ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ಆತಿಥ್ಯ

Last Updated 25 ಡಿಸೆಂಬರ್ 2017, 20:14 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ಏಪ್ರಿಲ್‌ನಲ್ಲಿ ಇಂಗ್ಲೆಂಡ್ ಎದುರಿನ ಏಕದಿನ ಕ್ರಿಕೆಟ್ ಸರಣಿಯನ್ನು ಭಾರತದಲ್ಲಿ ಆಯೋಜಿಸಲಾಗುತ್ತಿದೆ. ಮೂರು ಏಕದಿನ ಪಂದ್ಯಗಳು ನಡೆಯಲಿವೆ.

‘ಮಾರ್ಚ್‌ ತಿಂಗಳಿನಲ್ಲಿ ಭಾರತ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವೆ ಟ್ವೆಂಟಿ–20 ತ್ರಿಕೋನ ಸರಣಿಯೂ ಇಲ್ಲಿ ನಡೆಯಲಿದೆ. ಆ ಬಳಿಕ ಏಪ್ರಿಲ್ 8, 11 ಮತ್ತು 14ರಂದು ಇಂಗ್ಲೆಂಡ್ ವಿರುದ್ಧದ ಪಂದ್ಯಗಳನ್ನು ಆಯೋಜಿಸಲಾಗಿದೆ’ ಎಂದು ಬಿಸಿಸಿಐ ಸೋಮವಾರ ಪ್ರಕಟಿಸಿದೆ.

ವಿಶ್ವಕಪ್‌ ಫೈನಲ್‌ನಲ್ಲಿ ಸೋತ ಬಳಿಕ ಭಾರತ ತಂಡ ಇಂಗ್ಲೆಂಡ್ ಎದುರು ಯಾವುದೇ ಪಂದ್ಯ ಆಡಿಲ್ಲ.

ಐಸಿಸಿ ಚಾಂಪಿಯನ್‌ಷಿಪ್: ದಕ್ಷಿಣ ಆಫ್ರಿಕಾದಲ್ಲಿ ಫೆಬ್ರುವರಿ 5ರಿಂದ 10ರವರೆಗೆ ನಡೆಯುವ ಐಸಿಸಿ ಮಹಿಳೆಯರ ಚಾಂಪಿಯನ್‌ಷಿಪ್‌ ಮೊದಲ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

ಮಾರ್ಚ್‌ 12ರಿಂದ 18ರವರೆಗೆ ಭಾರತ ತಂಡ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಗೂ ಆತಿಥ್ಯ ವಹಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT