ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಗ್ಗಡೆ- ಪಣಿಕ ಸಮಾಜದಿಂದ ಧರಣಿ

Last Updated 27 ಡಿಸೆಂಬರ್ 2017, 7:19 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕು ರಚನೆಗೆ ಒತ್ತಾಯಿಸಿ 56 ದಿನಗಳಿಂದ ನಡೆಯುತ್ತಿರುವ ಹೋರಾಟದಲ್ಲಿ ಮಂಗಳವಾರ ಕೊಡಗು ಹೆಗ್ಗಡೆ ಸಮಾಜ, ಅಖಿಲ ಕೊಡಗು ಪಣಿಕ ಸಮಾಜ, ಕಿರುಗೂರು, ಬೀಟಿವಾಡ, ಮತ್ತೂರಿನ ಆಯಿರ ಬಿಲ್ಲಪ್ಪ, ಕುಟ್ಟಿಚಾತ, ಚಾಮುಂಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

2001ರಿಂದ ಪೊನ್ನಂಪೇಟೆ ತಾಲ್ಲೂಕು ರಚನೆಗೆ ಹೋರಾಟ ನಡೆಸುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ತಾಳುತ್ತಾ ಬರುತ್ತಿದೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಘೋಷಿಸಿದರು.

ಬಸ್ ನಿಲ್ದಾಣದಿಂದ ಧರಣಿ ನಡೆಯುವ ಸ್ಥಳ ಗಾಂಧಿಮಂಟಪದವರೆಗೆ ಮೆರವಣಿಗೆ ನಡೆಸಿ ನ್ಯಾಯಕ್ಕಾಗಿ ಘೋಷಣೆ ಕೂಗಿದರು. ಮುಖ್ಯಮಂತ್ರಿ ಕೂಡಲೆ ತಾಲ್ಲೂಕು ರಚನೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಕೊರಕುಟ್ಟೀರ ಸರಾ ಚಂಗಪ್ಪ, ಸುಬ್ರಮಣಿ, ಪೊಕ್ಕಳಿಚಂಡ ಬೇಬಿ ನಂಜಪ್ಪ, ಗಿರೀಶ್, ಅಪ್ಪಣ್ಣ, ನಾಗರಿಕ ವೇದಿಕೆ ಅಧ್ಯಕ್ಷ ಪಿ.ಬಿ.ಪೂಣಚ್ಚ, ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ, ಸದಸ್ಯ ಐನಂಡ ಬೋಪಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಕುಶಾಲಪ್ಪ,
ಚೆಪ್ಪುಡೀರ ಸೋಮಯ್ಯ ಧರಣಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT