ವಿಜಯಪುರ

ಕಾಂಗ್ರೆಸ್‌ ಸಮಾವೇಶ , ಭರದ ಸಿದ್ಧತೆ

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿಂಭಾಗದಲ್ಲಿರುವ ಕ್ರೀಡಾ ಮೈದಾನದಲ್ಲಿ ಡಿಸೆಂಬರ್ 30 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಪೂರ್ವ ಸಿದ್ಧತೆಯನ್ನು ಮಾಡಲಾಗುತ್ತಿದೆ.

ವಿಜಯಪುರ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿಂಭಾಗದಲ್ಲಿರುವ ಕ್ರೀಡಾ ಮೈದಾನದಲ್ಲಿ ಡಿಸೆಂಬರ್ 30 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಪೂರ್ವ ಸಿದ್ಧತೆಯನ್ನು ಮಾಡಲಾಗುತ್ತಿದೆ.

ಕಾರ್ಯಕ್ರಮಕ್ಕೆ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ತೂಬಗೆರೆ ಬ್ಲಾಕ್, ದೇವನಹಳ್ಳಿ ಬ್ಲಾಕ್, ವಿಜಯಪುರ ಬ್ಲಾಕ್ ನಿಂದ 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸೇರುತ್ತಾರೆ ಎಂದು ಕಾಂಗ್ರೆಸ್ ನಾಯಕ ಕೆ.ವೆಂಕಟಸ್ವಾಮಿ ತಿಳಿಸಿದರು.

20 ಸಾವಿರಕ್ಕೂ ಹೆಚ್ಚು ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಿಂದಲೂ ಕಾರ್ಯಕರ್ತರು ಬರಲು 100 ಬಸ್ಸುಗಳು, 150 ಟಾಟಾ ಸುಮೋಗಳು ಸೇರಿದಂತೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದರು. 15 ಸಾವಿರ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ‌ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಪೊಲೀಸ್  ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಆಂಬುಲೇನ್ಸ್, ಕುಡಿಯುವ ನೀರಿನ ವ್ಯವಸ್ಥೆ, ಅಗ್ನಿಶಾಮಕ ವಾಹನಗಳು ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರತ್ಯೇಕವಾಗಿ ಸಭೆಗಳು : ಒಂದು ಕಡೆ ಕಾಂಗ್ರೆಸ್ ನಾಯಕರು, ಪ್ರತ್ಯೇಕವಾದ ಬಣಗಳಿಲ್ಲ ಎಲ್ಲರು ಒಗ್ಗಟ್ಟಿನಿಂದ ಸಮಾವೇಶದಲ್ಲಿ ಪಾಲ್ಗೊಂಡು, ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುವುದಷ್ಟೆ ಮುಖ್ಯಗುರಿಯಾಗಿದೆ ಎಂದು ಹೇಳುತ್ತಿದ್ದರೂ, ವಿಜಯಪುರ ಬ್ಲಾಕ್ ಕೆ.ಪಿ.ಸಿ.ಸಿ.ಸದಸ್ಯ ಬಿ.ಚೇತನ್ ಗೌಡ ಅವರ ನೇತೃತ್ವದಲ್ಲಿ ಪ್ರವಾಸಿಮಂದಿರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ, ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಬದ್ಧತೆಯಿಂದ ಕೆಲಸ ಮಾಡುವಂತೆ ಕರೆ ನೀಡಿದ್ದಾರೆ.

ಮತ್ತೊಂದು ಕೊಠಡಿಯಲ್ಲಿ ಸಭೆ ನಡೆಸಿದ ದೇವನಹಳ್ಳಿ ಬ್ಲಾಕ್ ಕೆ.ಪಿ.ಸಿ.ಸಿ. ಸದಸ್ಯ ವಿ.ಮಂಜುನಾಥ್ ನೇತೃತ್ವದಲ್ಲಿ ಸಭೆ ನಡೆಸಿ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಬೇಕು, ಯುವ ಘಟಕಗಳ ಪದಾಧಿಕಾರಿಗಳು, ಮಹಿಳಾ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿ, ಸಮಾವೇಶವನ್ನು ಯಶಸ್ವಿ ಮಾಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ಪ್ರವಾಸಿಮಂದಿರದ ಒಂದೇ ಆವರಣದಲ್ಲೆ ಎರಡು ಸಭೆಗಳನ್ನು ಪೂರ್ವಭಾವಿ ಸಭೆಗಳನ್ನು ನಡೆಸಿರುವುದು ಕಾರ್ಯಕರ್ತರಲ್ಲಿ ಗೊಂದಲವನ್ನುಂಟು ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಕೆ.ವೆಂಕಟಸ್ವಾಮಿ ಅವರು, ಒಂದು ಕೊಠಡಿಯಲ್ಲಿ ವಿಜಯಪುರ ನಗರ ಘಟಕದವರು ಸಭೆ ಮಾಡಿಕೊಂಡಿದ್ದಾರೆ. ಮತ್ತೊಂದು ಕೊಠಡಿಯಲ್ಲಿ ಹೋಬಳಿ ಘಟಕದವರು ಸಭೆ ಮಾಡಿಕೊಂಡಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯ ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಅವರಿಗೆ ಒಪ್ಪಿಸಿದ್ದೇವೆ ಎಂದರು.

ಮಾರ್ಗ ಬದಲಾವಣೆ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನರೇಶ್ ನಾಯಕ್ ಮಾತನಾಡಿ, ಡಿಸೆಂಬರ್ 30 ರಂದು ಸಮಾವೇಶದ ಅಂಗವಾಗಿ ಜನದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಕೋಲಾರದ ಕಡೆಯಿಂದ ಬೆಂಗಳೂರಿನ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳನ್ನು ಬೈಪಾಸ್ ರಸ್ತೆಯ ಮೂಲಕ ತೆರಳುವ ವ್ಯವಸ್ಥೆ ಮಾಡಲಾಗಿದೆ. ಶಿಡ್ಲಘಟ್ಟದ ಕಡೆಯಿಂದ ದೇವನಹಳ್ಳಿಗೆ ಹೋಗುವ ವಾಹನಗಳು ಶಿಡ್ಲಘಟ್ಟ ಕ್ರಾಸ್ ಮೂಲಕ ತೆರಳಲು ಅವಕಾಶ ಮಾಡಿದೆ, ಆಂಬುಲೇನ್ಸ್ ಗಳ ಸಂಚಾರಕ್ಕೆ ಯಾವುದೇ ನಿರ್ಭಂಧವಿಲ್ಲ ನಾಗರಿಕರು ಸಹಕಾರ ನೀಡಬೇಕು ಸಮಾವೇಶ ಮುಕ್ತಾಯವಾಗುವವರೆಗೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

 

Comments
ಈ ವಿಭಾಗದಿಂದ ಇನ್ನಷ್ಟು
ಮುತ್ಯಾಲಮ್ಮ ಜಾತ್ರೆಯಲ್ಲಿ ಭಾಗವಹಿಸದಿರಲು ನಿರ್ಧಾರ

ದೊಡ್ಡಬಳ್ಳಾಪುರ
ಮುತ್ಯಾಲಮ್ಮ ಜಾತ್ರೆಯಲ್ಲಿ ಭಾಗವಹಿಸದಿರಲು ನಿರ್ಧಾರ

27 Mar, 2018
ಅನಾವರಣಗೊಂಡ ಸಾಂಸ್ಕೃತಿಕ ವೈವಿಧ್ಯ

ಆನೇಕಲ್‌
ಅನಾವರಣಗೊಂಡ ಸಾಂಸ್ಕೃತಿಕ ವೈವಿಧ್ಯ

27 Mar, 2018
ಅಭಿವೃದ್ಧಿಯಲ್ಲಿ ಹಿಂದುಳಿದ ವಿಜಯಪುರ

ವಿಜಯಪುರ
ಅಭಿವೃದ್ಧಿಯಲ್ಲಿ ಹಿಂದುಳಿದ ವಿಜಯಪುರ

27 Mar, 2018

ವಿಜಯಪುರ
ಕುಡಿಯುವ ನೀರಿನ ಘಟಕ ಸ್ಥಾಪಿಸಲು ಮನವಿ

ಪ್ರತಿ ವಾರ್ಡಿಗೊಂದರಂತೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು...

24 Mar, 2018
₹4.98 ಕೋಟಿ ವೆಚ್ಚದಲ್ಲಿ ನಗರಸಭೆ ಕಚೇರಿ

ದೊಡ್ಡಬಳ್ಳಾಪುರ
₹4.98 ಕೋಟಿ ವೆಚ್ಚದಲ್ಲಿ ನಗರಸಭೆ ಕಚೇರಿ

24 Mar, 2018