ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿರೋಧ ಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಕಂಡರೆ ಭಯ’

Last Updated 28 ಡಿಸೆಂಬರ್ 2017, 7:30 IST
ಅಕ್ಷರ ಗಾತ್ರ

ಹೊಳಲ್ಕೆರೆ: ವಿರೋಧ ಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡರೆ ಭಯ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದರು.

ಪಟ್ಟಣದಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯದಣಿವರಿಯದೆ ಕೆಲಸ ಮಾಡುತ್ತಿರುವುದನ್ನು ನೋಡಿ ಬಿಜೆಪಿಯ ನಾಯಕರು ಭಯಬೀತರಾಗಿದ್ದಾರೆ. ರಾಜ್ಯದ ಎಲ್ಲಾ ಕಡೆ ನಡೆಯುತ್ತಿರುವ ನವಕರ್ನಾಟಕ ಯಾತ್ರೆಯ ಯಶಸ್ಸು ಕಂಡು ಕಂಗಾಲಾಗಿದ್ದಾರೆ. ಅಪಾರ ಜನ ಬೆಂಬಲದೊಂದಿಗೆ ಮುಂದಿನ ಬಾರಿಯೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ದಿಕ್ಕು ತೋಚದಂತಾಗಿದ್ದಾರೆ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ₹ 4 ಕೋಟಿ ವೆಚ್ಛದಲ್ಲಿ ನಿರ್ಮಿಸಿರುವ ಕನಕ ಭವನ ಉದ್ಘಾಟಿಸಿದ್ದಾರೆ. ಒಂಟಿಕಂಬದ ಮಠದ ಆವರಣದಲ್ಲಿ ₹ 4 ಕೋಟಿ ವೆಚ್ಛದಲ್ಲಿ ಬಸವ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ. ₹ 105 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ 22 ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ತುಂಬಿಸುವ ಯೋಜನೆಗೂ ಚಾಲನೆ ನೀಡಿದ್ದಾರೆ. ನನ್ನ ಅಧಿಕಾರದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಎಲ್ಲಾ ಜಾತಿ, ವರ್ಗದ ಜನರಿಗೆ ಅನುಕೂಲ ಆಗುವಂತೆ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ’ ಎಂದು ಆಂಜನೇಯ ಹೇಳಿದರು.

ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ‘12ನೇ ಶತಮಾನದಲ್ಲಿ ಬಸವಣ್ಣ ಶೋಷಣೆಮುಕ್ತ ಸಮಾಜಕ್ಕೆ ಪಣ ತೊಟ್ಟರೆ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿವುಮುಕ್ತ ಸಮಾಜ ನಿರ್ಮಿಸಲು ಹೊರಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಹೊಸ ರೂಪು ಕೊಟ್ಟ ಕೀರ್ತಿ ಸಚಿವ ಎಚ್.ಆಂಜನೇಯ ಅವರಿಗೆ ಸಲ್ಲುತ್ತದೆ. ಹಿಂದೆ ಬಸವಾದಿ ಶರಣರ ಕಾಲದಲ್ಲೂ ಸಾಮೂಹಿಕ ವಿವಾಹ ನಡೆಸುತ್ತಿದ್ದರು. ಸಚಿವರು ಪ್ರತಿವರ್ಷ ಸರಳ ವಿವಾಹ ನಡೆಸುವ ಮೂಲಕ ಅದ್ದೂರಿ, ಆಡಂಬರದ ವಿವಾಹಗಳಿಗೆ ಕಡಿವಾಣ ಹಾಕುತ್ತಿರುವುದು ಶ್ಲಾಘನೀಯ’ ಎಂದರು.

ಸಿದ್ದಯ್ಯನ ಕೋಟೆ ಮಠದ ಬಸವ ಲಿಂಗ ಸ್ವಾಮೀಜಿ, ನಿಜಗುಣಾನಂದ ಸ್ವಾಮೀಜಿ, ಮಾರ್ಕಂಡೇಯ ಮುನಿ ಸ್ವಾಮೀಜಿ, ಪುರುಷೋತ್ತಮಾನಂದ ಸ್ವಾಮೀಜಿ, ಶಿವಲಿಂಗಾನಂದ ಸ್ವಾಮೀಜಿ, ರಾಜನಹಳ್ಳಿ ಪ್ರಸನ್ನಾನಂದ ಸ್ವಾಮೀಜಿ, ವಿಶ್ವಕರ್ಮ ಮಠದ ಸ್ವಾಮೀಜಿ, ಷಡಕ್ಷರ ಮುನಿ ಸ್ವಾಮೀಜಿ, ಸಂಸದ ಬಿ.ಎನ್.ಚಂದ್ರಪ್ಪ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲ ಕೃಷ್ಣ, ಜಯಮ್ಮ ಬಾಲರಾಜ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಸವಿತಾ ಬಸವರಾಜು, ಹನುಮಲಿ ಷಣ್ಮುಖಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ, ಬಾಲುಪ್ರಕಾಶ್, ಮಂಜುನಾಥ ಗೊಪ್ಪೆ, ಫಾತ್ಯರಾಜನ್, ಒ.ಶಂಕರ್, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT