ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಚಾಲನೆ

Last Updated 26 ಡಿಸೆಂಬರ್ 2017, 7:11 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದ ಬಳಿ ಇರುವ ಪಶು ಆಸ್ಪತ್ರೆಯ ಮುಂಭಾಗದಲ್ಲಿ ₹ 54 ಲಕ್ಷ ವೆಚ್ಚದಡಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆಯಂತೆ ಒಂದು ಲಕ್ಷ ಜನರು ವಾಸಿಸುವ ಪ್ರದೇಶಗಳಲ್ಲಿ ಒಂದು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.

‘20 ದಿನಗಳೊಳಗೆ ಕಾಮಗಾರಿ ಪೂರ್ಣಗೊಂಡು ಜನವರಿಯಲ್ಲಿ ಕ್ಯಾಂಟೀನ್ ಆರಂಭವಾಗಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿರುವುದರಿಂದ ಇನ್ನೂ ಒಂದು ಕ್ಯಾಂಟೀನ್‌ಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಬಳಿ ಮನವಿ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಶೋಭಾ, ಸದಸ್ಯರಾದ ಎಸ್. ನಂಜುಂಡಸ್ವಾಮಿ, ಚಿನ್ನಸ್ವಾಮಿ, ಜಿಲ್ಲಾಧಿಕಾರಿ ಬಿ. ರಾಮು, ನಗರಸಭಾ ಎಇಇ ಸತ್ಯಮೂರ್ತಿ, ಪರಿಸರವಾದಿ ಮಹದೇವಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT