ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮಿಶ್ರ ಸರ್ಕಾರಕ್ಕಾಗಿ ಹವಣಿಸುವ ಜೆಡಿಎಸ್‌: ಟೀಕೆ

Last Updated 27 ಡಿಸೆಂಬರ್ 2017, 9:46 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರು ತೊಂದರೆ ಅನುಭವಿಸಲು ಜೆಡಿಎಸ್‌ ಧೋರಣೆ ಕಾರಣ ಎಂದು ಎಪಿಎಂಸಿ ನಿರ್ದೇಶಕ, ಕಾಂಗ್ರೆಸ್‌ ಮುಖಂಡ ಎಂ. ಶಂಕರ್‌ ಆರೋಪಿಸಿದರು. ತಾಲ್ಲೂಕಿನ ಸಾಸಲುಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಒಡೆತನಕ್ಕೆ ಗುತ್ತಿಗೆ ನೀಡಲಾಯಿತು. ಎರಡು ವರ್ಷಗಳಿಂದ ಈ ಕಾರ್ಖಾನೆಯ ಆಧುನೀಕರಣ ಕಾಮಗಾರಿ ನಡೆಯುತ್ತಿದೆ. ಒಂದು ವರ್ಷದಲ್ಲಿ ಪೂರ್ಣಗೊಳ್ಳಬೇಕಾದ ಕಾಮಗಾರಿ ಇದುವರೆಗೂ ಪೂರ್ಣಗೊಂಡಿಲ್ಲ. ಇದರಿಂದ ಕಬ್ಬು ಬೆಳೆಗಾರರು ತೊಂದರೆ ಅನುಭವಿಸುವಂತಾಗಿದೆ’ ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಅನೇಕ ಜನಪರ ಯೋಜನೆಗಳ ಅನುಷ್ಠಾನದಿಂದ ಬಡಜನರಿಗೆ ಸಾಕಷ್ಟು ಅನುಕೂಲವಾಗಿದೆ ಎಂದರು. ಕಾಂಗ್ರೆಸ್‌ ಮುಖಂಡ ಸಿ.ಎಸ್‌.ಪುಟ್ಟೇಗೌಡ ಮಾತನಾಡಿ, ‘ಕಾಂಗ್ರೆಸ್‌ ಮತ್ತು ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಯತ್ನಿಸುತ್ತಿವೆ.

ಆದರೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು, ಈ ಎರಡೂ ಪಕ್ಷಗಳು 100ರ ಗಡಿ ದಾಟಬಾರದು ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಅವರ ಕುಟುಂಬದ ಆಸ್ತಿ ರಕ್ಷಣೆ. ಮಕ್ಕಳಿಗೆ ಅಧಿಕಾರ ಸಿಗಲಿ ಎಂಬ ಕಾರಣದಿಂದ ಸಮ್ಮಿಶ್ರ ಸರ್ಕಾರ ಬರಬೇಕೆಂದು ಹವಣಿಸುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್‌ ಮುಖಂಡರಾದ ಸಿ.ಎಸ್‌. ಜಯರಾಂ, ಎಂ.ಎಸ್‌. ಮಂಜುನಾಥ್‌, ಸುರೇಶ್‌, ಶಿವರಾಂ, ಸಿ.ಎಸ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT