ಮೆಲ್ಲಹಳ್ಳಿ: ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು

ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಅರ್ಜಿ

ಗೋಹತ್ಯೆ ನಿಷೇಧಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಬರೆದಿರುವ ಅರ್ಜಿಗೆ ಪೋಷಕರಿಂದ ಸಹಿಮಾಡಿಸಿಕೊಂಡು ಬರುವಂತೆ ಸೂಚಿಸಿ ತಾಲ್ಲೂಕಿನ ಮೆಳ್ಳಹಳ್ಳಿ ಗೇಟ್ ಬಳಿ ಇರುವ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಈಚೆಗೆ ವಿತರಿಸಿರುವ ಕ್ರಮವನ್ನು ಖಂಡಿಸಿ ಮುಖ್ಯಶಿಕ್ಷಕ ಹಾಗೂ ಸಹಶಿಕ್ಷಕರೊಬ್ಬರನ್ನು ಪೋಷಕರು ಬುಧವಾರ ತರಾಟೆಗೆ ತೆಗೆದುಕೊಂಡರು.

ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಅರ್ಜಿ

ಯಳಂದೂರು: ಗೋಹತ್ಯೆ ನಿಷೇಧಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಬರೆದಿರುವ ಅರ್ಜಿಗೆ ಪೋಷಕರಿಂದ ಸಹಿಮಾಡಿಸಿಕೊಂಡು ಬರುವಂತೆ ಸೂಚಿಸಿ ತಾಲ್ಲೂಕಿನ ಮೆಳ್ಳಹಳ್ಳಿ ಗೇಟ್ ಬಳಿ ಇರುವ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಈಚೆಗೆ ವಿತರಿಸಿರುವ ಕ್ರಮವನ್ನು ಖಂಡಿಸಿ ಮುಖ್ಯಶಿಕ್ಷಕ ಹಾಗೂ ಸಹಶಿಕ್ಷಕರೊಬ್ಬರನ್ನು ಪೋಷಕರು ಬುಧವಾರ ತರಾಟೆಗೆ ತೆಗೆದುಕೊಂಡರು.

ಕರ್ನಾಟಕದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಯಾಗಬೇಕು. ಗೋ ತಳಿಗಳ ಸಂವರ್ಧನೆಗೆ ಬೇಕಾದ ಎಲ್ಲ ಉಪಕ್ರಮಗಳನ್ನು ಕೈಗೊಳ್ಳಬೇಕು. ಇದನ್ನು ಮಾನ್ಯಮಾಡಲೇ ಬೇಕು ಎಂದು ಭಾರತೀಯ ಪ್ರಜೆಯಾಗಿ ಆಗ್ರಹಿಸುತ್ತೇನೆ ಎಂದು ಬರೆದಿರುವ ಅರ್ಜಿಯ ತಳಭಾಗದಲ್ಲಿ ನಮೂದಿಸಿರುವ ಸ್ಥಳದಲ್ಲಿ ವ್ಯಕ್ತಿಯ ಸಹಿ, ಹೆಸರು, ವಿಳಾಸವನ್ನು ಪೋಷಕರಿಂದ ತುಂಬಿಸಿಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿತ್ತು.

ವಿಷಯವನ್ನು ತಿಳಿದ ಪೋಷಕರು ಹಾಗೂ ದಲಿತ ಸಂಘರ್ಷ ಸಮಿತಿ ಸದಸ್ಯರು,ಪ್ರಗತಿಪರ ಸಂಘಟನೆಗಳ ಸದಸ್ಯರ ಜೊತೆಗೂಡಿ ಶಾಲೆಗೆ ಮುತ್ತಿಗೆ ಹಾಕಿ ಅರ್ಜಿ ವಿತರಿಸಿದ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕ ವಿರುದ್ಧ ಪ್ರತಿಭಟನೆ ನಡೆಸಿದರು.

ಸಂಸದ ಯರಿಯೂರು ರಾಜಣ್ಣ ಮಾತನಾಡಿ, ‘ರಾಜ್ಯದಲ್ಲಿ ಕೋಮು ಸೌಹಾರ್ದವನ್ನು ಕದಡುವ ನಿಟ್ಟಿನಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಗೋಹತ್ಯೆ ಕಾಯ್ದೆಯಂತಹ ಸೂಕ್ಷ್ಮ ವಿಷಯಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ಶಾಲಾ ವಾತಾವರಣ ವಾತಾವರಣ ಹಾಳು ಮಾಡುತ್ತಿದ್ದಾರೆ. ಅರ್ಜಿ ನೀಡಿದ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ವಹಸಿಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ‘ಶಿಕ್ಷಕರು ಅರ್ಜಿ ಬಗ್ಗೆ ಮಾಹಿತಿ ನೀಡಿಲ್ಲ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರವಹಿಸಲಾಗುವುದು. ಇಂತಹ ಅರ್ಜಿ ವಿತರಿಸಿರುವ ವ್ಯಕ್ತಿಗಳ ಬಗ್ಗೆ ತಾಲ್ಲೂಕಿನ ಎಲ್ಲ ಶಿಕ್ಷಕರಿಗೂ ಮಾಹಿತಿ ನೀಡಲಾಗುವುದು’ ಎಂದು ಭರವಸೆ ನೀಡಿದರು. ನಂತರ ಅರ್ಜಿಗಳನ್ನು ವಾಪಸ್ಸು ಪಡೆದು ಸುಡಲಾಯಿತು.

Comments
ಈ ವಿಭಾಗದಿಂದ ಇನ್ನಷ್ಟು
ಪ್ರಾಣಿಗಳ ಪ್ರತಿಮೆಗೆ ಇಲ್ಲ ರಕ್ಷಣೆ

ಯಳಂದೂರು
ಪ್ರಾಣಿಗಳ ಪ್ರತಿಮೆಗೆ ಇಲ್ಲ ರಕ್ಷಣೆ

26 Apr, 2018
ಬೆಟ್ಟದ ಹಾದಿಯಲ್ಲಿ ಗುಂಡಿಗಳದ್ದೇ ಪಾರುಪತ್ಯ!

ಕೊಳ್ಳೇಗಾಲ
ಬೆಟ್ಟದ ಹಾದಿಯಲ್ಲಿ ಗುಂಡಿಗಳದ್ದೇ ಪಾರುಪತ್ಯ!

26 Apr, 2018

ಚಾಮರಾಜನಗರ
ಚೆಕ್‍ಪೋಸ್ಟ್‌ಗಳಲ್ಲಿ ನಿಗಾವಹಿಸಿ

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಂತರರಾಜ್ಯ ಚೆಕ್‍ಪೋಸ್ಟ್‌ಗಳಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ನಿಗಾ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಸೂಚಿಸಿದರು. ...

26 Apr, 2018

ಚಾಮರಾಜನಗರ
ಜಿಲ್ಲೆಯಲ್ಲಿ ನಾಲ್ವರ ನಾಮಪತ್ರಗಳು ತಿರಸ್ಕೃತ

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ್ದ 53 ಅಭ್ಯರ್ಥಿಗಳ ಪೈಕಿ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಉಳಿದ 49 ಅಭ್ಯರ್ಥಿಗಳ ನಾಮಪತ್ರಗಳು...

26 Apr, 2018
ಮೂಲಸೌಲಭ್ಯ ವಂಚಿತ ಕೊಣನಹುಂಡಿ ಗ್ರಾಮ

ಸಂತೇಮರಹಳ್ಳಿ
ಮೂಲಸೌಲಭ್ಯ ವಂಚಿತ ಕೊಣನಹುಂಡಿ ಗ್ರಾಮ

25 Apr, 2018