಆರೋಗ್ಯ ತಪಾಸಣೆ ಬೃಹತ್‌ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೇವರ್ಗಿ ಶಾಸಕ ಡಾ.ಅಜಯ್‌ಸಿಂಗ್, ‘ಧರ್ಮಸಿಂಗ್ ಫೌಂಡೇಷನ್ ವತಿಯಿಂದ 13 ವರ್ಷಗಳಿಂದ ನಿರಂತರವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಬೆಂಗಳೂರಿನ ಎಂ. ಎಸ್.ರಾಮಯ್ಯ, ನಾರಾಯಣ ಹೃದಯಾಲಯ, ಸಪ್ತಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಭಗ
ವಾನ್ ಮಹಾವೀರ ಜೈನ್ ಆಸ್ಪತ್ರೆ, ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆ ಮತ್ತು ಕಲಬುರ್ಗಿಯ ಬಸವೇಶ್ವರ ಆಸ್ಪತ್ರೆ 45 ತಜ್ಞ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವರು’ ಎಂದರು.

‘ಹೃದ್ರೋಗ ಸಂಬಂಧಿ ಕಾಯಿಲೆ, ನೇತ್ರ ತಪಾಸಣೆ, ಹರ್ನಿಯಾ, ಹೈಡ್ರೋಸಿಲ್, ಅಪೆಂಡಿಕ್ಸ್, ಊತ, ಪೈಲ್ಸ್, ಫಿಸ್ತೂಲ್ ಫಿಶರ್, ಕಾಲು ಸಂಬಂಧಿ ರೋಗ, ಮೊಣಕಾಲು ಚಿಪ್ಪು ಜೋಡಣೆ, ನರರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು. ಇಸಿಜಿ, ಇಸಿಎಚ್‌ಒ, ರಕ್ತದೊತ್ತಡ, ಮಧುಮೇಹ ಪರೀಕ್ಷೆಗಳನ್ನೂ ಮಾಡಲಾಗುವುದು’ ಎಂದರು.

‘ಜೇವರ್ಗಿ ತಾಲ್ಲೂಕಿನಲ್ಲಿ 10 ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರಗಳನ್ನು ಹಮ್ಮಿಕೊಂಡು, 20 ಸಾವಿರ ಮಹಿಳೆಯರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 236 ಮಹಿಳೆಯರಲ್ಲಿ ಕ್ಯಾನ್ಸರ್ ರೋಗ ಕಂಡು ಬಂದಿದ್ದು, ಅವರಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ಹೇಳಿದರು. ಮುಖಂಡರಾದ ಅಲ್ಲಮಪ್ರಭು ಪಾಟೀಲ, ಸಿ.ಬಿ.ಪಾಟೀಲ ಓಕಳಿ, ನೀಲಕಂಠರಾವ ಮೂಲಗೆ, ಶಾಂತಪ್ಪ ಕೋಡಿ, ಗುರುಲಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT