ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ಮಂದಿ ವಿರುದ್ಧ ಪ್ರಕರಣ ದಾಖಲು

Last Updated 26 ಡಿಸೆಂಬರ್ 2017, 8:33 IST
ಅಕ್ಷರ ಗಾತ್ರ

ಕೊಪ್ಪ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಪಟ್ಟಣದಲ್ಲಿ ಸಂಭವಿಸಿದ ಘರ್ಷಣೆಗೆ ಸಂಬಂಧಪಟ್ಟಂತೆ ಇಲ್ಲಿನ ಪೊಲೀಸ್ ಠಾಣೆಗೆ ಸಲ್ಲಿಕೆಯಾಗಿರುವ ನಾಲ್ಕು ದೂರುಗಳ ಆಧಾರದಲ್ಲಿ 18 ಮಂದಿ ವಿರುದ್ಧ ಮೊಕ್ಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ತಿಳಿಸಿದರು.

ಭಾನುವಾರ ಕೊಪ್ಪಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾ ತನಾಡಿ, ‘ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕುಕ್ಕುಡಿಗೆ ರವೀಂದ್ರ ಸೇರಿದಂತೆ 6 ಮಂದಿ ಬಿಜೆಪಿ ಕಚೇರಿಗೆ ನುಗ್ಗಿ ತನ್ನ ಮೇಲೆ ಹಲ್ಲೆ ಮಾಡಿ ಕೊಲೆಗೆ ಪ್ರಯತ್ನಿಸಿ, ಚಿನ್ನದ ಸರ ಅಪಹರಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಾಕೇಶ್ ಶೆಟ್ಟಿ ದೂರು ನೀಡಿದ್ದಾರೆ’ ಎಂದರು.

ಎಂದು ಕಾಂಗ್ರೆಸ್ ಕಾರ್ಯಕರ್ತ ಚೇತನ್ ದೂರು ನೀಡಿದ್ದಾರೆ. ‘ಕಾಂಗ್ರೆಸ್ ಕಾರ್ಯಕರ್ತ ಚೇತನ್ ಸೇರಿದಂತೆ 5 ಮಂದಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಬಿಜೆಪಿ ಕಾರ್ಯಕರ್ತ ಇತಿಹಾಸ್ ದೂರು ನೀಡಿದ್ದಾರೆ. ಗಲಾಟೆ ನಿಯಂತ್ರಿಸುವ ಕರ್ತವ್ಯದಲ್ಲಿದ್ದ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ದೂರು ನೀಡಿದ್ದಾರೆ’ ಎಂದರು.

‘ಈ ಎಲ್ಲ ದೂರುಗಳ ಬಗ್ಗೆ ಕೂಲಂಕಷ ಪರಿಶೀಲನೆಗಾಗಿ ಪ್ರತ್ಯೇಕ ತನಿಖಾ ತಂಡ ರಚಿಸಿದ್ದು, ಸತ್ಯಾಸತ್ಯತೆ ಆಧರಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಭಾಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಚುನಾವಣೆಯನ್ನು ಗಂಭೀ ರವಾಗಿ ಪರಿಗಣಿಸುತ್ತಿದ್ದು, ಚಿಕ್ಕ ಚಿಕ್ಕ ವಿಷಯಗಳನ್ನೂ ದೊಡ್ಡದಾಗಿ ಬಿಂಬಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಒಮ್ಮೊಮ್ಮೆ ಕಾರ್ಯಕರ್ತರು ನಾಯಕರ ನಿಯಂತ್ರಣಕ್ಕೂ ಸಿಗದೆ ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಇಂತ ಹದ್ದಕ್ಕೆ ಅವಕಾಶ ನೀಡದಂತೆ ಮನವಿ ಮಾಡಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT