ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌: ₹ 1 ಲಕ್ಷ ಕೋಟಿ ವಹಿವಾಟು

Last Updated 29 ಡಿಸೆಂಬರ್ 2017, 19:39 IST
ಅಕ್ಷರ ಗಾತ್ರ

ಮಂಗಳೂರು: ಖಾಸಗಿ ವಲಯದ ಕರ್ಣಾಟಕ ಬ್ಯಾಂಕ್‌ ₹1 ಲಕ್ಷ ಕೋಟಿ ವ್ಯವಹಾರವನ್ನು ದಾಖಲಿಸಿದೆ.

ಆರ್ಥಿಕ ವ್ಯವಹಾರದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್‌. ಅವರು, ‘93 ವರ್ಷಗಳ ಹಿಂದೆ ಕೇವಲ ₹11,580 ಬಂಡವಾಳದೊಂದಿಗೆ ಆರಂಭವಾದ ಬ್ಯಾಂಕ್‌, ಗ್ರಾಹಕರಿಗೆ ನಿರಂತರ ಉತ್ತಮ ಸೇವೆ ಒದಗಿಸುವ ಮೂಲಕ ಹಂತಹಂತವಾಗಿ ಈ ಮಟ್ಟಕ್ಕೆ ಬೆಳೆದಿದೆ’ ಎಂದು ತಿಳಿಸಿದ್ದಾರೆ.

‘ಬದಲಾಗುತ್ತಿರುವ ಕಾಲಘಟ್ಟದಲ್ಲಿಯೂ ಅಂತಃಸತ್ವವನ್ನು ಗಟ್ಟಿಗೊಳಿಸುವುದರ ಜತೆಗೆ ಮೂಲ ಆಶಯಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದೆ. ಈ ಹೊಸ ದಾಖಲೆಯು ಬ್ಯಾಂಕಿನ ನವ ಮನ್ವಂತರಕ್ಕೆ ಭಾಷ್ಯ ಬರೆಯಲಿದೆ. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕ ಸ್ನೇಹಿಯಾಗಿ ಬೆಳೆದಿರುವ ಬ್ಯಾಂಕ್‌, 2020ರ ವೇಳೆಗೆ ದೇಶದ ಜನಸಂಖ್ಯೆಯ ಶೇ 1 ರಷ್ಟು ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆ ಒದಗಿಸುವ ಗುರಿ ಹೊಂದಿದೆ. 1.30 ಕೋಟಿ ಗ್ರಾಹಕರನ್ನು ಹೊಂದುವುದು ಬ್ಯಾಂಕಿನ ಗುರಿಯಾಗಿದೆ’ ಎಂದು ಹೇಳಿದ್ದಾರೆ.

ಈ ಯಶಸ್ಸಿಗೆ ಸಹಕರಿಸಿದ ಗ್ರಾಹಕರು, ಷೇರುದಾರರು, ಆಡಳಿತ ಮಂಡಳಿ, ನೌಕರರ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT